ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವೈಮಾನಿಕ ಸಮೀಕ್ಷೆ : ಕಲಬುರಗಿ-ಬೀದರ್ ಗೆ ಸಿಎಂ ಸಿದ್ದರಾಮಯ್ಯ ಭೇಟಿ

By Ramesh
|
Google Oneindia Kannada News

ಕಲಬುರಗಿ,ಸೆ.27 : ಭಾರಿ ಮಳೆಯಿಂದ ತತ್ತರಿಸಿರುವ ಬೀದರ್‌ ಮತ್ತು ಕಲಬುರಗಿ ಜಿಲ್ಲೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿ ನೀಡಲಿದ್ದಾರೆ. ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಇಂದು(ಸೆ.27) ಮಧ್ಯಾಹ್ನ 12.15ಕ್ಕೆ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ಮೂಲಕ ಬೀದರ್ ನ ಏರ್‍ ಬೇಸ್ ಗೆ ತೆರಳಲಿದ್ದಾರೆ. ಅಲ್ಲಿಂದ ಮಧ್ಯಾಹ್ನ 2 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ವೈಮಾನಿಕ ಸಮೀಕ್ಷೆ ನಡೆಸುವರು. [ಕಲಬುರಗಿಯಲ್ಲಿ ಜಲಪ್ರಳಯ : 5 ಜನ ರೈತರ ಪ್ರಾಣ ರಕ್ಷಣೆ!]

Siddu

ನಂತರ ಭಾಲ್ಕಿ ತಾಲೂಕಿನ ಸಾಯಿಗಾಂವ ಗ್ರಾಮದ ಹೆಲಿಪ್ಯಾಡಿಗೆ ಆಗಮಿಸಿ ಮಧ್ಯಾಹ್ನ 2.30 ಗಂಟೆಗೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು.

ಮ. 3ಗಂಟೆಗೆ ಸಾಯಿಗಾಂವ ಹೆಲಿಪ್ಯಾಡಿನಿಂದ ಹೊರಟು ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿಗೊಳಗಾಗದ ಪ್ರದೇಶಗಳಿಗೆ ಭೇಟಿ ಪರೀಶಿಲನೆ ನಡೆಸಲಿದ್ದಾರೆ.

Siddaramaiah to visit flood-hit areas in Bidar and Kalaburagi

ಸಂಜೆ 4.15ಗಂಟೆಗೆ ಕೋರವಾರ ಗ್ರಾಮದ ಜವಾಹರ ನವೋದಯ ವಿದ್ಯಾಲಯದ ಹೆಲಿಪ್ಯಾಡಿನಿಂದ ಹೊರಟು ಸಂಜೆ 5 ಗಂಟೆಗೆ ಬೀದರ್ ನ ಏರ್‍ ಬೇಸ್ ನಲ್ಲಿ ಸಂಜೆ 5.30 ರಿಂದ 7 ಗಂಟೆಯವರೆಗೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ 7.30 ಗಂಟೆಗೆ ಬೀದರ್ ಏರ್ ಬೇಸ್ ನಿಂದ ವಿಶೇಷ ವಿಮಾನದ ಮೂಲಕ ಪುನಃ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

English summary
Chief Minister Siddaramaiah will visit, along with senior officials and ministerial colleagues,the flood-hit areas of Bidar and Kalaburagi districts on Tuesday to take stock of the ravage caused by heavy rains
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X