ರಸ್ತೆ ಬದಿ ನಿಂತಿದ್ದ ಕಂಟೈನರ್‌ಗೆ ಕಾರು ಡಿಕ್ಕಿ, ಸಿಂದಗಿ ಪೊಲೀಸ್ ಅಧಿಕಾರಿ ಸಾವು
ಕಲಬುರಗಿ, ಡಿ.07 : ರಸ್ತೆಬದಿ ನಿಂತಿದ್ದ ಕಂಟೈನರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಜೀವರ್ಗಿ ತಾಲೂಕಿನ ಸೊನ್ನ ಕ್ರಾಸ್ ಬಳಿ ಬುಧವಾರ ನಡೆದಿದೆ.
ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರನ್ನು ಸಿಂದಗಿ ಪಿಎಸ್ ಸರ್ಕಲ್ ಇನ್ಸ್ ಪೆಕ್ಟರ್ ರವಿ (43) ಮತ್ತು ಅವರ ಪತ್ನಿ ಮಧು (40) ಎಂದು ಗುರುತಿಸಲಾಗಿದೆ.

ಸಿಂದಗಿಯಿಂದ ಕಲಬುರಗಿ ನಗರಕ್ಕೆ ಹೊರಟಿದ್ದ ಮಾರುತಿ ಸ್ವೀಫ್ಟ್ ಡಿಸೈರ್ ಕಾರು ರಸ್ತೆ ಬದಿ ನಿಂತಿದ್ದ ಕಂಟೈನರ್‌ಗೆ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಸಿಪಿಐ ರವಿ ಉಕ್ಕುಂದ ದಂಪತಿ ಆಗಮಿಸುತ್ತಿದ್ದರು. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ನೆಲೋಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ದುರಂತದ ಕುರಿತು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
"ಪ್ರತಿನಿತ್ಯ ಟ್ರಾಫಿಕ್ ಅಪಘಾತಗಳಲ್ಲಿ ಅಮೂಲ್ಯ ಜೀವಗಳು ಬಲಿಯಾಗುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಸಿಂದಗಿ ಪೊಲೀಸ್ ಇನ್ಸ್‌ಪೆಕ್ಟರ್ ರವಿ ಮತ್ತು ಶ್ರೀಮತಿ ರವಿ ಅವರಿಗೆ ಶ್ರದ್ಧಾಂಜಲಿ. ರವಿ ನನ್ನ ಜೊತೆ ಪಿಎಸ್‌ಐ ಆಗಿ ಕೆಲಸ ಮಾಡುತ್ತಿದ್ದರು. ದಯವಿಟ್ಟು ಅಸುರಕ್ಷಿತ ರೀತಿಯಲ್ಲಿ ವಾಹನ ಚಲಾಯಿಸಿ ನಿಮ್ಮ ಜೀವನವನ್ನು ಕೊನೆಗೊಳಿಸಿಕೊಳ್ಳಬೇಡಿ" ಎಂದು ಟ್ವೀಟ್ ಮಾಡಿದ್ದಾರೆ.
It’s really sad to see precious lives being lost in traffic accidents everyday
— alok kumar (@alokkumar6994) December 7, 2022
RIP Sindagi PI Ravi and Mrs Ravi
Ravi worked with me as PSI
Plz don’t shorten your life by driving in unsafe manner https://t.co/pnfpAs1IFt












Click it and Unblock the Notifications