ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲಬುರಗಿಯಲ್ಲಿ ಸದ್ಯಕ್ಕೆ ಕೊರೊನಾ ಪರಿಸ್ಥಿತಿ ಹೇಗಿದೆ?

By ಕಲಬುರಗಿ ಪ್ರತಿನಿಧಿ
|
Google Oneindia Kannada News

ಕಲಬುರಗಿ, ಮಾರ್ಚ್ 24: ಕಲಬುರಗಿ ಜಿಲ್ಲೆಯಿಂದ ಇದುವರೆಗೆ ಕೋವಿಡ್-19 ಪರೀಕ್ಷೆಗೆ ಮೃತ ವಯೋವೃದ್ಧ ಸೇರಿದಂತೆ ಒಟ್ಟಾರೆ 36 ಮಾದರಿಗಳನ್ನು ಕಳುಹಿಸಲಾಗಿತ್ತು. ಇದರಲ್ಲಿ ಮಾರ್ಚ್ 23ರ ಮಧ್ಯಾಹ್ನ 2 ಗಂಟೆವರೆಗೆ 24 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೋಮವಾರ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ, 36 ಪ್ರಕರಣಗಳ ಪೈಕಿ 3ರಲ್ಲಿ ಪಾಸಿಟಿವ್ ಬಂದಿದೆ. ಎರಡು ಪ್ರಕರಣಗಳಲ್ಲಿ ತಾಂತ್ರಿಕ ಕಾರಣದಿಂದ ಪರೀಕ್ಷೆಯಾಗಿರುವುದಿಲ್ಲ. ಇನ್ನೂ 7 ಪ್ರಕರಣಗಳಲ್ಲಿ ವೈದ್ಯಕೀಯ ಪರೀಕ್ಷೆಯ ವರದಿ ಬರಬೇಕಿದೆ ಎಂದು ತಿಳಿಸಿದ್ದಾರೆ.

ಲಾಕ್ ಡೌನ್ ಮಧ್ಯೆಯೂ ತರಕಾರಿ ಕೊಳ್ಳಲು ಮುಗಿಬಿದ್ದ ಕೋಟೆನಾಡಿನ ಜನಲಾಕ್ ಡೌನ್ ಮಧ್ಯೆಯೂ ತರಕಾರಿ ಕೊಳ್ಳಲು ಮುಗಿಬಿದ್ದ ಕೋಟೆನಾಡಿನ ಜನ

ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಹೊಂದಿದ ವ್ಯಕ್ತಿಗಳೊಂದಿಗೆ ನೇರ ಸಂಪರ್ಕ ಹೊಂದಿರುವ 99 ಜನ ಹಾಗೂ ಎರಡನೇ ಸಂಪರ್ಕ ಹೊಂದಿರುವ 388 ಜನರನ್ನು ಗುರುತಿಸಲಾಗಿದೆ. ಇದಲ್ಲದೆ ವಿದೇಶದಿಂದ ಆಗಮಿಸಿದ 408 ಜನರನ್ನು ಸಹ ಪತ್ತೆ ಹಚ್ಚಲಾಗಿ ಒಟ್ಟಾರೆ ಇದುವರೆಗೆ 876 ಜನರನ್ನು ಹೋಂ ಕ್ವಾರಂಟೈನ್ ‍ನಲ್ಲಿಟ್ಟು ಎಲ್ಲರ ಆರೋಗ್ಯದ ಮೇಲೆ ನಿಗಾ ವಹಿಸಿದೆ. ಇನ್ನೂ 6 ಜನರನ್ನು ಐಸೋಲೇಟೆಡ್ ವಾರ್ಡ್ ‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಂಕಿ-ಸಂಖ್ಯೆಯೊಂದಿಗೆ ವಿವರ ನೀಡಲಾಗಿದೆ.

Situation Of Coronavirus Lockdown In Kalaburagi

7722 ಮನೆ ಸರ್ವೇ, ಸ್ಕ್ರೀನಿಂಗ್: ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಪಾಸಿಟಿವ್ (ಮೃತ ವ್ಯಕ್ತಿ ಸೇರಿದಂತೆ) ದೃಢವಾದ ಹಿನ್ನೆಲೆಯಲ್ಲಿ ಕಲಬುರಗಿ ನಗರದ ವಾರ್ಡ್ ಸಂಖ್ಯೆ 30 ಮತ್ತು 14 ಎರಡು ಕಂಟೇನ್ ‍ಮೆಂಟ್ ಝೋನ್ ಎಂದು ಗುರುತಿಸಿ ಪಾಸಿಟಿವ್ ಪ್ರಕರಣದ ರೋಗಿಗಳ ಮನೆ ಸುತ್ತಮುತ್ತ ಒಟ್ಟಾರೆ 7722 ಮನೆಗಳನ್ನು ಸರ್ವೆ ಮಾಡಿ ಅಲ್ಲಿ ಮುಂಜಾಗೃತಾ ಕ್ರಮವಾಗಿ ಸ್ಕ್ರೀನಿಂಗ್, ಸ್ಯಾನಿಟೈಜೇಷನ್ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.

Coronavirus in Karnataka Live Updates : ಲಾಕ್ ಡೌನ್ ಉಲ್ಲಂಘಿಸಿದವರಿಗೆ ಸಿಎಂ ಎಚ್ಚರಿಕೆCoronavirus in Karnataka Live Updates : ಲಾಕ್ ಡೌನ್ ಉಲ್ಲಂಘಿಸಿದವರಿಗೆ ಸಿಎಂ ಎಚ್ಚರಿಕೆ

ಕೊರೊನಾ ಸಹಾಯವಾಣಿ ಸಂಖ್ಯೆ: 08472-278648/ 278698 / 278604/ 278677. ಡಿ.ಎಸ್.ಯು ಹೆಲ್ಪ್ ‍ಲೈನ್ ಸಂಖ್ಯೆ: 08472-268648 ಗೆ ಕರೆ ಮಾಡಲು ತಿಳಿಸಿದ್ದಾರೆ.

English summary
There are totally 36 samples collected for coronavirus test said dc sharath in kalaburag
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X