ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲಬುರಗಿ : ಜೆಡಿಎಸ್‌ ಸೇರಿದ ಬಸವರಾಜ ದಿಗ್ಗಾಯಿ

|
Google Oneindia Kannada News

ಕಲಬುರಗಿ, ಫೆಬ್ರವರಿ 19 : ಸಾಮಾಜಿಕ ಕಾರ್ಯಕರ್ತ ಬಸವರಾಜ ದಿಗ್ಗಾಯಿ ಜೆಡಿಎಸ್ ಸೇರಿದ್ದಾರೆ. ಕಲಬುರಗಿ ದಕ್ಷಿಣ ಕ್ಷೇತ್ರದಿಂದ ಅವರು 2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಬಸವರಾಜ ದಿಗ್ಗಾಯಿ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಕಲಬುರಗಿಯಲ್ಲಿ ನಡೆದ ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಅವರು ಪಕ್ಷ ಸೇರಬೇಕಿತ್ತು. ಆದರೆ, ಕೊನೆ ಕ್ಷಣದಲ್ಲಿ ಅದು ರದ್ದಾಗಿತ್ತು.

ಕರ್ನಾಟಕ ವಿಧಾನಸಭೆ ಚುನಾವಣೆ : ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಕರ್ನಾಟಕ ವಿಧಾನಸಭೆ ಚುನಾವಣೆ : ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ

ಈಗ ಅವರು ಬೆಂಬಲಿಗರ ಜೊತೆ ಜೆಡಿಎಸ್ ಸೇರಿದ್ದಾರೆ. ಪಕ್ಷ ಬಿಡುಗಡೆ ಮಾಡಿರುವ 126 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಬಸವರಾಜ ದಿಗ್ಗಾಯಿ ಅವರಿಗೆ ಕಲಬುರಗಿ ದಕ್ಷಿಣ ಕ್ಷೇತ್ರದ ಟಿಕೆಟ್ ನೀಡಲಾಗಿದೆ.

Social activist Basavaraj Diggavi joins JDS

ಹಲವು ದಿನಗಳಿಂದ ಬಸವರಾಜ ದಿಗ್ಗಾಯಿ ಅವರು ಯಾವ ಪಕ್ಷ ಸೇರಲಿದ್ದಾರೆ?, ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆಯೇ? ಎಂದು ಚರ್ಚೆ ನಡೆಯುತ್ತಿತ್ತು.

ವಿಕಾಸಪರ್ವ ಯಶಸ್ಸಿನ ನಂತರ ಜೆಡಿಎಸ್ ಮುಂದಿದೆ ಸವಾಲುಗಳು!ವಿಕಾಸಪರ್ವ ಯಶಸ್ಸಿನ ನಂತರ ಜೆಡಿಎಸ್ ಮುಂದಿದೆ ಸವಾಲುಗಳು!

ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದ ಬಸವರಾಜ ದಿಗ್ಗಾಯಿ ಅವರು ಪಕ್ಷ ಸೇರುವ ಬಗ್ಗೆ ಮಾತುಕತೆ ನಡೆಸಿದ್ದರು. ಸೋಮವಾರ ಅಧಿಕೃತವಾಗಿ ಪಕ್ಷ ಸೇರಿದ್ದಾರೆ.

ಇಂದು ಜೇವರ್ಗಿ ರಸ್ತೆಯ ಕೋಟನೂರ ಮಠದಿಂದ ಸಾರ್ವಜನಿಕ ಉದ್ಯಾನದ ತನಕ ನೂರಾರು ಬೆಂಬಲಿಗರ ಜೊತೆ ಪಾದಯಾತ್ರೆ ನಡೆಸಿದ ಬಸವರಾಜ ದಿಗ್ಗಾಯಿ ಅವರು, ಜೆಡಿಎಸ್ ಕಚೇರಿಗೆ ಭೇಟಿ ನೀಡಿ ಪಕ್ಷ ಸೇರ್ಪಡೆಗೊಂಡರು.

English summary
Kalaburagi based social activist Basavaraj Diggavi joined JD (S). Party announced his name for Kalaburagi south assembly constituency for 2018 assembly elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X