Get Updates
Get notified of breaking news, exclusive insights, and must-see stories!

ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ : ಕೆ.ಎಸ್.ಈಶ್ವರಪ್ಪ

ಕಲಬುರಗಿ, ಮೇ 14 : 'ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್‌ ಜೊತೆ ಸಂಪರ್ಕದಲ್ಲಿದ್ದಾರೆ. ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿರುವುದು ನಿಜ' ಎಂದು ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದರು.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಕಲಬುರಗಿ ಜಿಲ್ಲೆಯ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕೆ.ಎಸ್.ಈಶ್ವರಪ್ಪ ಪ್ರಚಾರ ನಡೆಸುತ್ತಿದ್ದಾರೆ. ಚಿಂಚೋಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎಸ್.ಈಶ್ವರಪ್ಪ ಅವರು, 'ಕಾಂಗ್ರೆಸ್ ಶಾಸಕರನ್ನು ನಮ್ಮ ಪಕ್ಷಕ್ಕೆ ಕರೆತರಲು ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ' ಎಂದರು.

'ಕಾಂಗ್ರೆಸ್ ಶಾಸಕರು ಖರೀದಿಯ ವಸ್ತುಗಳೇ? ಮೈತ್ರಿ ಸರ್ಕಾರದ ಮೇಲೆ ಅಸಮಾಧಾನ ಇರುವ ಕಾಂಗ್ರೆಸ್‌ನ ಕೆಲವು ಶಾಸಕರು ಬಿಜೆಪಿಗೆ ಬರಲು ಒಪ್ಪಿದ್ದಾರೆ. ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದ ರಾಜಕೀಯದಲ್ಲಿ ಧೃವೀಕರಣವಾಗುತ್ತದೆ' ಎಂದು ಈಶ್ವರಪ್ಪ ಭವಿಷ್ಯ ನುಡಿದರು.

ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರುತ್ತಾರೆ ಎಂದು ಪಕ್ಷದ ನಾಯಕರು ಹೇಳುತ್ತಿದ್ದಾರೆ. ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುತ್ತಾರೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ.

20 ಶಾಸಕರು ಪಕ್ಷ ಸೇರುವರು

20 ಶಾಸಕರು ಪಕ್ಷ ಸೇರುವರು

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, 'ಮೈತ್ರಿ ಸರ್ಕಾರದ 20 ಶಾಸಕರು ಯಾವಾಗ ಬೇಕಾದರೂ ರಾಜೀನಾಮೆ ನೀಡಬಹುದು. ಶಾಸಕರಿಗೆ ಸರ್ಕಾರದ ಬಗ್ಗೆ ಉತ್ತಮ ಅಭಿಪ್ರಾಯವಿಲ್ಲ. ಅವರೆಲ್ಲಾ ಯಾವುದೇ ಕ್ಷಣದಲ್ಲಿ ಏನು ನಿರ್ಧಾರವನ್ನು ಬೇಕಾದರೂ ತೆಗೆದುಕೊಳ್ಳಬಹುದು' ಎಂದು ಹೇಳಿದ್ದರು.

ಸಿದ್ದರಾಮಯ್ಯ ಟ್ವೀಟ್

ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಈ ಕುರಿತು ಟ್ವೀಟ್ ಮಾಡಿದ್ದರು. 'ಬಿಜೆಪಿಯವರು ಕಸರತ್ತು ನಡೆಸಿ ಉಮೇಶ್ ಜಾಧವ್ ಅವರನ್ನು ಸೆಳೆದುಕೊಂಡಿರಬಹುದು. ಆದರೆ, ಉಳಿದ ಯಾವೊಬ್ಬ ಶಾಸಕನು ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ' ಎಂದು ಟ್ವೀಟ್ ಮಾಡಿದ್ದರು.

ಬಿಜೆಪಿ ಶಾಸಕರೇ ಕಾಂಗ್ರೆಸ್ ಸೇರುತ್ತಾರೆ

ಬಿಜೆಪಿ ಶಾಸಕರೇ ಕಾಂಗ್ರೆಸ್ ಸೇರುತ್ತಾರೆ

ಕಲಬುರಗಿಯಲ್ಲಿ ಸೋಮವಾರ ಮಾತನಾಡಿದ್ದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು, 'ಈ ತನಕ ರಾಜ್ಯದ ಮೈತ್ರಿ ಸರ್ಕಾರಕ್ಕೆ ಏನೂ ಆಗಿಲ್ಲ. ಸಮ್ಮಿಶ್ರ ಸರ್ಕಾರ ಐದು ವರ್ಷಗಳನ್ನು ಪೂರೈಸಲಿದೆ. ಮೇ 23ರ ಬಳಿಕ ಬಿಜೆಪಿಯವರೇ ಕಾಂಗ್ರೆಸ್ ಸೇರಲಿದ್ದಾರೆ. ಕಾಂಗ್ರೆಸ್‌ನ ಯಾವ ಶಾಸಕರು ಬಿಜೆಪಿಗೆ ಹೋಗುವುದಿಲ್ಲ' ಎಂದು ಹೇಳಿದ್ದರು.

10 ಶಾಸಕರು ನಮ್ಮ ಜೊತೆ ಇದ್ದಾರೆ

10 ಶಾಸಕರು ನಮ್ಮ ಜೊತೆ ಇದ್ದಾರೆ

'ಮೈತ್ರಿ ಸರ್ಕಾರದ 20 ಶಾಸಕರು ನಮ್ಮ ಜೊತೆ ಇದ್ದಾರೆ ಎಂದು ಬಿಜೆಪಿಯವರು ಹೇಳುತ್ತಾರೆ. ನಮ್ಮ ಜೊತೆಯೂ ಬಿಜೆಪಿಯ 10 ಶಾಸಕರು ಸಂಪರ್ಕದಲ್ಲಿದ್ದಾರೆ. ಬಿಜೆಪಿಯವರು ಶಾಸಕರ ಹೆಸರು ಹೇಳಿದರೆ ನಾವು ಸಹ ಹೆಸರು ಬಹಿರಂಗಪಡಿಸುತ್ತೇವೆ' ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+