ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೊನ್ನ ಬ್ಯಾರೇಜ್ ಭರ್ತಿ: 65000 ಕ್ಯುಸೆಕ್ ನೀರು ಭೀಮಾ ನದಿಗೆ ಬಿಡುಗಡೆ

|
Google Oneindia Kannada News

ಕಲಬುರಗಿ, ಅ.13: ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜಿಗೆ ಮಂಗಳವಾರ ಸಾಯಂಕಾಲ 65,000 ಕ್ಯುಸೆಕ್ ನೀರು ಒಳಹರಿವು ಹೆಚ್ಚಾಗಿ ಬ್ಯಾರೇಜ್ ಭರ್ತಿಯಾಗಿದೆ ಎಂದು ಕೆ.ಎನ್.ಎನ್.ಎಲ್. ಭೀಮಾ ಏತ ನೀರಾವರಿ ಯೋಜನೆಯ ಕಾರ್ಯಪಾಲಕ ಅಭಿಯಂತ ಅಶೋಕ ಆರ್. ಕಲಾಲ್ ತಿಳಿಸಿದ್ದಾರೆ. ಮಹಾರಾಷ್ಟ್ರದ ಉಜನಿ ಮತ್ತು ವೀರ್ ಅಣೆಕಟ್ಟಿನಿಂದ ಕ್ರಮವಾಗಿ 23000 ಮತ್ತು 5100 ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಅಲ್ಲದೆ, ಬ್ಯಾರೇಜಿನ ಜಲಾನಯನ ಪ್ರದೇಶದಲ್ಲಿ ಸತತ ಮಳೆಯಾಗುತ್ತಿದೆ.

ಬ್ಯಾರೇಜಿನ ಮೇಲ್ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು ಮತ್ತು ವೀರ್ ಮತ್ತು ಉಜನಿ ಡ್ಯಾಂನಿಂದ ಹೆಚ್ಚಿನ ನೀರು ಬಿಡುವ ಸಾಧ್ಯತೆ ಇರುವುದರಿಂದ ಮಂಗಳವಾರ 65000 ಕ್ಯುಸೆಕ್ ನೀರನ್ನು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹಾಸನ: ತಾಲೂಕುಗಳಲ್ಲಿನ ಮಳೆ ದಾಖಲೆ ವರದಿಹಾಸನ: ತಾಲೂಕುಗಳಲ್ಲಿನ ಮಳೆ ದಾಖಲೆ ವರದಿ

ಸೊನ್ನ ಬ್ಯಾರೇಜಿನ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸೊನ್ನ ಬ್ಯಾರೇಜಿನಲ್ಲಿ ಒಳಹರಿವು ಹೆಚ್ಚಳವಾಗುತ್ತಿದೆ. ಮುಂದೆಯೂ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದ್ದು, ಒಳಹರಿವಿನಷ್ಟೆ ಪ್ರಮಾಣದ ನೀರು ಭೀಮಾನದಿಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಅವರು ಸ್ಪಷ್ಠಪಡಿಸಿದ್ದಾರೆ.

Sonna Barrage in Afzalpur is full, Over 65000 cusecs water to Bhima River

ಆದ್ದರಿಂದ ಸೊನ್ನ ಬ್ಯಾರೇಜ್ ಕೆಳಭಾಗದಲ್ಲಿರುವ ಅಫಜಲಪುರ, ಜೇವರ್ಗಿ, ಚಿತ್ತಾಪುರ, ಕಲಬುರಗಿ ತಾಲೂಕುಗಳು ಹಾಗೂ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬ್ಯಾರೇಜ್ ಕೆಳಗಡೆ ಬರುವ ಭೀಮಾ ನದಿಯ ದಡದಲ್ಲಿರುವ ಗ್ರಾಮಗಳ ರೈತರು ನದಿಯ ದಡಕ್ಕೆ ಹೋಗಬಾರದು. ಅಲ್ಲದೆ ತಮ್ಮ ಜಾನುವಾರುಗಳನ್ನು ನದಿಯ ದಡಕ್ಕೆ ಬಿಡದಂತೆ ಎಚ್ಚರ ವಹಿಸಬೇಕು.

ಮುಂದುವರೆದ ಮಳೆ, ಜಲಾಶಯಗಳ ನೀರಿನ ಮಟ್ಟ ವಿವರಮುಂದುವರೆದ ಮಳೆ, ಜಲಾಶಯಗಳ ನೀರಿನ ಮಟ್ಟ ವಿವರ

ಅದೇ ರೀತಿ ಸೊನ್ನ ಬ್ಯಾರೇಜಿನ ಕೆಳಗಡೆ ಬರುವ ಇನ್ನಿತರ ಬ್ಯಾರೇಜ್‍ಗಳ ಅಧಿಕಾರಿಗಳು ಎಚ್ಚರವಹಿಸಲು ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
Sonna Barrage in Afzalpur is full, Over 65000 cusecs water to Bhima River, Alert is issued in and around Bhima catchment area.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X