ಕಲಬುರಗಿ; ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ

ಕಲಬುರಗಿ, ಆಗಸ್ಟ್ 24; ಕಲಬುರಗಿ ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭಗೊಂಡಿದೆ. ಜಿಲ್ಲೆಯ ಅರ್ಹ ಮತದಾರರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವುಳ್ಳ ಮತದಾರರ ಪಟ್ಟಿ ತಯಾರಿಕೆಗೆ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಜಿಲ್ಲಾಡಳಿತ ಆರಂಭಿಸಿದೆ. 1/1/2022ಕ್ಕೆ 18 ವರ್ಷ ಪೂರೈಸುವ ಜಿಲ್ಲೆಯ ಎಲ್ಲಾ ಅರ್ಹ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಬಹುದಾಗಿದೆ.

ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ವಿ. ವಿ. ಜ್ಯೋತ್ಸ್ನಾ ಈ ಕುರಿತು ಮಾಹಿತಿ ನೀಡಿದ್ದಾರೆ, "ಹೊಸದಾಗಿ ಹೆಸರು ಸೇರಿಸುವುದು ಮಾತ್ರವಲ್ಲ. ಮತದಾರರ ಪಟ್ಟಿಯಲ್ಲಿ ತಿದ್ದುಪಡಿ, ಬದಲಾವಣೆ ಹಾಗೂ ಸ್ಥಳಾಂತರಗಳಿದ್ದಲ್ಲಿ ನಿಗದಿಪಡಿಸಿದ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ" ಎಂದು ಹೇಳಿದ್ದಾರೆ.

 Special Drive To Enroll Name For Voter List At Kalaburagi

ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಲು ಸಂಬಂಧಪಟ್ಟ ಮತಗಟ್ಟೆ ಅಧಿಕಾರಿಗಳಿಗೆ ಹಾಗೂ ನ್ಯಾಷನಲ್ ವೋಟರ್ಸ್ ಸರ್ವಿಸ್ ಪೊರ್ಟಲ್ https://www.nvsp.in ನಲ್ಲಿ ನಮೂನೆ-6 ರಲ್ಲಿ ಅರ್ಜಿ ಸಲ್ಲಿಸಬೇಕು.

ಆಗಸ್ಟ್ 31ರವರೆಗೆ ಮತದಾನ ಕೇಂದ್ರಗಳ ರೇಷನಾಲೈಜೇಶನ್ ಬದಲಾವಣೆ, ಭಾಗವಾರು ಮತದಾರರ ಪಟ್ಟಿಯಲ್ಲಿ ಹೆಚ್ಚುವರಿ ಹೆಸರು ತೆಗೆದು ಹಾಕುವಿಕೆ ಹಾಗೂ ಭಾಗಗಳ ಗಡಿ ಗುರುತಿಸುವ ಕಾರ್ಯವನ್ನು ನಡೆಸಲಾಗುತ್ತದೆ. ನವೆಂಬರ್ 1ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ.

ನವೆಂಬರ್ 1 ರಿಂದ ನವೆಂಬರ್ 30 ರವರೆಗೆ ಕರಡು ಮತದಾರರ ಪಟ್ಟಿಗೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗುವುದು. 2021ರ ನವೆಂಬರ್ 7, ನವೆಂಬರ್ 14, ನವೆಂಬರ್ 21 ಹಾಗೂ ನವೆಂಬರ್ 28 ರ ಭಾನುವಾರುಗಳಂದು ವಿಶೇಷ ಆಂದೋಲನ ಕೈಗೊಂಡು ಕರಡು ಮತದಾರರ ಪಟ್ಟಿಗೆ ಸ್ವೀಕೃತ ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲಾಗುತ್ತದೆ. 2021ರ ಡಿಸೆಂಬರ್ 20ರೊಳಗೆ ಎಲ್ಲಾ ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲಾಗುವುದು.

ಚುನಾವಣಾ ಆಯೋಗದಿಂದ ಅನುಮತಿ ಪಡೆದುಕೊಂದು 2022ರ ಜನವರಿ 5ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ. ಜಿಲ್ಲೆಯ ಜನರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ತೆಗೆದುಹಾಕುವಿಕೆಯ ಪರಿಷ್ಕರಣೆ ಕಾರ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+