ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

85ನೇ ಕನ್ನಡ ಸಾಹಿತ್ಯ ಸಮ್ಮೇಳನ; ಲಾಂಛನದ ವಿಶೇಷತೆಗಳು

|
Google Oneindia Kannada News

ಕಲಬುರಗಿ, ಜನವರಿ 05 : 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಅನಾವರಣಗೊಳಿಸಲಾಗಿದೆ. ಫೆಬ್ರವರಿ 5, 6 ಮತ್ತು 7ರಂದು ಕಲಬುರಗಿಯಲ್ಲಿ ಕನ್ನಡ ಸಾಹಿತ್ಯ ಜಾತ್ರೆ ನಡೆಯಲಿದೆ.

ಭಾನುವಾರ ಜಿಲ್ಲಾಧಿಕಾರಿಗಳ ಚೇರಿಯಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಡುಗಡೆಗೊಳಿಸಿದರು.
ಸೂಫಿ-ಸಂತರ ನಾಡು ಕಲಬುರಗಿಯಲ್ಲಿ 32 ವರ್ಷದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳು ಶೇ.50 ರಿಯಾಯಿತಿಯಲ್ಲಿ ಮಾರಾಟ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳು ಶೇ.50 ರಿಯಾಯಿತಿಯಲ್ಲಿ ಮಾರಾಟ

ಶಾಸಕರಾದ ಬಸವರಾಜ ಮತ್ತಿಮೂಡ, ಸುಭಾಷ್ ಗುತ್ತೇದಾರ, ಎಂ.ವೈ.ಪಾಟೀಲ, ವಿಧಾನ ಪರಿಷತ್ತಿನ ಶಾಸಕ ತಿಪ್ಪಣಪ್ಪ ಕಮಕನೂರ, ಕಲಬುರಗಿ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ, ಜಿಲ್ಲಾಧಿಕಾರಿ ಶರತ್ ಬಿ. ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕನ್ನಡ ಸಿನಿಪ್ರಿಯರಿಗೆ ಗಿಫ್ಟ್‌ ನೀಡಿದ ಜಿಯೋ ಸಿನೆಮಾ ಕನ್ನಡ ಸಿನಿಪ್ರಿಯರಿಗೆ ಗಿಫ್ಟ್‌ ನೀಡಿದ ಜಿಯೋ ಸಿನೆಮಾ

ಕರ್ನಾಟಕ ಬೇರೆ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕಲಬುರಗಿಯಲ್ಲಿ ಅತಿ ಹೆಚ್ಚು ತೊಗರಿ ಬೆಳೆಯಲಾಗುತ್ತದೆ. ಕಲಬುರಗಿ ಜಿಲ್ಲೆಯನ್ನು 'ತೊಗರಿ ಬೆಳೆಯ ಕಣಜ' ಎಂದು ಕರೆಯಲಾಗುತ್ತದೆ. ಆದ್ದರಿಂದ, ತೊಗರಿ ಬೆಳೆಯನ್ನು ಲಾಂಛನದಲ್ಲಿ ಬಳಸಿಕೊಳ್ಳಲಾಗಿದೆ.

ಕನ್ನಡ ಸಾಹಿತ್ಯ ಡಿಜಿಟಲೀಕರಣ ಮಾಡಲು ಸರ್ಕಾರ ಬದ್ಧ: ಅಶ್ವಥ್ ನಾರಾಯಣಕನ್ನಡ ಸಾಹಿತ್ಯ ಡಿಜಿಟಲೀಕರಣ ಮಾಡಲು ಸರ್ಕಾರ ಬದ್ಧ: ಅಶ್ವಥ್ ನಾರಾಯಣ

ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ

ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ

ಕನ್ನಡ ಸಾಹಿತ್ಯ ಚರಿತ್ರೆಯ ಇತಿಹಾಸದಲ್ಲಿ ಮೊದಲು ದರ್ಶನ ನೀಡುವ ಜಿಲ್ಲೆ ಎಂದರೆ ಕಲಬುರಗಿ. ಸಮ್ಮೇಳನದ ಲಾಂಛನದಲ್ಲಿ ಈ ಜಿಲ್ಲೆಯ ಶ್ರೇಷ್ಠ ಕವಿಗಳಲ್ಲಿ ಒಬ್ಬರಾದ ಶ್ರೀ ವಿಜಯನು ಬರೆದ 'ಕವಿರಾಜ ಮಾರ್ಗ' ಎಂಬ ಆದರ್ಶ ಗ್ರಂಥ ಮತ್ತು ಕವಿಯು ಕಾವ್ಯ ರಚನೆಯಲ್ಲಿ ತೊಡಗಿರುವುದನ್ನು ಸಾಂಕೇತಿಕವಾಗಿ ಬಳಸಿಕೊಳ್ಳಲಾಗಿದೆ.

ಶಾಸನವನ್ನು ಬಳಸಲಾಗಿದೆ

ಶಾಸನವನ್ನು ಬಳಸಲಾಗಿದೆ

ಕಲಬುರಗಿ ಜಿಲ್ಲೆಯ ಸನ್ನತಿ, ನಾಗಾವಿ, ಮರತೂರು ಮುಂತಾದ ಕಡೆ ಹಲವಾರು ಮಹತ್ವದ ಪ್ರಾಚೀನ ಶಾಸನಗಳು ಇರುವದರಿಂದ ಸಾಂಕೇತಿಕವಾಗಿ ಶಾಸನವೊಂದನ್ನು ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನದಲ್ಲಿ ಬಳಸಿಕೊಳ್ಳಲಾಗಿದೆ.

ಸಾಂಸ್ಕೃತಿಕವಾಗಿ ಮತ್ತು ಧಾರ್ಮಿಕವಾಗಿ ಸೌಹಾರ್ದ-ಸಹಿಷ್ಣುತೆಗೆ ಹೆಸರುವಾಸಿಯಾದ ಮತ್ತು ಕಲಾತ್ಮಕ ಸ್ಮಾರಕಗಳಾದ ಹಜರತ್ ಖಾಜಾ ಬಂದೇ ನವಾಜ ದರ್ಗಾ, ಶ್ರೀ ಶರಣಬಸವೇಶ್ವರ ಐತಿಹಾಸಿಕ ಭವ್ಯ ದೇವಾಲಯ, ಕಲಬುರಗಿಯ ಕೋಟೆ, ಚರ್ಚ್ ಹಾಗೂ ಬೌದ್ಧ ವಿಹಾರ ಲಾಂಛನದಲ್ಲಿದೆ.

ತಾಳೆಗರಿ ಕಟ್ಟನ್ನು ಬಳಸಿಕೊಳ್ಳಲಾಗಿದೆ

ತಾಳೆಗರಿ ಕಟ್ಟನ್ನು ಬಳಸಿಕೊಳ್ಳಲಾಗಿದೆ

ಕನ್ನಡ ನಾಡಿನಲ್ಲಿ ಅಶೋಕನ ಪೂರ್ವದ ಕಾಲದಲ್ಲಿಯ ಬೌದ್ಧ ಧರ್ಮ ಇತ್ತು ಎಂಬುದಕ್ಕೆ ಸಾಕ್ಷ್ಯಾಧಾರಗಳು ಸನ್ನತಿಯಲ್ಲಿ ದೊರತಿವೆ. ಹಾಗಾಗಿ ಸನ್ನತಿಯ ಶಿಲ್ಪಗಳನ್ನು ಈ ಲಾಂಛನದಲ್ಲಿ ಬಳಸಿಕೊಳ್ಳಲಾಗಿದೆ. ಜನಪದ ಹಾಡುಗಾರರ ಮತ್ತು ತತ್ವಪದಕಾರರ ಸಂಕೇತವಾಗಿ ಏಕತಾರಿ ಮತ್ತು ದಮ್ಮಡಿಯನ್ನು ಬಳಸಿಕೊಳ್ಳಲಾಗಿದೆ. ಪ್ರಾಚೀನ ಕವಿಗಳ ಮತ್ತು ವಚನಕಾರರ ಸಾಹಿತ್ಯ ರಚನೆಯ ಸಂಕೇತವಾಗಿ ತಾಳೆಗರಿ ಕಟ್ಟನ್ನು ಲಾಂಛನದಲ್ಲಿ ಬಳಸಿಕೊಂಡಿದ್ದಾರೆ.

ತೊಗರಿಯ ಕಣಜ ಕಲಬುರಗಿ

ತೊಗರಿಯ ಕಣಜ ಕಲಬುರಗಿ

ಬೇರೆ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕಲಬುರಗಿಯಲ್ಲಿ ಅತಿ ಹೆಚ್ಚು ತೊಗರಿ ಬೆಳೆಯಲಾಗುತ್ತದೆ. ಕಲಬುರಗಿ ಜಿಲ್ಲೆಯನ್ನು 'ತೊಗರಿ ಬೆಳೆಯ ಕಣಜ' ಎಂದು ಕರೆಯಲಾಗುತ್ತದೆ. ಹಾಗಾಗಿ ತೊಗರಿ ಬೆಳೆಯನ್ನು ಈ ಲಾಂಛನದಲ್ಲಿ ಬಳಸಿಕೊಳ್ಳಲಾಗಿದೆ. ಕೊನೆಯದಾಗಿ ಈ ಲಾಂಛನದ ಮೇಲ್ಭಾಗದಲ್ಲಿ ಕನ್ನಡಾಂಬೆಯ ಭಾವಚಿತ್ರ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಚಿಹ್ನೆ, ಧ್ವಜವನ್ನು ಬಳಸಿಕೊಳ್ಳಲಾಗಿದೆ ಮತ್ತು ಸಂಭ್ರಮದ ಸೂಚಕವಾಗಿ ಕಲಾತ್ಮಕವಾದ ಜನಪದ ಛತ್ರಿಯನ್ನು ಬಳಸಿಕೊಳ್ಳಲಾಗಿದೆ.

English summary
85th Kannada sahitya sammelana logo released. Sahitya sammelana will be held on February 5, 6 and 7, 2020. Here are the specialties logo.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X