ಇಂದು ಕಲಬುರಗಿಯಲ್ಲಿ ರಾಹುಲ್ ಗಾಂಧಿ ಪರಿವರ್ತನಾ ಸಮಾವೇಶ
Recommended Video

ಕಲಬುರಗಿ, ಮಾರ್ಚ್ 18: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ ಸಿದ್ಧತೆ ಭರದಿಂದ ಸಾಗಿದೆ. ಹಾವೇರಿ ಬಳಿಕ ರಾಹುಲ್ ಗಾಂಧಿ ಪರಿವರ್ತನಾ ಸಮಾವೇಶ ಇಂದು ಕಲಬುರಗಿಯಲ್ಲಿ ನಡೆಯಲಿದೆ.
ಬೆಳಗ್ಗೆ 11ಗಂಟೆಗೆ ಕಲಬುರಗಿಯ ಎನ್‌ವಿ ಆಟದ ಮೈದಾನದಲ್ಲಿ ನಡೆವ ಸಮಾವೇಶದಲ್ಲಿ ಅವರು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಶಾಸಕರಾಗಿದ್ದ ಉಮೇಶ್ ಜಾಧವ್ ಪಕ್ಷಕ್ಕೆ ರಾಜೀನಾಮೆ ನೀಡಿ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧವೇ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಸೋಮವಾರ ನಡೆಯಲಿರುವ ಕಲಬುರಗಿ ಸಮಾವೇಶ ಮಹತ್ವ ಪಡೆದುಕೊಂಡಿದೆ.
ಕಲಬುರಗಿ ಸಮಾವೇಶ ಬಳಿಕ ಸಂಜೆ ಬೆಂಗಳೂರಿಗೆ ವಾಪಸಾಗಲಿರುವ ಅವರು, ಮಾನ್ಯತಾ ಟೆಕ್‌ಪಾರ್ಕ್‌ನ ಆಂಪಿ ಥೀಯೇಟರ್‌ನಲ್ಲಿ ಸಂಜೆ 5 ಗಂಟೆಗೆ ನಡೆಯಲಿರುವ ಉದ್ಯಮಿಗಳೊಂದಿಗಿನ ಸಂವಾದದಲ್ಲಿ ಭಾಗವಹಿಸಲಿದ್ದಾರೆ.

ಸ್ಟಾರ್ಟ್ ಅಪ್ ರಾಜಧಾನಿ ಬೆಂಗಳೂರಿನ ಪ್ರಮುಖ ಮಾಲೀಕರು ರಾಹುಲ್ ಗಾಧಿ ಅವರೊಂದಿಗೆ ಸಂವಾದ ನಡೆಸಲಿದ್ದಾರೆ.ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಘೋಷಣೆ ದಿನಾಂಕ, ತುಮಕೂರು ಕ್ಷೇತ್ರದ ಬಗ್ಗೆ ಉಂಟಾಗಿರುವ ವಿವಾದದ ಬಗ್ಗೆ ರಾಜ್ಯ ನಾಯಕರು ಚರ್ಚಿಸುವ ಸಾಧ್ಯತೆ ಇದೆ.












Click it and Unblock the Notifications