• search
 • Live TV
ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾಲೀಕಯ್ಯ ಗುತ್ತೆದಾರ್‌ಗೆ ಕೋವಿಡ್ ಸೋಂಕು ದೃಢ!

|

ಬೆಂಗಳೂರು, ಸೆ. 03: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಾವಳಿ ಮುಂದುವರೆದಿದ್ದು, ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಅವರೇ ಮಾಹಿತಿ ಕೊಟ್ಟು ಟ್ವೀಟ್ ಮಾಡಿದ್ದು, ತಮಗೆ ಕೋವಿಡ್-19 ದೃಢಪಟ್ಟಿದೆ ಎಂದಿದ್ದಾರೆ.

   Narendra Modiಯವರ Twitter ಹಾಗು Website hacked | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಸದ್ಯ ತಮ್ಮ ಕಲಬುರಗಿಯ ನಿವಾಸದಲ್ಲಿಯೇ ಐಸೊಲೇಶನ್‌ಗೆ ಒಳಗಾಗಿರುವುದಾಗಿ ತಿಳಿಸಿದ್ದಾರೆ. ಕೋವಿಡ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಂಡು ಮುಂಜಾಗ್ರತೆ ವಹಿಸುವಂತೆ ಮಾಲೀಕಯ್ಯ ಅವರು ಮನವಿ ಮಾಡಿದ್ದಾರೆ.

   ಮೂರು ದಿನಗಳ ಹಿಂದೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಕೋವಿಡ್ 19 ಪಾಸಿಟಿವ್ ಬಂದಿತ್ತು. ಕಲಬುರಗಿ ಪ್ರವಾಸ ಮುಗಿಸಿದ ಎರಡೇ ದಿನಕ್ಕೆ ಕೊರೊನಾ ಸೋಂಕು ತಗುಲಿರುವುದು ಗೊತ್ತಾಗಿತ್ತು. ಇದೀಗ ಅವರೊಂದಿಗೆ ಸಭೆಯಲ್ಲಿ ಭಾಗವಹಿಸಿದ್ದ ಮಾಲೀಕಯ್ಯ ಗುತ್ತೆದಾರ್ ಅವರಿಗೂ ಸೋಂಕು ದೃಢಪಟ್ಟಿದೆ. ಹೀಗಾಗಿ ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆ ವಹಿಸುವಂತೆ ಮಾಲೀಕಯ್ಯ ಅವರು ಮನವಿ ಮಾಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮಾಲೀಕಯ್ಯ ಗುತ್ತೆದಾರ್ ಅವರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ್ದರು.

   English summary
   The outbreak of coronavirus continues in the state, with the state BJP vice-president and former minister Malikayya Guttedar tests covid 19 positive. He himself tweeted about this and said that Covid-19 has been confirmed.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X