ಕಲಬುರಗಿ; ಬಾಲಕಿ ಮೇಲೆ ಅತ್ಯಾಚಾರ, ಕೊಲೆ: 24 ಗಂಟೆಯಲ್ಲೇ ಆರೋಪಿ ಬಂಧನ

ಕಲಬುರಗಿ, ನವೆಂಬರ್ 3: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ , ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕನನ್ನು ಪೊಲೀಸರು ಪ್ರಕರಣ ನಡೆದ 24 ಗಂಟೆಗಳಲ್ಲೇ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಲಕಿ ಬಹಿರ್ದೆಸೆಗೆ ತೆರಳಿದ್ದ ವೇಳೆ ಐಟಿಐ ವ್ಯಾಸಂಗ ಮಾಡುತ್ತಿದ್ದ 16 ವರ್ಷದ ಯುವಕ ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾನೆ. ನಂತರ ಸಿಕ್ಕಿ ಬೀಳುವ ಭಯದಿಂದ ಬಾಲಕಿಯ ಮೇಲೆ ಕಲ್ಲನ್ನು ಎತ್ತು ಹಾಕಿದ್ದಾನೆ. ನಂತರ ವೇಲ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ, ಕಾಲುವೆ ಬಳಿ ಹೋಗಿ ಕೈಕಾಲು ತೊಳೆದುಕೊಂಡು ಪರಾರಿಯಾಗಿದ್ದ.

ಅಫಜಲಪುರ ತಾಲೂಕಿನ ವಿದ್ಯಾರ್ಥಿನಿ ಆಳಂದ ತಾಲೂಕಿನ ಕೊರಳ್ಳಿಯ ಸಂಬಂಧಿಕರ ಮನೆಯಲ್ಲಿ ಇದ್ದುಕೊಂಡು ಸರಕಾರಿ ಶಾಲೆಯಲ್ಲಿ ಓದುತ್ತಿದ್ದಳು. ಇತ್ತೀಚೆಗೆ ಬಾಲಕಿ ಹಬ್ಬಕ್ಕೆಂದು ಐದಾರು ದಿನಗಳ ಮಟ್ಟಿಗೆ ಊರಿಗೆ ಹೋಗಿದ್ದು, ಮಂಗಳವಾರವಷ್ಟೇ ಮರಳಿ ಕೊರಳ್ಳಿಗೆ ಬಂದಿದ್ದಳು. ಬಾಲಕಿಯ ಅತ್ತೆ ಮನೆಯಲ್ಲಿರುವಂತೆ ಹೇಳಿ ಹೊರ ಹೋಗಿದ್ದರು.

Teenage boy Arrested for Rape and Murder of Minor Girl in Kalaburagi

ಬಾಲಕಿ ಪಕ್ಕದ ಮನೆಯವರಿಗೆ ಬಹಿರ್ದೆಸೆಗೆ ಹೋಗುವುದಾಗಿ ಮಧ್ಯಾಹ್ನ ಮನೆಯಿಂದ ಹೋದವಳು ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಇದರಿಂದ ಆತಂಕಕ್ಕೆ ಒಳಗಾದ ಬಾಲಕಿ ಅತ್ತೆ ಅಕ್ಕಪಕ್ಕದ ಮನೆಯವರನ್ನು ವಿಚಾರಿಸಿದ್ದಾರೆ. ನಂತರ ಹುಡುಕಾಡಿದಾಗ ಸಮೀಪದ ಕಬ್ಬಿನ ತೋಟವೊಂದರ ಬಳಿ ಚಪ್ಪಲಿ ದೊರೆತಿದೆ, ನಂತರ ಗ್ರಾಮಸ್ಥರೆಲ್ಲರೂ ಸೇರಿ ಹುಡುಕಾಟ ನಡೆಸಿದಾಗ ಬಾಲಕಿ ಶವ ಪತ್ತೆಯಾಗಿದೆ.

ಘಟನೆ ಬಗ್ಗೆ ಮುತುವರ್ಜಿ ವಹಿಸಿದ್ದ ಪೊಲೀಸ್‌ ಶ್ವಾನದಳದೊಂದಿಗೆ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶ್ವಾನ ಆರೋಪಿ ಹೋಗಿದ್ದ ಜಾಗದಲ್ಲೇ ಹೋಗಿ ಕಾಲುವೆ ಬಳಿ ಹೋಗಿ ನಿಂತಿದೆ. ನಂತರ ಅಕ್ಕಪಕ್ಕದಲ್ಲಿ ಪೊಲೀಸ್ ವಿಚಾರಿಸಿದಾಗ ಬಾಲಕನ ನಡವಳಿಕೆ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ನಂತರ ಪೊಲೀಸರು ಬಾಲಕನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಾನೇ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಮಕ್ಕಳ ಬಗ್ಗೆ ಗಮನ ಹರಿಸಲು ಎಸ್‌ಪಿ ಮನವಿ; ಬಾಲಕ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋವನ್ನು ನೋಡುತ್ತಿದ್ದ ಎಂಬ ವಿಷಯದ ಬಗ್ಗೆ ಮಾತನಾಡಿದ ಎಸ್‌ಪಿ ಇಶಾ ಪಂತ್, ಪೋಷಕರು ತಮ್ಮ ಮಕ್ಕಳು ಮೊಬೈಲ್‌ನಲ್ಲಿ ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ನಿಗಾವಹಿಸಬೇಕೆಂದು ಮನವಿ ಮಾಡಿದ್ದಾರೆ. ಜೊತೆಗೆ ಗ್ರಾಮಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಿಕೊಳ್ಳಬೇಕು. ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸಗಳನ್ನು ಮಾಡಬೇಕೆಂದು ತಿಳಿಸಿದ್ದಾರೆ.

Teenage boy Arrested for Rape and Murder of Minor Girl in Kalaburagi

ಪೊಲೀಸರಿಗೆ ಒಂದು ಲಕ್ಷ ಬಹುಮಾನ; ಕೇವಲ 24 ಗಂಟೆಯಲ್ಲಿ ಪ್ರಕರಣವನ್ನು ಪತ್ತೆ ಹಚ್ಚಿದ ತಂಡಕ್ಕೆ ಡಿಜಿ ಹಾಗೂ ಎಡಿಜಿಪಿ ಪ್ರಶಂಸೆ ವ್ಯಕ್ತಪಡಿಸಿದ್ದು, ಆರೋಪಿ ಪತ್ತೆ ಹಚ್ಚಿದ ತಂಡಕ್ಕೆ ಒಂದು ಲಕ್ಷ ರೂ ಬಹುಮಾನ ಘೋಷಣೆ ಮಾಡಲಾಗಿದೆ. ಆರೋಪಿ ತಪ್ಪೊಪ್ಪಿಕೊಂಡಿದ್ದು, ಮುಂದಿನ 10 ದಿನಗಳಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗುವುದು ಎಂದು ಕಲಬುರಗಿ ಎಸ್‌ಪಿ ಇಶಾ ಪಂತ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+