ಕಲಬುರಗಿ ಜಿಲ್ಲಾ ಆಸ್ಪತ್ರೆಯಲ್ಲಿ ಬೆಂಕಿ, ನಾಲ್ವರು ಅಸ್ವಸ್ಥ
ಕಲಬುರಗಿ, ಅಕ್ಟೋಬರ್ 07 : ಕಲಬುರಗಿ ಜಿಲ್ಲಾ ಆಸ್ಪತ್ರೆಯ ಎಕ್ಸ್ ರೇ ಕೋಣೆಯಲ್ಲಿ ಶನಿವಾರ ಬೆಂಕಿ ಅವಘಡ ಸಂಭವಿಸಿದೆ.
ಎಸಿ ಸ್ಟೆಬ್ಲೇಜರ್ ಸ್ಪೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಫೈರ್ ಗ್ಯಾಸ್ ಸಹಾಯದಿಂದ ಬೆಂಕಿಯನ್ನು ನಂದಿಸಲಾಗಿದೆ. ಇನ್ನು ಈ ಘಟನೆಯಲ್ಲಿ ನಾಲ್ವರು ಡಿ ಗ್ರೂಪ್ ಸಿಬ್ಬಂದಿ ಅಸ್ವಸ್ಥಗೊಂಡಿದ್ದಾರೆ.

ಎಕ್ಸ್ ರೇ ಮಷಿನ್ ಸೇರಿದಂತೆ ಕೋಣೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಯಂತ್ರೋಪಕರಣಗಳನ್ನು ಹೊರ ತರಲು ಯತ್ನಿಸಿ ಅಸ್ವಸ್ಥಗೊಂಡಿರುವ ಆಸ್ಪತ್ರೆಯ ಸಿಬ್ಬಂದಿ ಸಾತಲಿಂಗ್, ಫಜಲ್, ರಾಚಪ್ಪ ಹಾಗೂ ರವಿಕುಮಾರ್ ಎನ್ನುವರಿಗೆ ತೀರ್ವ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ವರ್ಷ ಇದೇ ಆಸ್ಪತ್ರೆಯ ನವಜಾತ ಶಿಶುಗಳ ತುರ್ತು ನಿಗಾ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಭಾರೀ ಅಗ್ನಿ ಅನಾಹುತ ಸಂಭವಿಸಿತ್ತು.












Click it and Unblock the Notifications