• search
  • Live TV
ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಲಬುರಗಿಯಲ್ಲಿ ಅತಿ ಗರಿಷ್ಠ ತಾಪಮಾನ ದಾಖಲು

|

ಕಲಬುರಗಿ, ಏಪ್ರಿಲ್ 2: ಕಲಬುರಗಿಯಲ್ಲಿ ಅತಿ ಗರಿಷ್ಠ ಉಷ್ಣಾಂಶ ಅಂದರೆ 40.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಏಪ್ರಿಲ್‌ನಲ್ಲಿ ಗರಿಷ್ಠ ಉಷ್ಣಾಂಶ 45ರ ಗಡಿ ಮುಟ್ಟಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

ಭಾರತೀಯ ಹವಾಮಾನ ಇಲಾಖೆಯ ಬುಧವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ ಕಲಬುರಗಿಯಲ್ಲಿ ದಾಖಲಾಗಿದೆ.

ಇನ್ನು ಮಾರ್ಚ್ 31 ರಂದು ಬೆಂಗಳೂರಿನಲ್ಲಿ ಗರಿಷ್ಠ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಈ ಹಿಂದಿನ ವರ್ಷಗಳಲ್ಲಿ ಮಾರ್ಚ್‌ನಲ್ಲಿ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿತ್ತು.

ಉಳಿದಂತೆ ರಾಜ್ಯದಲ್ಲಿ ಒಣ ಹವೆ ಮುಂದುವರೆದಿದೆ. ಸದ್ಯ ಮಳೆಯ ಯಾವುದೇ ಮುನ್ಸೂಚನೆ ಇಲ್ಲ. ಹಾಗಾಗಿ ಏಪ್ರಿಲ್‌ನಲ್ಲಿ ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್ ಗಡಿ ಮುಟ್ಟಲಿದೆ ಎಂದು ಕೆಎಸ್‌ಎನ್‌ಎಂಡಿಸಿ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಇನ್ನುಳಿದಂತೆ ಎಲ್ಲೆಡೆ ಒಣಹವೆ ಮುಂದುವರೆಯಲಿದೆ.ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಮಳೆಯ ಮುನ್ಸೂಚನೆ ದೊರೆತಿದೆ.

English summary
The maximum temperature was recorded at 40.2 degrees Celsius in Kalaburagi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X