ರಾಜ್ಯದ ಬಿಜೆಪಿ ಸಂಸದರು ಪೇಪರ್ ಹುಲಿಗಳು: ಪ್ರಿಯಾಂಕ್ ಖರ್ಗೆ ವ್ಯಂಗ್ಯ
Recommended Video
ಕಲಬುರಗಿ, ಅಕ್ಟೋಬರ್ 4: ರಾಜ್ಯದ ಬಿಜೆಪಿ ಸಂಸದರು ಕೇವಲ ಪೇಪರ್ ಹುಲಿಗಳು ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ರಾಜ್ಯದ ನೆರೆ ಪರಿಹಾರದ ಕುರಿತು ಟ್ವೀಟ್ ಮಾಡಿರುವ ಅವರು, ಪ್ರವಾಹದಿಂದ ತತ್ತರಿಸಿರುವ ಕರ್ನಾಟಕ ರೈತರಿಗೆ ಪರಿಹಾರ ಕೊಡಿಸುವಲ್ಲಿ ರಾಜ್ಯದ ಸಂಸದರು ವಿಫರಾಗಿದ್ದಾರೆ ಎಂದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಎಸ್.ಕೆ ಮೇಗಲ್ ಗ್ರಾಮದಲ್ಲಿ ವಿಷ ಸೇವಿಸಿ ಚಂದ್ರೇಗೌಡ(55) ಆತ್ಮಹತ್ಯೆ ಮಾಡಿಕೊಂಡಿದ್ದರು.

ಮಲೆನಾಡ ಭಾಗದಲ್ಲಿ ಸುರಿದ ಭಾರೀ ಮಳೆಯಿಂದ ಚಂದ್ರೆ ಗೌಡರ ಒಂದು ಎಕರೆ ಗದ್ದೆ ಕೊಚ್ಚಿಕೊಂಡು ಹೋಗಿತ್ತು. ಇದರಿಂದ ರೈತ ಸಂಕಷ್ಟಕ್ಕೆ ಸಿಲುಕಿದ್ದರು. ಮಳೆಯಿಂದ ಹಾನಿಯಾಗಿದ್ದ ಗದ್ದೆ-ತೋಟವನ್ನು ಸರಿ ಮಾಡಲು ರೈತ ಕೈ ಸಾಲ ಕೂಡ ಮಾಡಿಕೊಂಡಿದ್ದರು.
ಚಿಕ್ಕಮಗಳೂರು ಪ್ರವಾಹ ಸಂತ್ರಸ್ತ ರೈತ ಚಂದ್ರೇಗೌಡ ಆತ್ಮಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ್ ಟ್ವೀಟ್ ಮಾಡಿದ್ದಾರೆ. ರಾಜ್ಯದ ಹಿತಾಸಕ್ತಿ ಪರ ಬ್ಯಾಟ್ ಬೀಸದ ಬಿಜೆಪಿ ಸಂಸದರು ಕೇವಲ ಪೇಪರ್ ಹುಲಿಗಳು. ಪ್ರಧಾನಿ ಮೋದಿ ಬಳಿ ರಾಜ್ಯಕ್ಕೆ ಪರಿಹಾರ ಕೇಳಲು ಬಿಜೆಪಿ ಸಂಸದರು ಯಾಕೆ ಹೆದರುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.












Click it and Unblock the Notifications