ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕನ್ನಡ ಚಳುವಳಿ ವಾಟಾಳ ಪಕ್ಷದಿಂದ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಕೆ!

|
Google Oneindia Kannada News

ಬೆಂಗಳೂರು, ಅ. 08: ಕನ್ನಡ ಚಳುವಳಿ ವಾಟಾಳ ಪಕ್ಷದಿಂದ ನಾಮಪತ್ರ ಸಲ್ಲಿಸುವ ಮೂಲಕ ಮಾಜಿ ಶಾಸಕ, ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಚುನಾವಣೆಗೆ ರಂಗು ತಂದಿದ್ದಾರೆ.

ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೂಲಕ ಕನ್ನಡ ಪರ ಹೋರಾಟಗಾರ, ಮಾಜಿ ಶಾಸಕ ವಾಟಾಳ ನಾಗರಾಜ್ ಅವರು ಚುನಾವಣೆಗೆ ರಂಗು ನೀಡಿದ್ದಾರೆ. ಇಂದು ಕಲಬುರಗಿಯಲ್ಲಿ ನಾಮಪತ್ರ ಸಲ್ಲಿಸಿರುವ ಅವರು ಕನ್ನಡ ಚಳುವಳಿ ವಾಟಾಳ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಕಲಬುರಗಿಯ ಪ್ರಾದೇಶಿಕ ಆಯುಕ್ತರ ಕಛೇರಿಯಲ್ಲಿ ಚುನಾವಣಾಧಿಕಾರಿ ಎನ್.ವಿ. ಪ್ರಸಾದ ಅವರಿಗೆ ನಾಮಪತ್ರವನ್ನು ವಾಟಾಳ ನಾಗರಾಜ್ ಅವರು ಸಲ್ಲಿಸಿದ್ದಾರೆ.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆನೊಳಗೊಂಡಿರುವ ಈಶಾನ್ಯ ಪದವಿಧರ ಶಿಕ್ಷಕರ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸರುವ ಮೂಲಕ ವಾಟಾಳ್ ಅವರು ಕುತೂಹಲ ಮೂಡಿಸಿದ್ದಾರೆ.

Vatala Nagaraj Is Contesting From Legislative Council North East Teachers Constituency

ಈಶಾನ್ಯ ಶಿಕ್ಷಕರ ಮತ ಕ್ಷೇತ್ರದ ಚುನಾವಣೆಗೆ ಬುಧವಾರ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.

ಬಿಜೆಪಿ ಅಭ್ಯರ್ಥಿಯಾಗಿ ಶಶೀಲ್ ನಮೋಶಿ ಹಾಗೂ ಹಾಲಿ ಸದಸ್ಯ ಶರಣಪ್ಪ ಮಟ್ಟೂರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಈಗಾಗಲೇ ತಮ್ಮ ಉಮೇದುವಾರಿಕೆಯನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಿದ್ದಾರೆ. ಇದೀಗ ವಾಟಾಳ್ ನಾಗರಾಜ್ ಅವರು ನಾಮಪತ್ರ ಸಲ್ಲಿಸುವ ಮೂಲಕ ಕುತೂಹಲ ಮೂಡಿಸಿದ್ದಾರೆ.

English summary
Kannada activist, former MLA Vatala Nagaraj is contesting the election by nominating a candidate for the Legislative council northeast teachers constituency,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X