ಲಾಕ್ ಡೌನ್ ಉಲ್ಲಂಘಿಸಿ ಸಾವಳಗಿ ಜಾತ್ರೆ; ಗ್ರಾಮ ಲೆಕ್ಕಾಧಿಕಾರಿ ಅಮಾನತು
ಕಲಬುರಗಿ, ಏಪ್ರಿಲ್ 24: ಲಾಕ್ ಡೌನ್ ನಿಯಮ ಉಲ್ಲಂಘಿಸಿ ಕಲಬುರಗಿ ಸಾವಳಗಿ ಗ್ರಾಮದಲ್ಲಿ ಜಾತ್ರಾ ಮಹೋತ್ಸವ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಮತ್ತೊಬ್ಬರನ್ನು ಅಮಾನತು ಮಾಡಲಾಗಿದೆ. ಲಾಕ್ ಡೌನ್ ಉಲ್ಲಂಘಿಸಿ ಜಾತ್ರೆ ಮಾಡಿದ್ದರೂ ಅದನ್ನು ವರದಿ ಮಾಡುವಲ್ಲಿ ವಿಫಲವಾದ ಆರೋಪದ ಮೇಲೆ ಸಾವಳಗಿ ಗ್ರಾಮ ಲೆಕ್ಕಾಧಿಕಾರಿ ಜಗದೀಶ ರೆಡ್ಡಿಯನ್ನು ಅಮಾನತುಗೊಳಿಸಲಾಗಿದೆ.
ಏಪ್ರಿಲ್ 7 ಮತ್ತು 8ರ ಮಧ್ಯರಾತ್ರಿ ಸಾವಳಗಿಯಲ್ಲಿ ಶಿವಲಿಂಗೇಶ್ವರ ಜಾತ್ರೆ ನಡೆಸಿದ್ದು, ಅದರಲ್ಲಿ ನೂರಾರು ಜನ ಭಾಗಿಯಾಗಿದ್ದರು. ಜಾತ್ರೆ ನಡೆದು 15 ದಿನಗಳಾದರೂ ಗ್ರಾಮ ಲೆಕ್ಕಾಧಿಕಾರಿ ಜಿಲ್ಲಾಧಿಕಾರಿಗೆ ಈ ಬಗ್ಗೆ ವರದಿ ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ಆರೋಪದ ಮೇಲೆ ಇಲಾಖಾ ತನಿಖೆ ಬಾಕಿಯಿರಿಸಿ ಅಮಾನತು ಮಾಡಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.

ಇದೇ ಜಾತ್ರೆಗೆ ಸಂಬಂಧಿಸಿ ಈ ಮುಂಚೆ ಗ್ರಾಮೀಣ ಠಾಣೆ ಪೊಲೀಸ್ ಇನ್ಸಪೆಕ್ಟರ್ ಹಾಗೂ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಲಾಗಿತ್ತು.












Click it and Unblock the Notifications