ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಚಿವರಿಗೊಂದು ನ್ಯಾಯ ಸಾರ್ವಜನಿಕರಿಗೊಂದು ನ್ಯಾಯ

|
Google Oneindia Kannada News

ಕಲಬುರಗಿ, ಜುಲೈ 2: ಸಚಿವರಿಗೊಂದು ನ್ಯಾಯ ಸಾರ್ವಜನಿಕರಿಗೊಂದು ನ್ಯಾಯ ಎಂದು ಕಲಬುರಗಿಯಲ್ಲಿ ಸಾರ್ವಜನಿಕರು ಅಸಮಾಧಾನ ಹೊರ ಹಾಕಿದ್ದಾರೆ.

ಗಾಣಗಾಪುರ ದತ್ತಾತ್ರೇಯ ದೇವಸ್ಥಾನ ಸಾರ್ವಜನಿಕರ ದರ್ಶನಕ್ಕೆ ನಿಷಿದ್ಧ ಇದೆ. ಆದರೆ, ಸಚಿವ ರಮೇಶ್ ಜಾರಕಿಹೊಳಿ ಆ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ನಿರ್ಬಂಧ ಇರುವ ದೇವಸ್ಥಾನಕ್ಕೆ ಹೋಗಿ ದರ್ಶನ ,ವಿಶೇಷ ಪೂಜೆ ಸಲ್ಲಿಸಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾದ ರಮೇಶ್ ಜಾರಕಿಹೊಳಿ ಮನೆ 'ಗೃಹಪ್ರವೇಶ'ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾದ ರಮೇಶ್ ಜಾರಕಿಹೊಳಿ ಮನೆ 'ಗೃಹಪ್ರವೇಶ'

ಸ್ಥಳೀಯ ಬಿಜೆಪಿ ಮುಖಂಡರ ಜೊತೆ ಗಾಣಗಾಪುರ ದತ್ತಾತ್ರೆಯ ದೇವಸ್ಥಾನಕ್ಕೆ ಜಾರಕಿಹೊಳಿ ಹೋಗಿದ್ದರು. ಹೀಗಾಗಿ, ಸಾರ್ವಜನಿಕರಿಗೆ ಇಲ್ಲದ ದರ್ಶನ ಭಾಗ್ಯ ಸಚಿವರಿಗೇಕೆ? ಎಂದು ಜನರು ಪ್ರಶ್ನೆ ಮಾಡಿದ್ದಾರೆ. ದೇವರ ಸನ್ನಿಧಿಯಲ್ಲೂ ಸಚಿವರಿಗೊಂದು ನಿಯಮ, ಸಾರ್ವಜನಿಕರಿಗೊಂದು ನಿಯಮ ಎಂದು ಕೇಳಿದ್ದಾರೆ.

Ganagapur Villagers Upset With Ramesh Jarkiholi

ದೇವಸ್ಥಾನದ ಆಡಳಿತ ಮಂಡಳಿ ಸಚಿವರಿಗೆ ನೀಡಿರುವ ಅವಕಾಶಕ್ಕೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜುಲೈ 7 ರ ವರೆಗೆ ದತ್ತಾತ್ರೇಯ ದೇವಸ್ಥಾನ ಸಾರ್ವಜನಿಕರಿಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆ ಆದೇಶ ಉಲ್ಲಂಘಿಸಿ ಸಚಿವರಿಗೆ ದರ್ಶನಕ್ಕಷ್ಟೇ ಅವಕಾಶ ನೀಡಲಾಗಿದೆ.

English summary
Ganagapur villagers upset with Ramesh Jarkiholi for visit Dattatreya temple.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X