ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರ್‌ಎಸ್ಎಸ್ ಕಂಡರೆ ನನಗ್ಯಾಕೆ ಭಯ?; ಸಿದ್ದರಾಮಯ್ಯ

By ಕಲಬುರಗಿ ಪ್ರತಿನಿಧಿ
|
Google Oneindia Kannada News

ಬೆಂಗಳೂರು, ಅಕ್ಟೋಬರ್ 21; "ಕೇಸರಿ ಕಂಡರೆ, ಆರ್‌ಎಸ್ಎಸ್‌ನವರನ್ನು ಕಂಡರೆ ನನಗ್ಯಾಕೆ ಭಯ?. ನನಗೆ ಸಮಾಜದ ಬಗ್ಗೆ ಕಾಳಜಿ ಇದೆ. ಸಂಘ ಪರಿವಾರದವರು ಅಶಾಂತಿ ನಿರ್ಮಾಣದ ಮೂಲಕ ಸಮಾಜ ಒಡೆಯುವ ಕೆಲಸ ಮಾಡ್ತಾರೆ ಎಂಬ ಭಯವಿದೆ. ಸೌಹಾರ್ದತೆಗೆ ಧಕ್ಕೆಯಾಗಾದ ಮನಸಿಗೆ ನೋವಾಗುತ್ತದೆ" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಉಪ ಚುನಾವಣೆ, ಆರ್‌ಎಸ್‌ಎಸ್ ಸೇರಿದಂತೆ ಹಲವಾರು ವಿಚಾರಗಳ ಕುರಿತು ಮಾತನಾಡಿದರು. "ಬೆಲೆಯೇರಿಕೆ ವಿರುದ್ಧ ಜನರು ತಿರುಗಿ ಬೀಳುವವರೆಗೆ ನಿರಂತರವಾಗಿ ಸರ್ಕಾರಗಳು ಬೆಲೆ ಹೆಚ್ಚು ಮಾಡುತ್ತಲೇ ಇರುತ್ತವೆ. ವಿರೋಧ ಪಕ್ಷವಾಗಿ ನಾವು ಶಕ್ತಿಮೀರಿ ಹೋರಾಟ ಮಾಡುತ್ತಲೇ ಇದ್ದೇವೆ, ಜನ ಬೀದಿಗಳಿದಾಗ ಮಾತ್ರ ನಮ್ಮ ಹೋರಾಟಕ್ಕೆ ಬಲ ಬರುವುದು" ಎಂದರು.

ತನಿಖೆಯಾದರೆ ರಮೇಶ್ ಕುಮಾರ್ ಜೈಲಿಗೆ; ಡಾ. ಕೆ. ಸುಧಾಕರ್ ತನಿಖೆಯಾದರೆ ರಮೇಶ್ ಕುಮಾರ್ ಜೈಲಿಗೆ; ಡಾ. ಕೆ. ಸುಧಾಕರ್

"ಉಪ ಚುನಾವಣೆ ಆಗಲೀ, ಸಾರ್ವತ್ರಿಕ ಚುನಾವಣೆಯೇ ಆಗಲಿ ಎಲ್ಲಾ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಗೆಲುವಿಗಾಗಿ ಹೋರಾಟ ಮಾಡುತ್ತೇನೆ. ಕಳೆದ ಉಪಚುನಾವಣೆಯಲ್ಲಿ ಕೂಡ 15 ಕ್ಷೇತ್ರಗಳಲ್ಲಿ ನಿರಂತರ ಪ್ರಚಾರ ಮಾಡಿದ್ದೆ. ನಮ್ಮ ಪಕ್ಷದ ಪ್ರತಿ ಅಭ್ಯರ್ಥಿಯ ಗೆಲುವು ನನಗೆ ಮುಖ್ಯ" ಎಂದು ಸಿದ್ದರಾಮಯ್ಯ ತಿಳಿಸಿದರು.

ಎಚ್‌ಡಿಕೆ ಒಂದು ವಾರ ಆರ್‌ಎಸ್ಎಸ್ ಶಾಖೆಗೆ ಬರಲಿ; ನಳಿನ್ ಅಹ್ವಾನ ಎಚ್‌ಡಿಕೆ ಒಂದು ವಾರ ಆರ್‌ಎಸ್ಎಸ್ ಶಾಖೆಗೆ ಬರಲಿ; ನಳಿನ್ ಅಹ್ವಾನ

Why Should I Fear RSS Asks Former CM Siddaramaiah

"ಹಣ, ಅಧಿಕಾರದ ಆಸೆಗೆ ಕಾಂಗ್ರೆಸ್‌ಗೆ ದ್ರೋಹ ಮಾಡಿ ಬಿಜೆಪಿ ಪಕ್ಷ ಸೇರಿ ಮಂತ್ರಿಯಾಗಿರುವ ಡಾ. ಕೆ. ಸುಧಾಕರ್ ಅಧಿಕಾರದ ಮದದಿಂದ ವರ್ತಿಸುತ್ತಿದ್ದಾರೆ. ಈ ಅಧಿಕಾರ ಶಾಶ್ವತವಲ್ಲ. 2023ಕ್ಕೆ ಚುನಾವಣೆ ಬರುತ್ತೆ, ಯಾರು ಯಾರನ್ನು ಜೈಲಿಗೆ ಕಳಿಸುತ್ತಾರೆ ಎಂಬುದನ್ನು ನಾವೂ ನೋಡ್ತೀವಿ" ಎಂದರು.

ಆರ್‌ಎಸ್‌ಎಸ್ ವಿಚಾರ; ಸಿ. ಟಿ. ರವಿಗೆ ಟ್ವೀಟ್ ಬಾಣ ಬಿಟ್ಟ ಎಚ್‌ಡಿಕೆ!ಆರ್‌ಎಸ್‌ಎಸ್ ವಿಚಾರ; ಸಿ. ಟಿ. ರವಿಗೆ ಟ್ವೀಟ್ ಬಾಣ ಬಿಟ್ಟ ಎಚ್‌ಡಿಕೆ!

ಸುಧಾಕರ್ ಹೇಳಿದ್ದೇನು?; ಸಚಿವ ಡಾ. ಕೆ. ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ಬುಧವಾರ ಮಾತನಾಡಿದ್ದರು."ಜಿಲ್ಲಾ ಸಹಕಾರಿ ಬ್ಯಾಂಕಿನಲ್ಲಿ ಶಾಸಕ ರಮೇಶ್ ಕುಮಾರ್ ರಿಂಗ್ ಮಾಸ್ಟರ್ ಆಗಿದ್ದಾರೆ. ಶ್ರೀನಿವಾಸಗೌಡರು ರಮೇಶ್ ಕುಮಾರ್ ಅವರಿಂದ ಮಕ್ಮಲ್ ಟೋಪಿ ಹಾಕಿಸಿಕೊಳ್ಳುತ್ತಿದ್ದಾರೆ. ಸಹಕಾರ ಕ್ಷೇತ್ರದಲ್ಲೂ ರಾಜಕೀಯ ಬೆರೆಸಲಾಗುತ್ತಿದೆ. ಇದರಲ್ಲಿ ಪಾರದರ್ಶಕ ತನಿಖೆಯಾಗಬೇಕಿದ್ದು, ತನಿಖೆಗೆ ಒಪ್ಪದೆ ತಡೆಯಾಜ್ಞೆ ತಂದಿದ್ದಾರೆ" ಎಂದು ಆರೋಪಿಸಿದ್ದರು.

"ಇದರ ಬಗ್ಗೆ ಪಾರದರ್ಶಕ ತನಿಖೆಯಾಗಬೇಕಿದ್ದು, ತನಿಖೆಗೆ ಒಪ್ಪದೆ ತಡೆಯಾಜ್ಞೆ ತಂದಿದ್ದಾರೆ. ಇದರಲ್ಲೇ ಕಳ್ಳರು ಯಾರು ಎಂದು ಗೊತ್ತಾಗುತ್ತದೆ. ಸಾಚ ಆಗಿದ್ದರೆ ತನಿಖೆ ಆಗಿ ಸತ್ಯ ಎಂದು ಹೇಳುತ್ತಿದ್ದರು. ಸತ್ಯ ಹೊರಗೆ ಬಂದರೆ ಜೈಲಿಗೆ ಹೋಗುತ್ತೀರಿ ಎಂದು ಗೊತ್ತಿದೆ" ಎಂದು ಸುಧಾಕರ್ ಶ್ರೀನಿವಾಸಪುರದ ಕಾಂಗ್ರೆಸ್ ಶಾಸಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಉಪ ಚುನಾವಣೆ ಪ್ರಚಾರ; ಅಕ್ಟೋಬರ್ 30ರಂದು ನಡೆಯಲಿರುವ ಹಾನಗಲ್ ಮತ್ತು ಸಿಂಧಗಿ ಉಪ ಚುನಾವಣೆ ಪ್ರಚಾರಕ್ಕೆ ಸಿದ್ದರಾಮಯ್ಯ ಶನಿವಾರ ತೆರಳಿದ್ದರು. ಚುನಾವಣೆ ಪ್ರಚಾರ ಮುಗಿಸಿ ಅವರು ಬುಧವಾರ ರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ದೂರು; ಹಾನಗಲ್ ಉಪ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಪ್ರತಿಕ್ಷ ನಾಯಕ ಸಿದ್ದರಾಮಯ್ಯ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ.

ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ಎಸ್. ಎಸ್. ಮಿಟ್ಟಲಕೊಡ ಹಾನಗಲ್ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಅಕ್ಟೋಬರ್ 16ರಂದು ಹಾನಗಲ್ ತಾಲೂಕಿನ ಮಲಗುಂದ ಗ್ರಾಮದಲ್ಲಿ ನಡೆದ ಸಮಾವೇಶದಲ್ಲಿ ಸಿದ್ದರಾಮಯ್ಯ ಮಾತನಾಡಿದ್ದರು.

ಸಿ. ಎಂ. ಉದಾಸಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸಂಗೂರ ಸಕ್ಕರೆ ಕಾರ್ಖಾನೆಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪ ಮಾಡಿದ್ದರು. ಸಿದ್ದರಾಮಯ್ಯ ಮತದಾರರ ದಿಕ್ಕು ತಪ್ಪಿಸಿದ್ದಾರೆ. ಅಗಲಿದ ನಾಯಕನಿಗೆ ಅಗೌರವ ತೋರಿಸಿದ್ದಾರೆ. ಸಿದ್ದರಾಮಯ್ಯಗೆ ಚುನಾವಣಾ ನೀತಿ ಸಂಹಿತೆ ಅರಿವು ಇದ್ದರೂ ಉದ್ದೇಶ ಪೂರ್ವಕವಾಗಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ಆಗ ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಿಸಿಲ್ಲ. ಈಗ ಉಪ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಲಾಭಕ್ಕಾಗಿ, ಬಿಜೆಪಿ ಅಭ್ಯರ್ಥಿಗೆ ಮುಜುಗರ ತರಲು ಇಂತಹ ಆರೋಪ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

English summary
Why should I fear RSS?. My worry is that RSS will create tension in the society to further their political agenda said Leader of opposition in Karnataka Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X