ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲಬುರಗಿ: ಆರು ಕಾರ್ಮಿಕರ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ಭುಗಿಲೆದ್ದ ಆಕ್ರೋಶ

By ಕಲಬುರಗಿ ಪ್ರತಿನಿಧಿ
|
Google Oneindia Kannada News

ಕಲಬುರಗಿ, ಆಗಸ್ಟ್.03: ಶ್ರೀ ಸಿಮೆಂಟ್ ಫ್ಯಾಕ್ಟರಿಯಲ್ಲಿ ಕ್ರೇನ್ ಕುಸಿದು ಆರು ಕಾರ್ಮಿಕರು ದುರ್ಮರಣವನ್ನಪ್ಪಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಬಳಿಯಿರುವ ಫ್ಯಾಕ್ಟರಿಯಲ್ಲಿ ಗುರುವಾರ ನಡೆದಿದೆ.

ಈ ಘಟನೆಯಿಂದ ಉದ್ರಿಕ್ತಗೊಂಡ ಬಿಹಾರಿ ಕಾರ್ಮಿಕರು ಪೊಲೀಸರ ಮೇಲೆ ಕಲ್ಲು ತುರಾಟ ನಡೆಸಿದ್ದು, ಆರ್‌ಪಿಐ ಶರಣಪ್ಪ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದೀಗ ಪ್ರತಿಭಟನಕಾರರ ನಿಯಂತ್ರಣಕ್ಕೆ ಟಿಯರ್ ಗ್ಯಾಸ್ ಪ್ರಯೋಗಿಸಲಾಗುತ್ತಿದ್ದು, ಕಲ್ಲು ತುರಾಟದಲ್ಲಿ ಪೊಲೀಸ್ ವಾಹನದ ಗಾಜು ಪುಡಿ ಪುಡಿಯಾಗಿದೆ.

'ಹತ್ಯಾಚಾರ'ಕ್ಕೊಳಗಾದ ರಕ್ಷಿತಾ ಪರ ಮಾಲೂರಿನಲ್ಲಿ ಜನ ಸಾಗರ'ಹತ್ಯಾಚಾರ'ಕ್ಕೊಳಗಾದ ರಕ್ಷಿತಾ ಪರ ಮಾಲೂರಿನಲ್ಲಿ ಜನ ಸಾಗರ

ಕೆಲಸ ಬಹಿಷ್ಕರಿಸಿ ಪ್ರತಿಭಟನೆ

ಸ್ಥಳಕ್ಕೆ ಜಿಲ್ಲಾಧಿಕಾರಿ ಆರ್ ವೆಂಕಟೇಶ್‌ಕುಮಾರ್, ಎಸ್ಪಿ ಎನ್ ಶಶಿಕುಮಾರ ಭೇಟಿ ನೀಡಿದ್ದು, ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಕಾರ್ಮಿಕರು ಇದೇ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

Workers are protesting demanding justice for six workers

ಕೆಲಸ ಸ್ಥಗಿತಗೊಳಿಸಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದು, ದುರಂತದಲ್ಲಿ ಗಾಯಗೊಂಡ ಕಾರ್ಮಿಕರ ಮಾಹಿತಿ ನೀಡದಿರುವುದಕ್ಕೆ ಕಾರ್ಮಿಕರು ಆಕ್ರೋಶ ವ್ಯಕಪಡಿಸುತ್ತಿದ್ದಾರೆ. ಸದ್ಯ ಕಂಪನಿ‌ ಆಡಳಿತ ಮಂಡಳಿ ವಿರುದ್ಧ ಕಾರ್ಮಿಕರ ಆಕ್ರೋಶ ಭುಗಿಲೆದ್ದಿದೆ.

ಸಾವಿರಕ್ಕೂ ಅಧಿಕ ಕಾರ್ಮಿಕರು ಕೆಲಸ ಬಹಿಷ್ಕರಿಸಿ ಸೂಕ್ತ‌ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

English summary
Workers are protesting demanding justice for six workers. Six Bihar workers were died when a crane collapsed in the Sri Cement factory in kodla in Kalaburagi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X