'ಕರ್ನಾಟಕ ಭಕ್ತರಿಗಾಗಿ ಶ್ರೀಶೈಲದಲ್ಲಿ 1.5 ಕೋಟಿ ರು. ಯಾತ್ರಿ ನಿವಾಸ'
ಕಲಬುರಗಿ, ಮೇ 10 : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿರುವ ಶ್ರೀಶೈಲದ ಮಲ್ಲಿಕಾರ್ಜುನ ದರ್ಶನಕ್ಕೆ ರಾಜ್ಯದಿಂದ ತೆರಳಿವ ಭಕ್ತರಿಗೆ ಅನುಕೂಲ ಮಾಡಿಕೊಡಲು ಕರ್ನಾಟಕ ಸರ್ಕಾರ ಮುಂದಾಗಿದೆ.
ಕರ್ನಾಟದ ಭಕ್ತರಿಗೆ ಅನುಕೂಲ ಕಲ್ಪಿಸಲು ಶ್ರೀಶೈಲದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 1.5 ಕೋಟಿ ರು. ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿಳಿಸಿದರು.

ಅವರು ಬುಧವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಆಶ್ರಯದಲ್ಲಿ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಿದ ಮಹಾಸಾಧ್ವಿ ಶಿರಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತ್ಯೋತ್ಸವನ್ನು ಉದ್ಘಾಟಿಸಿ ಮಾತನಾಡಿ, ಯಾತ್ರಿ ನಿವಾಸ ನಿರ್ಮಿಸಲು ಪ್ರವಾಸೋದ್ಯಮ ಸಚಿವರಾದ ಪ್ರಿಯಾಂಕ ಖರ್ಗೆ ಅವರೊಂದಿಗೆ ಚರ್ಚಿಸಲಾಗಿದೆ. ಅವರು ಸಮ್ಮತಿಯನ್ನು ಸೂಚಿಸಿರುವುದಾಗಿ ತಿಳಿಸಿದರು.












Click it and Unblock the Notifications