ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲಬುರಗಿ ಏರ್‌ ಪೋರ್ಟ್ ಉದ್ಘಾಟಿಸಲಿದ್ದಾರೆ ಯಡಿಯೂರಪ್ಪ

|
Google Oneindia Kannada News

ಕಲಬುರಗಿ, ನವೆಂಬರ್ 17 : ಮುಖ್ಯಮಂತ್ರಿ ಯಡಿಯೂರಪ್ಪ ಕಲಬುರಗಿ ವಿಮಾನ ನಿಲ್ದಾಣವನ್ನು ನವೆಂಬರ್ 22ರಂದು ಉದ್ಘಾಟಿಸಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಸುಮಾರು 5 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ ಹಾಗೂ ಲೋಕೋಪಯೋಗಿ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಸೇರಿದಂತೆ ವಿವಿಧ ನಾಯಕರು ಪಾಲ್ಗೊಳ್ಳಲಿದ್ದಾರೆ.

ನ. 22ರಿಂದ ಕಲಬುರಗಿ-ಬೆಂಗಳೂರು ವಿಮಾನ, ವೇಳಾಪಟ್ಟಿನ. 22ರಿಂದ ಕಲಬುರಗಿ-ಬೆಂಗಳೂರು ವಿಮಾನ, ವೇಳಾಪಟ್ಟಿ

ವಿಮಾನ ನಿಲ್ದಾಣದ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಉದ್ಘಾಟನಾ ಕಾರ್ಯಕ್ರಮದ ವೇದಿಕೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳ ನಿರ್ವಹಣೆ ನೋಡಿಕೊಳ್ಳಲಿದೆ. ಶಿಷ್ಠಚಾರದಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳಿಗೆ ಆಮಂತ್ರಣ ಪತ್ರಿಕೆ ತಲುಪಿಸಲಾಗಿದೆ.

ಶೀಘ್ರ ಬೆಂಗಳೂರು-ಕಲಬುರಗಿ-ತಿರುಪತಿ ನಡುವೆ ವಿಮಾನ ಹಾರಾಟ ಶೀಘ್ರ ಬೆಂಗಳೂರು-ಕಲಬುರಗಿ-ತಿರುಪತಿ ನಡುವೆ ವಿಮಾನ ಹಾರಾಟ

Yediyurappa To Inaugurate Kalaburagi Airport On November 22

ಭದ್ರತಾ ದೃಷ್ಠಿಯಿಂದ ಗಣ್ಯರಿಗೆ, ಮಾಧ್ಯಮದವರಿಗೆ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಮಾಡಲಾಗಿದೆ. ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ. ಎಲ್ಲಿಯೂ ಪ್ಲಾಸ್ಟಿಕ್ ಬಳಸದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ಸಂಚಾರಕ್ಕೆ ಒಪ್ಪಿಗೆಕಲಬುರಗಿ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ಸಂಚಾರಕ್ಕೆ ಒಪ್ಪಿಗೆ

ಕಲಬುರಗಿ-ಬೆಂಗಳೂರು ಮಧ್ಯೆ ಸ್ಟಾರ್ ಏರ್ ಸಂಸ್ಥೆ ವಿಮಾನ ಸಂಚಾರ ಆರಂಭಿಸಲಿದೆ. ಇದಲ್ಲದೆ ಕಲಬುರಗಿ-ಹೈದ್ರಾಬಾದ್ ನಡುವೆ ವಿಮಾನ ಸಂಚಾರಕ್ಕೆ ಇಂಡಿಗೋ ಏರ್‍ಲೈನ್ಸ್‍ನೊಂದಿಗೆ ಸಹ ಚರ್ಚೆ ನಡೆದಿದೆ.

ಕರ್ನಾಟಕ ಸರ್ಕಾರ 175.57 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡಿದೆ. ಒಟ್ಟು 742.23 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣವಿದೆ. ಏರ್ ಬಸ್‌ನಂತಹ ದೊಡ್ಡ ವಿಮಾನಗಳು ಬಂದಿಳಿಯಲು ಅನುಕೂಲವಾಗುವಂತೆ ರನ್ ವೇ ನಿರ್ಮಾಣ ಮಾಡಲಾಗಿದೆ.

English summary
Karnataka Chief Minister B.S.Yediyurappa will inaugurate Kalaburagi airport on November 22, 2019. Bengaluru-Kalaburagi flight service will start that day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X