ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನ: ಅಪಾಯದಿಂದ ಪಾರು
ಕಲಬುರಗಿ, ಡಿಸೆಂಬರ್ 21 : ರೈಲಿಗೆ ತಲೆಕೊಟ್ಟು ಯುವತಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ಘಟನೆ ಕಲಬುರಗಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಕಲಬುರಗಿ ನಗರ ಕೋರಂಟಿ ಹನುಮಾನ್ ದೇವಸ್ಥಾನದ ಸಮೀಪದಲ್ಲಿ ಈ ಘಟನೆ ನಡೆದಿದ್ದು, ಬೆಳಗ್ಗೆ ಏಳು ಗಂಟೆಗೆ ಚೆನ್ನೈ-ದಾದರ್ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ಯುವತಿಯ ಸಿಲುಕಿ ಯುವತಿಯ ಬಲಗಾಲು ತುಂಡಾಗಿದೆ. ರೈಲು ಹಳಿ ಮೇಲೆ ಯುವತಿಯನ್ನು ಕಂಡು ಚಾಲಕ ರೈಲನ್ನು ನಿಲ್ಲಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಯುವಕಿ ಬದುಕುಳಿದಿದ್ದಾಳೆ.

ಆದಾಗ್ಯೂ ಬಲಗಾಲು ತುಂಡಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಲೆ. ಗಂಭೀರ ಗಾಯಗೊಂಡ ಯುವತಿಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿ ಯಾರು, ಆತ್ಮಹತ್ಯೆ ಯತ್ನಕ್ಕೆ ಕಾರಣವೇನು ಎನ್ನುವುದು ತಿಳಿದುಬಂದಿಲ್ಲ.












Click it and Unblock the Notifications