ತಿಪಟೂರು ವಿಧಾನಸಭಾ ಕ್ಷೇತ್ರ: ಶಿಕ್ಷಣ ಸಚಿವರಿಗೆ ಮತ್ತೆ ಮಣೆ ಹಾಕುತ್ತಾರಾ ಕೊಬ್ಬರಿ ನಾಡಿನ ಮಂದಿ?
ತುಮಕೂರು, ಮಾರ್ಚ್ 19: ಕಲ್ಪತರು ನಾಡಿನ ಪ್ರಮುಖ ತಾಲ್ಲೂಕು ತಿಪಟೂರು. ಇದು ಬೆಂಗಳೂರಿನಿಂದ ಸುಮಾರು 150 ಕಿ.ಮಿ. ದೂರದಲ್ಲಿದ್ದು ತನ್ನ ಜಿಲ್ಲಾ ಕೇಂದ್ರವಾದ ತುಮಕೂರಿನಿಂದ 70 ಕಿ.ಮೀ ಮತ್ತು ಹಾಸನದಿಂದ 65 ಕಿ.ಮೀ ದೂರದಲ್ಲಿದೆ. ತೆಂಗಿನ ಕಾತಿ ಮತ್ತು ಕೊಬ್ಬರಿಗೆ ಪ್ರಸಿದ್ಧವಾಗಿರುವ ತಾಲೂಕು ರಾಜಕೀಯವಾಗಿಯೂ ತನ್ನದೆ ಆದ ಸ್ಥಾನ ಉಳಿಸಿಕೊಂಡಿದೆ.
ರಾಜ್ಯಕ್ಕೆ ಶಿಕ್ಷಣ ಸಚಿವರನ್ನು ಕೊಟ್ಟಿರುವ ತಿಪಟೂರು ಪ್ರಮುಖ ಶೈಕ್ಷಣಿಕ ಕೇಂದ್ರ ಕೂಡ ಹೌದು. ತಿಪಟೂರಿನ ಕಲ್ಪತರು ವಿದ್ಯಾಸಂಸ್ಥೆ ಬಹಳ ಶೈಕ್ಷಣಿಕ ಕೇಂದ್ರಗಳನ್ನು ಆರಂಭಿಸಿದ್ದು. ಇದೇ ಸಂಸ್ಥೆಯು ಇಲ್ಲಿ ಒಂದು ಇಂಜಿನಿಯರಿಂಗ್ ಕಾಲೇಜನ್ನು ಹೊಂದಿದೆ. ಇದೇ ವಿಧಾನಸಭಾ ಕ್ಷೇತ್ರದಿಂದ ಗೆದ್ದ ಬಿ.ಸಿ. ನಾಗೇಶ್ ಇಂದು ಕರ್ನಾಟಕದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಮತ್ತು ಸಕಾಲ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
*ತಿಪಟೂರಿನ ಇತಿಹಾಸ*
ಐತಿಹಾಸಿಕವಾಗಿ ಈ ಪಟ್ಟಣಕ್ಕೆ ತಿಪಟೂರು ಹೆಸರು ಬರಲಿಕ್ಕೆ ಕಾರಣ ಇಲ್ಲಿನ ಅಣತಿ ದೂರದಲ್ಲಿರುವ ನೊಣವಿನಕೆರೆ ಕಲ್ಲೇಶ್ವರ ದೇಗುಲದಲ್ಲಿ ನೊಳಂಬ ರಾಜರಿಗೆ ಪಟ್ಟಕಟ್ಟಿದ್ದು. ಮೂರು ರಾಜರಿಗೆ ಪಟ್ಟಕಟ್ಟಿದ ಈ ಸ್ಥಳ ತ್ರಿಪಟ್ಟದೂರು ಬರುಬರುತ್ತಾ ಜನರ ಬಾಯಲ್ಲಿ ತಿಪಟೂರು ಎಂದಾಗಿದೆ ಎನ್ನಲಾಗುತ್ತದೆ. ಇದು ತೆಂಗು ಮತ್ತು ಕೊಬ್ಬರಿಗೆ ಬಹು ಪ್ರಸಿದ್ದವಾಗಿರುವ ತಾಲೂಕು ಕೇಂದ್ರವಾಗಿದೆ.

ತಿಪಟೂರಿಗೆ ಎರಡು ಕಿ.ಮೀ. ದೂರದಲ್ಲಿರುವ ಹಳೇಪಾಳ್ಯ ಗ್ರಾಮವು ನೇಕಾರಿಕೆಗೆ ಪ್ರಸಿದ್ಧಿಯಾಗಿದೆ. ಇಲ್ಲಿರುವ ಚೌಡೇಶ್ವರಿ ದೇವಾಲಯವು ಅತ್ಯಂತ ಸುಂದರವಾಗಿದ್ದು ಪ್ರತೀ ಶ್ರಾವಣ ಹುಣ್ಣಿಮೆಯಂದು ಇಲ್ಲಿ ಅಪರೂಪದ ಉತ್ಸವ ನಡೆಯುತ್ತದೆ. ಅಲ್ಲದೆ ಈ ಒಂದು ಚಿಕ್ಕ ಗ್ರಾಮದಲ್ಲೇ ಹತ್ತಕ್ಕೂ ಹೆಚ್ಚು ಸುಂದರ ದೇವಾಲಯಗಳಿದ್ದು ದೇವಾಲಯಗಳ ಗ್ರಾಮ ಎಂದೂ ಪ್ರಸಿದ್ಧವಾಗಿದೆ.
*ರಾಜಕೀಯ*
1951ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಜಿ.ತಿಮ್ಮೇಗೌಡ ಇಲ್ಲಿ ಗೆಲುವು ಸಾಧಿಸಿದ್ದರು. ಬಳಿಕ 1957 ಮತ್ತು 1962 ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಅಭ್ಯರ್ಥಿ ಕೆ.ಪಿ. ರೇವಣ್ಣಸಿದ್ದಪ್ಪ ಇಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. 1967ರಲ್ಲಿ ಕಾಂಗ್ರೆಸ್‌ನ ಎಂ. ಎಸ್. ನೀಲಕಂಠಸ್ವಾಮಿ ಶಾಸಕರಾಗಿದ್ದರು, ಆದರೆ ನಂತರ ನಡೆದ ಉಪಚುನಾವಣೆಯಲ್ಲಿ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ವಿ. ಎಲ್. ಶಿವಪ್ಪ ಆಯ್ಕೆಯಾಗಿದ್ದರು.
1972 ಟಿ.ಎಂ. ಮಂಜುನಾಥ್ ಶಾಸಕ ಸ್ಥಾನಕ್ಕೆ ಬರುವ ಮೂಳಕ ಮತ್ತೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ 1985 ರಲ್ಲಿ ಬಿಟ್ಟು 1989ರ ವರೆಗೂ ಅಧಿಕಾರ ಕೈಯಲ್ಲಿ ಹಿಡಿದಿತ್ತು. ಹೀಗಾಗಿ ಇದು ಕಾಂಗ್ರೆಸ್ ಭದ್ರಕೋಟೆ ಎನಿಸಿಕೊಂಡಿತ್ತು. ಆದರೆ, 1994 ರಲ್ಲಿ ಭಾರತೀಯ ಜನತಾ ಪಕ್ಷದ ಬಿ.ನಂಜಾಮರಿ ಶಾಸಕರಾದರು. ಇದಾದ ಮೇಲೆ
1999ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕೆ. ಷಡಕ್ಷರಿ 2004ರ ಚುನಾವಣೆಯಲ್ಲಿ ಬಿಜೆಪಿಯಿಂದ ಜಾತ್ಯತೀತ ಜನತಾ ದಳಕ್ಕೆ ಸೇರಿದ್ದ ಬಿ.ನಂಜಾಮರಿ ಆಯ್ಕೆಯಾದರು.

2008: ಭಾರತೀಯ ಜನತಾ ಪಕ್ಷದಿಂದ ಬಿ.ಸಿ.ನಾಗೇಶ್ ತಿಪಟೂರು ರಾಜಕೀಯಕ್ಕೆ ಬಂದರು. ನಂತರದ ವರ್ಷದಲ್ಲೇ ಅಂದರೆ 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕೆ. ಷಡಕ್ಷರಿ ವಿರುದ್ಧ ಸೋಲು ಕಂಡರು. ಪಟ್ಟು ಬಿಡದ ಬಿ.ಸಿ.ನಾಗೇಶ್ ಮತ್ತೆ 2018 ರಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನ ಕೆ ಷಡಕ್ಷರಿ ಅವರನ್ನು 25,563 ಮತಗಳ ಅಂತರದಿಂದ ಗೆದ್ದು ಮತ್ತೆ ಶಾಸಕ ಸ್ಥಾನವನ್ನು ಪಡೆದು ಬಿಜೆಪಿಯನ್ನು ಕ್ಷೇತ್ರದಲ್ಲಿ ಅಧಿಕಾರಕ್ಕೆ ತಂದರು. ಇದರ ಜೊತೆಗೆ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾದರು.
ಈ ಬಾರಿಯೂ ಬಿಜೆಪಿಯಿಂದ ತಿಪಟೂರು ಕ್ಷೇತ್ರದಲ್ಲಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಕಣಕ್ಕೆ ಇಳಿಯಲಿದ್ದು, ಬಿಸಿ ನಾಗೇಶ್ ಗೆಲುವು ಸಾಧಿಸಬಹುದು ಎಂದು 'ಲೋಕ್ ಪೋಲ್ ಸಂಸ್ಥೆಯ ಚುನಾವಣಾಪೂರ್ವ ಸಮೀಕ್ಷೆ ಮಾಹಿತಿ ಬಹಿರಂಗಪಡಿಸಿದೆ. ಬಿಸಿ ನಾಗೇಶ್ ಅವರು ವಿದ್ಯಾರ್ಥಿ ದಿನಗಳಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಘಟನೆಯ ಸದಸ್ಯರಾಗಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಹಲವಾರು ವರ್ಷಗಳಿಂದ ಸಂಘದಲ್ಲಿ ಪೂರ್ಣ ಸಮಯದ ಕಾರ್ಯಕರ್ತರಾಗಿದ್ದಾರೆ.
ಬಳಿಕ 1984 ರಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದರು. ಅವರು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್.ಸಂತೋಷ್ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ. ಬಿಸಿ ನಾಗೇಶ್ ಅವರು 2008 ಮತ್ತು 2018ರಲ್ಲಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಿಪಟೂರು ಕ್ಷೇತ್ರದಿಂದ ಗೆಲುವು ದಾಖಲಿಸಿದ್ದಾರೆ. 2021 ರಲ್ಲಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಗೊಂಡು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದರು.

ಇನ್ನು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಇನ್ನೂ ಯಾರು ಕಣಕ್ಕೆ ಇಳಿಯುತ್ತಾರೋ ಎಂಬುದು ತಿಳಿದಿಲ್ಲ. ಕಳೆದ ಚುನಾವಣೆಯಲ್ಲಿ ಕೆ. ಷಡಕ್ಷರಿ 35,820 ಮತಗಳನ್ನು ಪಡೆದಿದ್ದರು. ಈ ಬಾರಿ ಅವರಿಗೆ ಟಿಕೆಟ್ ಸಿಗಲಿದೆ ಎಂಬ ಬಗ್ಗೆ ಮಾಹಿತಿಯಿಲ್ಲ. ಟಿಕೆಟ್ ಹಂಚಿಕೆಯ ಬಗ್ಗೆ ಗೊಂದಲಗಳಿದ್ದು, ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ. ಟಿ. ಶಾಂತಕುಮಾರ್ ಕಾಂಗ್ರೆಸ್ ಪಕ್ಷ ಬಿಟ್ಟಿದ್ದು, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರಿದ್ದಾರೆ.
2018ರ ಚುನಾವಣೆಯಲ್ಲಿಯೇ ಕೆ. ಟಿ. ಶಾಂತಕುಮಾರ್ ವಿವಿಧ ಪಕ್ಷದ ಟಿಕೆಟ್‌ಗಾಗಿ ಪ್ರಯತ್ನ ನಡೆಸಿದ್ದರು. ಆದರೆ ಯಾವ ಪಕ್ಷದಲ್ಲೂ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋಲು ಕಂಡಿದ್ದರು. ಕಳೆದ ಚುನಾವಣೆಯಲ್ಲಿ 13506 ಮತಗಳನ್ನು ಪಡೆದಿದ್ದ ಕೆ. ಟಿ. ಶಾಂತಕುಮಾರ್ ಬಳಿಕ ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡಿದ್ದರು. ಈಗ ಜೆಡಿಎಸ್ ಸೇರಿದ್ದಾರೆ.
ಜೆಡಿಎಸ್‌ನಿಂದಲೂ ಇನ್ನು ಯಾರಿಗೆ ಟಿಕೆಟ್ ಎಂಬುದು ಘೋಷಣೆಯಾಗಿಲ್ಲ. ಕಳೆದ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಜೆಡಿಎಸ್‌ನ ಲೋಕೇಶ್ವರ 17,027 ಮತ ಪಡೆದು ಸೋಲು ಕಂಡಿದ್ದರು. ಈ ಬಾರಿ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಕೆ. ಟಿ. ಶಾಂತಕುಮಾರ್ ಜೆಡಿಎಸ್ ಸೇರಿದ್ದು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ, ಈ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಇನ್ನು ಖಚಿತಪಡಿಸಿಲ್ಲ.
*ಮತದಾರರು*
ತಿಪಟೂರಿ ಕ್ಷೇತ್ರದಲ್ಲಿ ಸಾಮಾನ್ಯ ಮತದಾರರು, ಅನಿವಾಸಿ ಭಾರತೀಯರು ಎಲ್ಲರೂ ಸೇರಿ ಒಟ್ಟು 1,79,318 ಮತದಾರರಿದ್ದಾರೆ. ಸಾಮಾನ್ಯ ಮತದಾರರಲ್ಲಿ 87,904 ಪುರುಷರು, 91,352 ಮಹಿಳೆಯರು ಮತ್ತು ಲೈಂಗಿಕ ಅಲ್ಪಸಂಖ್ಯಾತರ ಸಂಖ್ಯೆ 20 ಇದೆ.. ಕ್ಷೇತ್ರದಲ್ಲಿ ಮತದಾರರ ಲಿಂಗ ಅನುಪಾತ 103.88 ಮತ್ತು ಅಂದಾಜು ಸಾಕ್ಷರತೆಯ ಪ್ರಮಾಣ 82% ಇದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications