5 ದಿನಗಳ ಕಾಲ ಬಿಜೆಪಿಯಿಂದ ಪ್ರತಿ ಕ್ಷೇತ್ರದಲ್ಲಿ ಬೈಕ್ ಜಾಥಾ

ಬೆಂಗಳೂರು, ಜೂನ್ 11 : ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಕರ್ನಾಟಕ ಬಿಜೆಪಿ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದು ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬೈಕ್ ಜಾಥಾ ಹಮ್ಮಿಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ, 2019ರ ಲೋಕಸಭೆ ಚುನಾವಣೆಗೆ ತಯಾರಿ ನಡೆಸಲು ಬೈಕ್ ಜಾಥಾ ಆಯೋಜನೆ ಮಾಡಲಾಗಿದೆ.

Karnataka BJP to take bike rally to every assembly constituency

ಜೂನ್ 15 ರಿಂದ 20 ತನಕ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬೈಕ್ ಜಾಥಾ ನಡೆಯಲಿದೆ. ಯಾವುದೇ ಕಾರಣಕ್ಕೂ ಈ ಜಾಥಾಕ್ಕೆ ಹಿನ್ನಡೆ ಆಗಬಾರದು, ಜಾಥಾವನ್ನು ಯಶಸ್ವಿಯಾಗಿ ಪೂರ್ಣಗೊಳಿಸಬೇಕು ಎಂದು ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

5 ದಿನಗಳ ಕಾಲ ರಾಜ್ಯದ 224 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬೈಕ್ ಜಾಥಾ ನಡೆಯಲಿದೆ. 2018ರ ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದ ಬಳಿಕ ರಾಜ್ಯ ಬಿಜೆಪಿ ಘಟಕ ಹಮ್ಮಿಕೊಂಡಿರುವ ಪ್ರಚಾರಾಂದೋಲನ ಇದಾಗಿದೆ.

ಜಿಲ್ಲಾಧ್ಯಕ್ಷರು, ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು, ಜಿಲ್ಲೆಯ ಪ್ರಮುಖ ನಾಯಕರ ನೇತೃತ್ವದಲ್ಲಿ ಈ ಜಾಥಾ ನಡೆಯಲಿದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ಜಾಥಾ ಮೂಲಕ ಪ್ರತಿ ಕ್ಷೇತ್ರಕ್ಕೆ ತಲುಪಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+