Periyapatna Elections: ಪಿರಿಯಾಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ನೇರ ಹಣಾಹಣಿ
ಮೈಸೂರು, ಮಾರ್ಚ್ 27: ಪಿರಿಯಾಪಟ್ಟಣ ಇದು ಮೈಸೂರು ಜಿಲ್ಲೆಯ ಒಂದು ತಾಲೂಕು ಕೇಂದ್ರವಾಗಿದ್ದು ಮಂಗಳೂರು ಮತ್ತು ಮೈಸೂರು ಹೆದ್ದಾರಿಯಲ್ಲಿ ಮೈಸೂರಿನಿಂದ 70ಕಿ. ಮೀ ದೂರದಲ್ಲಿರುವ ಒಂದು ಪಟ್ಟಣ ಪಂಚಾಯತಿ ಆಗಿದೆ. ಮೈಸೂರು -ಬಂಟ್ವಾಳ-ಬೆಂಗಳೂರು ಹೆದ್ದಾರಿಯಲ್ಲಿರುವ ಪಿರಿಯಾಪಟ್ಟಣ ಗಡಿಭಾಗದ ಕ್ಷೇತ್ರವಾಗಿದೆ. ಕೇರಳದ ಗಡಿ, ಕೊಡಗಿನ ಗೋಣಿಕೊಪ್ಪಲು, ಸಿದ್ದಾಪುರಕ್ಕೆ ಸಂಪರ್ಕ ಹೊಂದಿದೆ.
ಪಿರಿಯಾಪಟ್ಟಣದಲ್ಲಿ ಪ್ರಸಿದ್ಡ ಮಸಣಿಕಮ್ಮ ದೇವಾಲಯವಿದೆ. ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಪುಟ್ಟಣ ಕಣಗಾಲ್, ಜಾನಪದ ವಿದ್ವಾಂಸರಾದ ಪಿ.ಕೆ.ರಾಜಶೇಖರ್ ಹಾಗೂ ಲೇಖಕಿ, ಜಾನಪದ ಸಂಶೋಧಕಿಯಾದ ವಿಜಯಲಕ್ಷ್ಮಿ ಮನಾಪುರ ಅವರ ಊರು ಈ ಪಿರಿಯಾಪಟ್ಟಣ.

ತಂಬಾಕು ಬೆಳೆ, ಶುಂಠಿ ಸೇರಿದಂತೆ ವಾಣಿಜ್ಯ ಬೆಳೆಗಳನ್ನು ಈ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು, ಮಂಗಳೂರು ಮತ್ತು ಮೈಸೂರು ನಡುವೆ ಇರು ಪ್ರದೇಶವಾಗಿರುವುದರಿಂದ ಇಲ್ಲಿ ನಗರಗಳಿಗೆ ಹೋಲಿಸಿದರೆ ಹಿತಕರವಾದ ವಾತಾವರಣವಿದೆ. ಸದ್ಯ ಅಭಿವೃದ್ಧಿಯತ್ತ ಸಾಗುತ್ತಿರುವ ಪಿರಿಯಾಪಟ್ಟಣ ವಿಧಾನಸಭಾಕ್ಷೇತ್ರದ ರಾಜಕೀಯ ವಿಶ್ಲೇಷಣೆ ಇಲ್ಲಿದೆ.
| ಪಿರಿಯಾಪಟ್ಟಣ ಕ್ಷೇತ್ರದ ಮತದಾರರ ವಿವರ |
| ಒಟ್ಟು ಮತದಾರರು - 1,77,072 |
| ಪುರುಷ ಮತದಾರರು - 89,469 |
| ಮಹಿಳಾ ಮತದಾರರು - 87,551 |
ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಜಿದ್ದಾಜಿದ್ದಿಯ ಪೈಪೋಟಿ ಇದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ನೇರಾ ಹಣಾಹಣಿಯಿದ್ದು, ಈ ಬಾರಿ ಬಿಜೆಪಿ ಕೂಡ ಕ್ಷೇತ್ರದಲ್ಲಿ ತನ್ನ ಖಾತೆ ತೆರೆಯ ಬೇಕು ಎನ್ನುವ ಪ್ರಯತ್ನದಲ್ಲಿದೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಎಂ.ಎಸ್ ಮರಿಯಪ್ಪ ಈ ಕ್ಷೇತ್ರ ಮೊದಲ ಶಾಸಕರಾಗಿದ್ದಾರೆ.
ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ರಾಜಕೀಯ ಇತಿಹಾಸ
1952ರಿಂದ ಈವರೆಗೆ ನಡೆದ ಚುನಾವಣೆಯಲ್ಲಿ ಆರು ಬಾರಿ ಕಾಂಗ್ರೆಸ್ ಅಭ್ಯರ್ಥಿ, ಮೂರು ಬಾರಿ ಜೆಡಿಎಸ್ ಅಭ್ಯರ್ಥಿ ಹಾಗೂ ಎರಡು ಬಾರಿ ಪಕ್ಷೇತರ ಅಭ್ಯರ್ಥಿ,ಒಂದ ಬಾರಿ ಜನತಾ ಪಕ್ಷದ ಅಭ್ಯರ್ಥಿ ಹಾಗೂ ಒಂದು ಬಾರಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಎಂ.ಎಸ್ ಮರಿಯಪ್ಪ, ಎನ್.ಆರ್ ಸೋಮಣ್ಣ, ಕೆ.ಎಂ ದೇವಯ್ಯ, ಎಚ್.ಎಂ ಚನ್ನಬಸಪ್ಪ, ಕೆ.ವೆಂಕಟೇಶ್, ಎಚ್.ಸಿ ಬಸವರಾಜು, ಕೆ.ಮಹದೇವ್ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿ ಅಧಿಕಾರ ನಡೆಸಿದ್ದಾರೆ.

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕೆ.ವೆಂಕಟೇಶ್ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಅವರು ಬಳಿಕ ಕಾಂಗ್ರೆಸ್ ಸೇರ್ಪಡೆಗೊಂಡು ಕ್ಷೇತ್ರವನ್ನು ಕಾಂಗ್ರೆಸ್ ಭದ್ರಕೋಟೆ ಮಾಡಿದ್ದರು. ಆದರೆ 2018ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಕೆ.ಮಹದೇವ್ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿ, ಕೆ.ವೆಂಕಟೇಶ್ ಅವರ ಸತತ ಗೆಲುವಿಗೆ ಬ್ರೇಕ್ ಹಾಕಿದರು. 2018ರ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಕೆ.ಮಹದೇವ್ ಕ್ಷೇತ್ರವನ್ನು ಜೆಡಿಎಸ್ ತೆಕ್ಕೆಗೆ ತಂದರು.
| ವರ್ಷ | ವಿಜೇತರು | ಮತಗಳು | ಸೋತವರು | ಮತಗಳು |
| 2008 | ಕೆ. ವೆಂಕಟೇಶ್ (ಕಾಂಗ್ರೆಸ್) | 38,453 | ಕೆ. ಮಹದೇವ್ (ಜೆಡಿಎಸ್) | 37,574 |
| 2013 | ಕೆ. ವೆಂಕಟೇಶ್ (ಕಾಂಗ್ರೆಸ್) | 62,045 | ಕೆ. ಮಹದೇವ್ (ಜೆಡಿಎಸ್) | 59,957 |
| 2018 | ಕೆ. ಮಹದೇವ್ (ಜೆಡಿಎಸ್) | 77,770 | ಕೆ. ವೆಂಕಟೇಶ್ (ಕಾಂಗ್ರೆಸ್) | 70,277 |
ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಪ್ರಸ್ತುತ ರಾಜಕೀಯ
ಸಾಲು ಸಾಲು ಗೆಲುವಿನಿಂದ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರನಂತೆ ಮೆರೆಯುತ್ತಿದ್ದ ಕೆ.ವೆಂಕಟೇಶ್ ಅವರಿಗೆ ಕಳೆದ ಚುನಾವಣೆ ಸೋಲಿನ ಕಹಿ ತೋರಿಸಿದ್ದು, ಈ ಬಾರಿ ಶತಾಯಗತಾಯ ಗೆಲುವು ಸಾಧಿಸಲೇ ಬೇಕು ಎನ್ನುವ ಹಠಕ್ಕೆ ಬಿದ್ದಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಎರಡೂ ಪಕ್ಷಗಳು ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಆರಂಭಿಸಿದ್ದು, ಅಭಿವೃದ್ಧಿ ಮಂತ್ರ ಜಪಿಸುತ್ತಿದೆ. ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಿದ್ದು, ಕಾಂಗ್ರೆಸ್‌ನಿಂದ ಕೆ.ವೆಂಕಟೇಶ್, ಜೆಡಿಎಸ್‌ನಿಂದ ಕೆ.ಮಹದೇವ್ ಹಾಗೂ ಆಮ್ ಆದ್ಮಿ ಪಕ್ಷದಿಂದ ರಾಜಶೇಖರ್ ದೊಡ್ಡಣ್ಣ ಈ ಬಾರಿಯ ಚುನಾವಣಾ ಕಣದಲ್ಲಿದ್ದಾರೆ.
ಇನ್ನು ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಖಾತೆ ತೆರೆಯಲು ಬಿಜೆಪಿ ಕೂಡ ಚುನಾವಣೆ ತಯಾರಿ ಆರಂಭಿಸಿದೆ. ಕಳೆದ ಚುನಾವಣೆಯಲ್ಲಿ ಬೆಂಗಳೂರು ಮೂಲದ ಮಂಜುನಾಥ್ ಸ್ಪರ್ಧಿಸಿ ಸೋಲುಕಂಡಿದ್ದರು. ಈ ಬಾರಿ ಸಿ.ಎಚ್ ವಿಜಯಶಂಕರ್, ಕೌದಹಳ್ಳಿ ಸೋಮಶೇಖರ್, ಬಿಜೆಪಿ ತಾಲೂಕು ಅಧ್ಯಕ್ಷ ಆರ್.ಟಿ ಸತೀಶ್ ಮಾಜಿ ಸೈನಿಕ ವಿಕ್ರಂಗೌಡ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಪಿರಿಯಾಪಟ್ಟಣ ವಿಧಾನಸಭಾ ಚುನಾವಣಾ 2018ರ ಫಲಿತಾಂಶ
2018 ಚುನಾವಣೆಯಲ್ಲಿ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಕೆ.ಮಹದೇವ್ ಸ್ಪರ್ಧಿಸಿದ್ದು, 77,770 ಮತಗಳನ್ನು ಪಡೆದಿದ್ದರು. ಇನ್ನು ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಕೆ.ಮಹದೇವ್ 70,277 ಮತಗಳನ್ನು ಪಡೆದು 7,493 ಮತಗಳ ಅಂತರದಲ್ಲಿ ಸೋಲು ಕಂಡಿದ್ದರು.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ











Click it and Unblock the Notifications