ಕರ್ನಾಟಕ ಬಂದ್‌ಗೆ 1,200 ಸಂಘಟನೆಗಳ ಬೆಂಬಲ

Posted By:
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 07 : ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಒಕ್ಕೂಟ ಸೆಪ್ಟೆಂಬರ್ 9ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದೆ. 1,200 ಕನ್ನಡ ಪರ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ.

ಮಂಗಳವಾರ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕರ್ನಾಟಕ ಬಂದ್ ಬಗ್ಗೆ ಮಾಹಿತಿ ನೀಡಿದರು. 'ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವುದಕ್ಕೆ ನಮ್ಮ ಸಂಪೂರ್ಣ ವಿರೋಧವಿದೆ. ಈ ತೀರ್ಪು ಖಂಡಿಸಿ ಬಂದ್ ಕರೆ ನೀಡಲಾಗಿದೆ' ಎಂದರು.[ಸೆಪ್ಟೆಂಬರ್ 9ರಂದು ಕರ್ನಾಟಕ ಬಂದ್]

vatal nagaraj

'ಕರ್ನಾಟಕ ಬಂದ್‌ಗೆ ರಾಜ್ಯದಲ್ಲಿನ 1,200 ಕನ್ನಡಪರ ಸಂಘಟನೆಗಳು ಬೆಂಬಲ ನೀಡುತ್ತಿವೆ. ಲಾರಿ ಮಾಲೀಕರ ಸಂಘ, ಸಿನಿಮಾ ಕಲಾವಿದರ ಸಂಘ ಬೆಂಬಲ ಕೊಡುವುದಾಗಿ ಹೇಳಿವೆ. ಬಂದ್ ದಿನ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಸಂಚಾರ ನಡೆಸುವುದಿಲ್ಲ, ಲಾರಿ, ಆಟೋ, ಟ್ಯಾಕ್ಸಿಗಳು ಸಂಚರಿಸುವುದಿಲ್ಲ. ಹೋಟೆಲ್, ಚಿತ್ರಮಂದಿರ ಬಾಗಿಲು ತೆರೆಯುವುದಿಲ್ಲ' ಎಂದರು.[ಮಂಡ್ಯದಲ್ಲಿ ಕಾವೇರಿ ಹೋರಾಟ : ಚಿತ್ರಗಳು]

'ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿ ಜೈಲಿಗೆ ಹೋಗಲು ನಾವು ಸಿದ್ಧರಿದ್ದೇವೆ. ಆದರೆ, ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ಕರ್ನಾಟಕ ಬಂದ್‌ಗೆ ರಾಜ್ಯದ ಎಲ್ಲಾ ಜನರು ಬೆಂಬಲ ನೀಡಬೇಕು' ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.[ಕಾವೇರಿ ವಿವಾದ : ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ವಿವರಗಳು]

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka will observe a day-long bandh on September 9, 2016 to protest against Supreme Court order. The Supreme Court on Monday ordered Karnataka to release 15,000 cusecs of Cauvery water to Tamil Nadu for ten days. Bandh has been called by more than 1,200 pro-Kannada organisations.
Please Wait while comments are loading...