ಬಡವರಿಗೆ ಗುಡ್ ನ್ಯೂಸ್; 1,80,253 ಮನೆಗಳ ಕಾಮಗಾರಿ ಬಗ್ಗೆ ಅಪ್‌ಡೇಟ್ ಕೊಟ್ಟ ಜಮೀರ್
ಬೆಂಗಳೂರು, ಆಗಸ್ಟ್ 18: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಿಎಂಎವೈ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ ಪ್ರಗತಿಯಲ್ಲಿರುವ 1,80,253 ಮನೆಗಳ ಕಾಮಗಾರಿ ಯನ್ನು 2026 ಡಿಸೆoಬರ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು ಶಾಸಕ ಸಿದ್ದು ಪಾಟೀಲ್ ಅವರ ಪ್ರೆಶ್ನೆಗೆ ಉತ್ತರಿಸಿದ ಸಚಿವ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು, ಫಲಾನುಭವಿಗಳ ವಂತಿಗೆ ಪಾವತಿ ಆಗದ ಕಾರಣ ಯೋಜನೆಗೆ ಸಮಸ್ಯೆ ಉಂಟಾಗಿತ್ತು ಮುಖ್ಯಮಂತ್ರಿ ಯವರಿಗೆ ಸಮಸ್ಯೆ ಮನವರಿಕೆ ಮಾಡಿಕೊಟ್ಟು ಬಡವರ ಮನೆಗೆ ಸರ್ಕಾರವೇ ಫಲಾನುಭವಿಗಳ ವಂತಿಗೆ ಪಾವತಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು. 500ಕೋಟಿ ರೂ. ಬಿಡುಗಡೆ ನಂತರ ಮೊದಲ ಹಂತದಲ್ಲಿ 36789 ಮನೆ ಹಂಚಿಕೆ ಮಾಡಿ ಎರಡನೇ ಹಂತದಲ್ಲಿ 40345 ಮನೆ ಹಂಚಿಕೆಗೆ ಸಿದ್ಧತೆ ನಡೆದಿದೆ ಎಂದು ತಿಳಿಸಿದರು.ಮುಖ್ಯಮಂತ್ರಿಯವರು 2026 ರೊಳಗೆ ಪೂರ್ಣ ಗೊಳಿಸಲು ಸೂಚಿಸಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇನ್ನೂ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರ ಉಪ ಪ್ರೆಶ್ನೆಗೆ ಉತ್ತರಿಸಿದ ಸಚಿವರು, ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಬಡ ಕುಟುಂಬ ಗಳಿಗೆ 47,870 ಮನೆ ನಿರ್ಮಾಣ ಯೋಜನೆ ಸಹ ಫಲಾನುಭ ವಿಗಳ ವಂತಿಗೆ ಪಾವತಿ ಆಗದ ಕಾರಣ, ಆ ವಿಚಾರ ಸಹ ಮುಖ್ಯಮಂತ್ರಿ ಯವರ ಗಮನಕ್ಕೆ ತಂದಿದ್ದು, ಸರ್ಕಾರವೇ ವಂತಿಗೆ ಭರಿಸಲು ತಾತ್ವಿ ಕ ಒಪ್ಪಿಗೆ ದೊರೆತಿದ್ದು ಸಂಪುಟ ಕ್ಕೆ ತಂದು ಒಪ್ಪಿಗೆ ಪಡೆಯಲಾಗುವುದು. ಆ ಮನೆಗಳನ್ನು ಆದಷ್ಟು ಬೇಗ ಪೂರ್ಣ ಗೊಳಿಸಿ ಹಂಚಿಕೆ ಮಾಡಲಾಗುವುದು ಎಂದು ವಿವರಿಸಿದರು.
ಕಾನೂನು ಮೀರಿ ಬಗರ್ ಹುಕುಂ ಅರ್ಜಿ ವಿಲೇ ಇಲ್ಲ
ಬಗರ್ ಹುಕುಂ ಅರ್ಜಿಗಳ ವಿಲೇ ವಿಚಾರದಲ್ಲಿ ಸರ್ಕಾರ ಅಥವಾ ಅಧಿಕಾರಿಗಳು ಕಾನೂನು ಮೀರಿ ನಡೆದಿಲ್ಲ, ಒಂದು ವೇಳೆ ರೈತರಿಗೆ ಅನ್ಯಾಯವಾಗಿದ್ದರೆ ನಮ್ಮ ಗಮನಕ್ಕೆ ತನ್ನಿ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಸಚಿವ ಕೃಷ್ಣ ಬೈರೇಗೌಡ ಸದನದಲ್ಲಿ ಭರವಸೆ ನೀಡಿದರು.
ವಿಧಾನಸೌಧದಲ್ಲಿ ಸೋಮವಾರ ಪ್ರಶ್ನಾವಳಿ ವೇಳೆ ಶಾಸಕರಾದ ಎಂ.ಟಿ. ಕೃಷ್ಣಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, "ಬಗರ್ ಹುಕುಂ ಸಮಿತಿ ಮುಂದೆ ಅಧಿಕಾರಿಗಳು ಅರ್ಹ ಅರ್ಜಿಗಳನ್ನು ಮಾತ್ರ ಸಲ್ಲಿಸಬೇಕು ಎಂಬ ಕಾನೂನು ಇದೆ. ಹೀಗಾಗಿ ಅಧಿಕಾರಿಗಳು ಅನರ್ಹ ಅರ್ಜಿಗಳನ್ನು ಆರಂಭಿಕ ಹಂತದಲ್ಲೇ ತ್ಯಜಿಸಿಬಿಡುತ್ತಾರೆ. ಈ ಎಲ್ಲಾ ಪ್ರಕ್ರಿಯೆಗಳೂ ಕಾನೂನಿನಲ್ಲೇ ಇದ್ದು, ಕಾನೂನು ಮೀರಿ ಏನೂ ಮಾಡಿಲ್ಲ. ಒಂದು ವೇಳೆ ಕಣ್ತಪ್ಪಿನಿಂದ ಒಂದೆರಡು ರೈತರಿಗೆ ಅನ್ಯಾಯ ಆಗಿದ್ದರೆ ಶಾಸಕರು ನನ್ನ ಗಮನಕ್ಕೆ ತನ್ನಿ, ಸಮಸ್ಯೆಯನ್ನು ನಾನು ಸರಿಪಡಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.
ಇದೇ ವೇಳೆ ಬಗರ್ ಹುಕುಂ ಹೆಸರಿನಲ್ಲಿ ಭೂ ಮಂಜೂರಾತಿಗೆ ಯಾವ್ಯಾವ ರೀತಿಯ ಅನರ್ಹ ಅರ್ಜಿಗಳು ಸಲ್ಲಿಕೆಯಾಗುತ್ತವೆ ಎಂದೂ ಸದನದ ಗಮನ ಸೆಳೆದ ಸಚಿವರು, "5 ಎಕರೆಗಿಂತ ಹೆಚ್ಚು ಜಮೀನು ಹೊಂದಿರುವ 7,564 ಜನ ಅರ್ಜಿ ಸಲ್ಲಿಸಿದ್ದಾರೆ. ರಸ್ತೆ ಗುಂಡು ತೋಪು ಒತ್ತುವರಿ ಮಾಡಿರುವವರು 33,632, ಅರಣ್ಯ ಭೂಮಿಯ ಮಂಜೂರಾತಿಗೆ 1,00,565, ನಗರ-ನಗರಸಭೆ ವ್ಯಾಪ್ತಿಯಲ್ಲಿ ಭೂ ಮಂಜೂರಾತಿಗೆ 69,850, ಆ ತಾಲೂಕಿನಲ್ಲೇ ವಾಸಿಸದ ಪಕ್ಕದ ತಾಲೂಕಿನಲ್ಲೂ ವಾಸ ಇಲ್ಲದ 1,620, ಕೃಷಿಕರೇ ಅಲ್ಲದ 13,488, ಜಮೀನಿನ ಸ್ವಾಧೀನದಲ್ಲೇ ಇಲ್ಲದ 44,517, ಅಮೃತ್ ಮಹಲ್ ಕಾವಲ್ ಭೂ ಮಂಜೂರಾತಿಗೆ 13,488 ಹಾಗೂ ಕೆರೆ ಮಂಜೂರಿಗೂ 3040 ಅರ್ಜಿಗಳು ಬಂದಿವೆ ಎಂದು ಮಾಹಿತಿ ನೀಡಿದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್‌ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ











Click it and Unblock the Notifications