ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿವಾದಿತ ತೀರ್ಮಾನಗಳಿಂದಲೂ ಸದ್ದು ಮಾಡಿದ ಸರ್ಕಾರ!

|
Google Oneindia Kannada News

ಬೆಂಗಳೂರು, ಜು. 26: ದಕ್ಷಿಣ ಭಾರತದ ಕರ್ನಾಟಕದಲ್ಲಿ ಎರಡನೇ ಬಾರಿಗೆ ಅಧಿಕಾರ ಹಿಡಿಯುವಲ್ಲಿ ಸಫಲವಾದ ಬಿಜೆಪಿ, ಎದುರಿಸಿದ ಸವಾಲುಗಳೊಂದಿಗೆ ಮಾಡಿಕೊಂಡ ವಿವಾದಗಳಿಗೂ ಕಡಮೆಯಿಲ್ಲ. ಒಂದು ವರ್ಷದ ಆಡಳಿತದಲ್ಲಿ ಹಲವು ನಿರ್ಧಾರಗಳನ್ನು ರಾಜ್ಯ ಬಿಜೆಪಿ ಸರ್ಕಾರ ಕೈಗೊಂಡಿದೆ. ಅವುಗಳಲ್ಲಿ ಅನೇಕ ನಿರ್ಧಾರಗಳು ವಿವಾದಕ್ಕೂ ಎಡೆಯಾಗಿವೆ.

Recommended Video

EMISAT ಪ್ರಕಾರ India China Border ನಲ್ಲಿ ಇನ್ನು ಬೆಂಕಿ ಆರಿಲ್ಲ | Oneindia Kannada

ಕ್ಷಿಪ್ರ ರಾಜಕೀಯ ಬೆಳವಣಿಗೆಯಿಂದ ಮೈತ್ರಿ ಸರ್ಕಾರ ಪತನವಾಗಿ, ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ವಿತ್ವಕ್ಕೆ ಬಂದು ಒಂದು ವರ್ಷವಾಗಿದೆ. ಎದುರಿಸಿದ ಸವಾಲುಗಳೊಂದಿಗೆ ಹಲವು ವಿವಾದಾತ್ಮಕ ತೀರ್ಮಾನಗಳನ್ನು ಸರ್ಕಾರಕೈಗೊಂಡಿದೆ. ಪ್ರಮುಖವಾಗಿ ಕೊರೊನಾ ವೈರಸ್ ಸಂಕಷ್ಟದ ಲಾಕ್‌ಡೌನ್ ಸಂದರ್ಭದಲ್ಲಿ ತೆಗೆದುಕೊಳ್ಳಲಾದ ತೀರ್ಮಾನಗಳಿಗೆ ವಿಪಕ್ಷಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ.

ನಾಮಕರಣ ವಿವಾದ

ನಾಮಕರಣ ವಿವಾದ

ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್ ನಾಮಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಮೇಲ್ಸೇತುವೆಗೆ ವೀರ ಸಾವರ್ಕರ್ ನಾಮಕರಣ ಮಾಡುವ ಕುರಿತು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ತೀವ್ರವಾಗಿ ತಮ್ಮ ಆಕ್ಷೇಪ ವ್ಯಕ್ತಪಡಿಸುತ್ತಿವೆ. ಜೊತೆಗೆ ಕನ್ನಡಪರ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.

ಸರ್ಕಾರಕ್ಕೆ ವರ್ಷ: ಮಹತ್ವದ ಬದಲಾವಣೆಗೆ ಬಿಜೆಪಿ ಹೈಕಮಾಂಡ್ ಸಜ್ಜು?ಸರ್ಕಾರಕ್ಕೆ ವರ್ಷ: ಮಹತ್ವದ ಬದಲಾವಣೆಗೆ ಬಿಜೆಪಿ ಹೈಕಮಾಂಡ್ ಸಜ್ಜು?

ನಾಮಕರಣಕ್ಕೆ ಹಿರಿಯ ಸ್ವಾತಂತ್ರ ಹೋರಾಟಗಾರ ದೊರೆಸ್ವಾಮಿ ಅವರೂ ವಿರೋಧ ವ್ಯಕ್ತಪಡಿಸಿದ್ದರು. ಕೊನೆಗೆ ತಾಂತ್ರಿಕ ಕಾರಣ ಕೊಟ್ಟು ರಾಜ್ಯ ಸರ್ಕಾರ ನಾಮಕರಣ ಕಾರ್ಯಕ್ರಮವನ್ನು ಮುಂದಕ್ಕೆ ಹಾಕಿತ್ತು. ಸ್ಥಳೀಯ ಆಡಳಿತದ ಒಪ್ಪಿಗೆ ಪಡೆಯಬೇಕು, ಜತೆಗೆ ಗೆಜೆಟ್‌ ನೋಟಿಫಿಕೇಷನ್‌ ಹೊರಡಿಸಬೇಕು ಎಂಬ ಕಾನೂನಿನ ಹಿನ್ನೆಲೆಯಲ್ಲಿ ನಾಮಕರಣ ಮುಂದೂಕ್ಕೆ ಹಾಕಲಾಗಿತ್ತು.

ಇದೀಗ ಜು. 24 ರಂದು ಬಿಬಿಎಂಪಿ ಕಳುಹಿಸಿದ್ದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಅನುಮೋದಿಸಿದೆ. ಹೀಗಾಗಿ ಯಲಹಂಕದ ಮದರ್‌ ಡೇರಿ ಮುಂಭಾಗದಲ್ಲಿ ಬಿಬಿಎಂಪಿ ನಿರ್ಮಿಸಿರುವ ಮೇಲ್ಸೇತುವೆಗೆ ಸ್ವಾತಂತ್ರ್ಯ ಹೋರಾಟಗಾರ ವೀರ್‌ ಸಾರ್ವಕರ್‌ ಹೆಸರನ್ನು ನಾಮಕರಣ ಮಾಡಲು ರಾಜ್ಯ ಸರಕಾರ ಒಪ್ಪಿಗೆ ನೀಡಿ ಆದೇಶ ಹೊರಡಿಸಿದೆ. ಇದು ಮತ್ತೊಮ್ಮೆ ವಿವಾದಕ್ಕೆ ಕಾರಣವಾಗುವ ಸಾಧ್ಯತೆಯಿದೆ.

ಟಿಪ್ಪು ಜಯಂತಿ

ಟಿಪ್ಪು ಜಯಂತಿ

ಅಭಿವೃದ್ಧಿಗಿಂತ ಭಾವನಾತ್ಮಕ ವಿಚಾರಗಳನ್ನು ಎದುರಿಗೆ ಇಟ್ಟು ಬಿಜೆಪಿ ಚುನಾವಣೆ ಮಾಡುತ್ತದೆ ಎಂದು ಕಾಂಗ್ರೆಸ್ ಸೇರಿದಂತೆ ಇತರ ವಿರೋಧ ಪಕ್ಷಗಳು ಆರೋಪ ಮಾಡುತ್ತದೆ. ಬಿಜೆಪಿ ಸರ್ಕಾರದ ಕೆಲವು ನಿರ್ಧಾರಗಳು ವಿಪಕ್ಷಗಳ ಆರೋಪಗಳಿಗೆ ಪುಷ್ಟಿಕೊಡುವಂತೆ ಇರುತ್ತವೆ.

ತನ್ನ ಪ್ರಣಾಳಿಕೆಯಲ್ಲಿ ಹೇಳಿದಂತೆಯೆ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆಯೆ ಟಿಪ್ಪು ಜಯಂತಿಯನ್ನು ರದ್ದು ಮಾಡಿದ್ದು ವಿವಾದಕ್ಕೆ ಕಾರಣವಾಯಿತು. ಆ ಮೂಲಕ ಬಿಜೆಪಿ ಸರ್ಕಾರ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಯಿತು. ಹಿಂದೆ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯ ಅವರ ಅಧಿಕಾರದ ಅವಧಿಯಲ್ಲಿ ವಿವಾದಾತ್ಮಕ ಟಿಪ್ಪು ಜಯಂತಿಯನ್ನು ಜಾರಿಗೆ ತರಲಾಗಿತ್ತು. ಆರಂಭದಿಂದಲೂ ಅದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದ ಹಾಗೇ ಟಿಪ್ಪು ಜಯಂತಿಯನ್ನು ರದ್ದು ಮಾಡಿ ಆದೇಶ ಹೊರಡಿಸಿತು.

ಭೂ ಸುಧಾರಣೆ

ಭೂ ಸುಧಾರಣೆ

ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿರುವುದು ಸಾಕಷ್ಟು ವಿರೋಧ, ವಿವಾದಕ್ಕೆ ಕಾರಣವಾಗಿದೆ. ಸುಗ್ರೀವಾಜ್ಞೆ ಮೂಲಕ 63 ಎ, 79 ಎ ಹಾಗೂ ಬಿ ಸೆಕ್ಷನ್‌ಗಳಿಗೆ ಸರ್ಕಾರ ತಿದ್ದುಪಡಿ ತಂದಿದೆ. ಅದರಂತೆ ರೈತರಲ್ಲದ ಹಾಗೂ ನಿರ್ಧಿಷ್ಟ ಆದಾಯಕ್ಕಿಂತ ಹೆಚ್ಚು ಆದಾಯ ಹೊಂದಿರುವವರು ಕೃಷಿ ಜಮೀನು ಖರೀದಿಸಬಹುದು. ಕೃಷಿ ಮಾಡಲು ಉದ್ದೇಶಿಸುವವರು ರಾಜ್ಯದಲ್ಲಿಯೇ ಭೂಮಿ ಖರೀದಿಸಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲಿ ಎಂಬ ಉದ್ದೇಶದಿಂದ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂಬುದು ಸರ್ಕಾರದ ವಾದ.

ರಾಜ್ಯ ಸರ್ಕಾರಕ್ಕೆ ಒಂದು ವರ್ಷ; ಯಾರಿಗೂ ಇಲ್ಲ ಹರ್ಷ!ರಾಜ್ಯ ಸರ್ಕಾರಕ್ಕೆ ಒಂದು ವರ್ಷ; ಯಾರಿಗೂ ಇಲ್ಲ ಹರ್ಷ!

ಆದರೆ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ರೈತರು, ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಈ ಭೂ ಸುಧಾರಣೆ ಕಾಯ್ದೆಯನ್ನು ರಿಯಲ್ ಎಸ್ಟೇಟ್, ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡಲು ತರಲಾಗಿದೆ. ಇದು ಗಣಿ ಅಕ್ರಮಕ್ಕಿಂತಲೂ ದೊಡ್ಡ ಹಗರಣ ಎಂದು ಕಾಂಗ್ರೆಸ್ ಪಕ್ಷ, ಅದರಲ್ಲೂ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಜೊತೆಗೆ ವಿವಿಧ ಸಂಘಟನೆಗಳೊಂದಿಗೆ ಜಂಟಿಯಾಗಿ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.

ಎಪಿಎಂಸಿ ಕಾಯ್ದೆ

ಎಪಿಎಂಸಿ ಕಾಯ್ದೆ

ಹಿಂದಿನ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರ ತೀರ್ಮಾನ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಎಪಿಎಂಸಿ ಕಾಯ್ದೆಯ ಎರಡು ಸೆಕ್ಷನ್‌ಗಳಿಗೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಅದರಂತೆ ರೈತರು ಯಾವುದೇ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಅಧೀನಕ್ಕೆ ಒಳಪಡುವುದಿಲ್ಲ. ರೈತರು ತಮ್ಮಿಷ್ಟದಂತೆ ಯಾರಿಗೆ ಬೇಕಾದರೂ ಉತ್ಪನ್ನಗಳನ್ನು ಮಾರಾಟ ಮಾಡಬಹುದು. ಹಾಗೆಯೇ ಖಾಸಗಿಯವರು ರೈತರಿಂದ ನೇರವಾಗಿ ಬೆಳೆ ಖರೀದಿಸಬಹುದಾಗಿದೆ.

ಈ ತಿದ್ದುಪಡಿ ಕಾಯ್ದೆಗೆ ರೈತ ಸಂಘಟನೆಗಳು ಹಾಗೂ ಪ್ರತಿಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಎಪಿಎಂಸಿ ಕಾಯ್ದೆಯ ಕಲಂಗಳಿಗೆ ತಿದ್ದುಪಡಿ ಮೂಲಕ ಕೃಷಿ ಉತ್ಪನ್ನ ಮಾರುಕಟ್ಟೆ ಸಂಪೂರ್ಣ ಕಾರ್ಪೋರೇಟ್‌ ಕೈಗೆ ಸಿಲುಕಿ, ರೈತರ ಶೋಷಣೆ ಮಿತಿ ಮೀರಲಿದೆ ಎಂಬುದುವಿವಾದಕ್ಕೆ ಕಾರಣವಾಗಿದೆ.

ಶ್ರಮಿಕ್ ರೈಲು

ಶ್ರಮಿಕ್ ರೈಲು

ಕೊರೊನಾ ವೈರಸ್‌ ಲಾಕ್‌ಡೌನ್ ಕಾಲದಲ್ಲಿ ವಲಸಿಗ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸುವುದಕ್ಕಾಗಿ ಇದ್ದ ಶ್ರಮಿಕ್ ರೈಲನ್ನು ರದ್ದು ಮಾಡಿದ ರಾಜ್ಯ ಸರ್ಕಾರದ ನಿರ್ಧಾರ ಭಾರೀ ವಿವಾದಕ್ಕೆ ಕಾರಣವಾಗಿತ್ತು. ವಲಸೆ ಕಾರ್ಮಿಕರನ್ನು ತವರು ರಾಜ್ಯಗಳಿಗೆ ಕಳಿಸಲು ಕರ್ನಾಟಕ ಸರ್ಕಾರ ರೈಲುಗಳಿಗಾಗಿ ಬೇಡಿಕೆ ಇಟ್ಟಿತ್ತು. ಬಳಿಕ ರೈಲುಗಳ ಅವಶ್ಯಕತೆ ಇಲ್ಲ ಎಂದು ರೈಲ್ವೇ ಇಲಾಖೆಗೆ ಪತ್ರ ಬರೆದಿತ್ತು. ಸರ್ಕಾರದ ಈ ನಿರ್ಧಾರದಿಂದ ಸಾವಿರಾರು ವಲಸೆ ಕಾರ್ಮಿಕರು ರೈಲು ಸೇವೆ ಇಲ್ಲದೆ ಕಾಲ್ನಡಿಗೆಯಲ್ಲೇ ತಮ್ಮ ರಾಜ್ಯಗಳಿಗೆ ತೆರಳಲು ಮುಂದಾಗಿದ್ದರು.

ಬಿಜೆಪಿ ಸರ್ಕಾರಕ್ಕೆ ಒಂದು ವರುಷ: ಡಿಸಿಎಂ ಆತ್ಮಾವಲೋಕನ!ಬಿಜೆಪಿ ಸರ್ಕಾರಕ್ಕೆ ಒಂದು ವರುಷ: ಡಿಸಿಎಂ ಆತ್ಮಾವಲೋಕನ!

ಸರ್ಕಾರದ ಈ ನಿರ್ಧಾರಕ್ಕೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ವಿವಾದ ಹೆಚ್ಚಾಗುತ್ತಿದ್ದ ಹಾಗೆ ಸರ್ಕಾರ ಬಳಿಕ ತನ್ನ ನಿರ್ಧಾರದಿಂದ ಹಿಂದೆ ಸರಿದಿತ್ತು.

 ಕಾರ್ಮಿಕ ಕಾಯಿದೆ

ಕಾರ್ಮಿಕ ಕಾಯಿದೆ

ರಾಜ್ಯ ಸರಕಾರ ಕಾರ್ಮಿಕರ ಪ್ರತಿ ದಿನದ ಕೆಲಸದ ಅವಧಿಯನ್ನು 9 ತಾಸುಗಳಿಂದ 10 ಗಂಟೆಗಳಿಗೆ ಹೆಚ್ಚಳ ಮಾಡಿ, ಮೇ 22ರಂದು ಅಧಿಸೂಚನೆ ಹೊರಡಿಸಿರುವುದು ಕಾರ್ಮಿಕ ವಲಯದಿಂದ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ. ಕೋವಿಡ್ ಬಿಕ್ಕಟ್ಟನ್ನು ಸಾರ್ವಜನಿಕ ತುರ್ತು ಪರಿಸ್ಥಿತಿಯಾಗಿ ಪರಿಗಣಿಸಿ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಿಸಿ ಕೈಗಾರಿಕೆಗಳ ಕಾಯಿದೆಯ ಸೆಕ್ಷನ್ 5ರಡಿ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.

ರಾಜ್ಯ ಸರಕಾರದ ನಿರ್ಧಾರವನ್ನು ಒಪ್ಪದ ಹೈಕೋರ್ಟ್‌, ಅಧಿಸೂಚನೆ ವಾಪಸ್‌ ಪಡೆಯದಿದ್ದರೆ ತಡೆ ನೀಡುವುದಾಗಿ ಎಚ್ಚರಿಕೆ ನೀಡಿತ್ತು. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಸರಕಾರವು ತಕ್ಷಣವೇ ಅಧಿಸೂಚನೆಯನ್ನು ಹಿಂಪಡೆಯಿತು. ಒಟ್ಟಾರೆ ದಕ್ಷಿಣ ಭಾರತದಲ್ಲಿ ಎರಡನೇ ಬಾರಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಒಂದು ವರ್ಷದಲ್ಲಿ ಹಲವು ವಿವಾದಾತ್ಮಕ ತೀರ್ಮಾನಗಳನ್ನು ಗೊಂಡಿರುವುದು,ಸರ್ಕಾರದ ತೀರ್ಮಾನಗಳಿಗೆ ವ್ಯಕ್ತವಾಗಿರುವ ವಿರೋಧದಿಂದಲೇ ಬಹಿರಂಗವಾಗಿದೆ.

English summary
The BJP has succeeded in securing a second term in Karnataka, South India, with the challenges it has faced. Many decisions have been taken by the state BJP government during the one year administration. Many of these decisions have been controversial.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X