ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ 10,000 ಎಕರೆ ಭೂಸ್ವಾಧೀನ ಪ್ರಕ್ರಿಯೆ ಜೋರು: ಆಸ್ತಿದಾರರಿಗೆ ಕೋಟಿ.. ಕೋಟಿ ಆದಾಯ ನಿರೀಕ್ಷೆ!
Bidadi Township Project New Updates: ಕರ್ನಾಟಕ ಸರ್ಕಾರ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಬಿಡದಿ ಸಮಗ್ರ ಉಪನಗರ ಯೋಜನೆ / ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ಜೋರಾಗಿದೆ. ಬೆಂಗಳೂರು ನಗರವು ವೇಗವಾಗಿ ಅಭಿವೃದ್ಧಿ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಪರ್ಯಾಯವಾಗಿ ಬೆಂಗಳೂರಿನ ಸುತ್ತಮುತ್ತಲಿನ ನಗರಗಳನ್ನು ಅಭಿವೃದ್ಧಿ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಇದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಕನಸಿನ ಕೂಸಾಗಿದೆ. ಈ ಯೋಜನೆಯನ್ನು ಇದೀಗ ಜಾರಿ ಮಾಡುವುದಕ್ಕೆ ಸರ್ಕಾರ ಮುಂದಾಗಿದ್ದು. ಭೂಸ್ವಾಧೀನ ಪ್ರಕ್ರಿಯೆ ಜೋರಾಗಿದೆ. ಯಾವ ಭಾಗದಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಸಲಾಗುತ್ತಿದೆ ಹಾಗೂ ಎಷ್ಟು ಕೋಟಿ ನಿಗದಿ ಮಾಡಲಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರು ಈಗಾಗಲೇ ವಿವಿಧ ಕ್ಷೇತ್ರಗಳಲ್ಲಿ ಭಾರೀ ಅಭಿವೃದ್ಧಿಯಾಗಿದೆ. ಬೆಂಗಳೂರು ಸಾಕಷ್ಟು ಅಭಿವೃದ್ಧಿ ಆಗುತ್ತಿರುವ ಹಿನ್ನೆಲೆಯಲ್ಲಿ ಭಾರೀ ಒತ್ತಡ ನಿರ್ಮಾಣವಾಗುತ್ತಿದ್ದು. ಮುಂದಿನ ದಿನಗಳಲ್ಲಿ ನಗರದ ಮೇಲೆ ಇನ್ನಷ್ಟು ಒತ್ತಡ ಬೀಳುವ ಸಾಧ್ಯತೆ ಇದೆ. ಹೀಗಾಗಿ, ಬೆಂಗಳೂರಿಗೆ ಪರ್ಯಾಯವಾಗಿ ವಿವಿಧ ನಗರಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದರ ಭಾಗವಾಗಿ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ. ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಬರೋಬ್ಬರಿ 10,000 ಸಾವಿರ ಎಕರೆ ಭೂಸ್ವಾಧೀನ ಪಡಿಸಿಕೊಳ್ಳಬೇಕು ಎನ್ನುವ ಲೆಕ್ಕಾಚಾರವಿದೆ. ಇದೀಗ ಈ ಯೋಜನೆಗೆ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಮಹತ್ವದ ಅಪ್ಡೇಟ್ಸ್ ಬಂದಿದೆ. ಅದೇನು ಎನ್ನುವ ಸಂಪೂರ್ಣ ವಿವರ ನೋಡೋಣ.

ಬಿಡದಿ ಟೌನ್‌ಶಿಪ್ 9 ಗ್ರಾಮಗಳಲ್ಲಿ ಭೂಸ್ವಾಧೀನ: ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕಾಗಿ ಈಗಾಗಲೇ ಈ ಭಾಗದಲ್ಲಿ 9 ಗ್ರಾಮಗಳನ್ನು ಗುರುತಿಸಲಾಗಿದೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಜಿಬಿಡಿಎ) ಈ ಸಂಬಂಧ ಮಾರ್ಚ್ 13ರಂದು ಅಧಿಸೂಚನೆ ಹೊರಡಿಸಿದೆ. ಅಲ್ಲದೇ ಯೋಜನೆ ವ್ಯಾಪ್ತಿಗೆ ಒಳಪಡುವ ಜಮೀನುಗಳ ಮಾಲೀಕರಿಂದ ಆಕ್ಷೇಪಣೆಯನ್ನು ಸಹ ಆಹ್ವಾನಿಸಲಾಗಿದೆ. ಇದಕ್ಕಾಗಿ ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ಆಕ್ಷೇಪಣೆಗಳನ್ನು ಪರಿಶೀಲನೆ ನಡೆಯಲಿದೆ. ಈ ಸಂಬಂಧ ಪ್ರತಿಯೊಬ್ಬರಿಂದಲೂ ಅಹವಾಲು ಕೇಳಿದ ಮೇಲೆ ಪರಿಹಾರ ಮತ್ತು ಭೂ ಸ್ವಾಧೀನ ಪ್ರಕ್ರಿಯೆ ನಡೆಯಲಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹೇಳಿರುವುದಾಗಿ ಪ್ರಜಾವಾಣಿ ವರದಿ ಮಾಡಿದೆ.
ಯಾವ ಭಾಗದಲ್ಲಿ ಭೂಸ್ವಾಧೀನ: ಇನ್ನು ಬಿಡದಿ ಸಮಗ್ರ ಉಪನಗರ ಯೋಜನೆಗೆ ಬರೋಬ್ಬರಿ 8,943 ಎಕರೆ ವಿಸ್ತೀರ್ಣ ಅವಶ್ಯವಿದೆ. ಬಿಡದಿ ಟೌನ್‌ಶಿಪ್‌ಗೆ ರಾಮನಗರ ತಾಲ್ಲೂಕಿನ ಪ್ರಮುಖ ಪ್ರದೇಶಗಳನ್ನು ಗುರುತಿಸಲಾಗಿದೆ. ಅದರ ಲಿಸ್ಟ್ ಈ ರೀತಿ ಇದೆ.
ಪ್ರದೇಶ ಎಕರೆಗಳಲ್ಲಿ ಭೂಸ್ವಾಧೀನ
* ಬನ್ನಿಗಿರಿ 1,177
* ಕೆಂಪಯ್ಯನಪಾಳ್ಯ 586
* ಗೊಲ್ಲರಪಾಳ್ಯ 221
* ಕಂಚುಗಾರನಹಳ್ಳಿ 1,410
* ಅರಳಾಳುಸಂದ್ರ 2,064
*ಮಂಡಲಹಳ್ಳಿ 52
*ಭೈರಮಂಗಲ 1,847
*ಹೊಸೂರು ಹಾಗೂ ಹಾರೋಹಳ್ಳಿ ತಾಲ್ಲೂಕಿನ * ವಡೇರಹಳ್ಳಿಯಲ್ಲಿ ಕ್ರಮವಾಗಿ 2,990 ಹಾಗೂ 103 ಎಕರೆಯಷ್ಟು ಭೂಸ್ವಾಧೀನ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಲಾಗಿದೆ.
ಬೆಂಗಳೂರಿನ ನಂತರ ಮತ್ತೊಂದು ನಗರ ಅಭಿವೃದ್ಧಿ: ಇನ್ನು ಇತ್ತೀಚಿನ ವರ್ಷಗಳಲ್ಲಿ ಬೆಂಗಳೂರಿನ ಮೇಲೆ ಭಾರೀ ಒತ್ತಡ ನಿರ್ಮಾಣವಾಗುತ್ತಿದೆ. ಇದರಿಂದ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹಾಗೂ ಟ್ರಾಫಿಕ್ ಜಾಮ್ ಸಮಸ್ಯೆ ಹೆಚ್ಚಳವಾಗುತ್ತಿದೆ. ಇದೀಗ ಹೊಸ ಉಪ ನಗರಗಳ ಅಭಿವೃದ್ಧಿಯಿಂದ ಬೆಂಗಳೂರಿನ ಮೇಲೆ ಒತ್ತಡ ಕಡಿಮೆ ಆಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.
ಎಚ್‌ಡಿ ದೇವೇಗೌಡ ವಿರೋಧ: ರಾಜ್ಯ ಕಾಂಗ್ರೆಸ್ ಸರ್ಕಾರವು ಬಿಡದಿ ಟೌನ್‌ಶಿಪ್ ಯೋಜನೆಯ ಮೂಲಕ ಈ ಭಾಗದಲ್ಲಿ ಭೂಮಿ / ಭೂಸ್ವಾಧೀನಕ್ಕೆ ಮುಂದಾಗಿರುವುದಕ್ಕೆ ವಿರೋಧವೂ ವ್ಯಕ್ತವಾಗಿದೆ. ಈಚೆಗೆ ಹಿರಿಯ ರಾಜಕಾರಣಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯರಾದ ಎಚ್ ಡಿ ದೇವೇಗೌಡ ಅವರು ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ಭಾಗದಲ್ಲಿ ರೈತರ ಭೂಮಿ ಹೆಚ್ಚಾಗಿದೆ. ಹೀಗಾಗಿ ಇಲ್ಲಿ ಭೂಸ್ವಾಧೀನ ಬೇಡ ಅಂತ ಮನವಿ ಮಾಡಿದ್ದರು.












Click it and Unblock the Notifications