Breaking; ಕರ್ನಾಟಕದಲ್ಲಿ 10 ಓಮಿಕ್ರಾನ್ ಪ್ರಕರಣ ಪತ್ತೆ

ಬೆಂಗಳೂರು, ಜನವರಿ 03; ಕರ್ನಾಟಕದಲ್ಲಿ 10 ಹೊಸ ಕೋವಿಡ್ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ರಾಜ್ಯದ ಓಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 76ಕ್ಕೆ ಏರಿಕೆಯಾಗಿದೆ.

ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸೋಮವಾರ ಈ ಕುರಿತು ಟ್ವೀಟ್ ಮಾಡಿದ್ದಾರೆ. ಜನವರಿ 2ರಂದು 10 ಹೊಸ ಓಮಿಕ್ರಾನ್ ಪ್ರಕರಣ ಖಚಿತವಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 76 ಎಂದು ಮಾಹಿತಿ ನೀಡಿದ್ದಾರೆ.

10 ಹೊಸ ಓಮಿಕ್ರಾನ್ ಪ್ರಕರಣಗಳ ಪೈಕಿ 8 ಪ್ರಕರಣ ಬೆಂಗಳೂರಿನಲ್ಲಿ ಮತ್ತು 2 ಪ್ರಕರಣ ಧಾರವಾಡದಲ್ಲಿ ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಪತ್ತೆಯಾದ 8 ಪ್ರಕರಣಗಳ ಪೈಕಿ ಐವರು ಅಂತರಾಷ್ಟ್ರೀಯ ಪ್ರಯಾಣಿಕರು.

10 New Omicron Cases Reported In Karnataka Total Tally 76

ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಭಾನುವಾರ ರಾಜ್ಯದಲ್ಲಿ 1,187 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 10,292ಕ್ಕೆ ಏರಿಕೆಯಾಗಿದೆ.

ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಕೋವಿಡ್ ಹರಡುವಿಕೆ ತಡೆಯಲು ಡಿಸೆಂಬರ್ 28ರಿಂದಲೇ ನೈಟ್ ಕರ್ಫ್ಯೂ ಜಾರಿಗೊಳಿಸಿದೆ. ಜನವರಿ 7ರ ತನಕ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯ ತನಕ ನೈಟ್ ಕರ್ಫ್ಯೂ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಜಾರಿಯಲ್ಲಿರುತ್ತದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೋವಿಡ್ ಪರಿಸ್ಥಿತಿ ಕುರಿತು ಜನವರಿ 7ರಂದು ತಜ್ಞರ ಜೊತೆ ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ರಾಜ್ಯದಲ್ಲಿ ಮತ್ತಷ್ಟು ಕಠಿಣ ನಿಯಮಗಳು ಜಾರಿಗೆ ಬರಲಿವೆ. ಕಂದಾಯ ಸಚಿವ ಆರ್. ಅಶೋಕ ಈ ಕುರಿತು ಈಗಾಗಲೇ ಸುಳಿವು ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+