ಶೇ.10ರಷ್ಟು ಮೀಸಲಾತಿ ಆರ್ಥಿಕವಾಗಿ ಹಿಂದುಳಿದ ಜನರ ಆಶಾಕಿರಣ: ಬೊಮ್ಮಾಯಿ

ಉಡುಪಿ, ನವೆಂಬರ್ 8 : ಕೇಂದ್ರ ಸರ್ಕಾರ ಜಾರಿಗೆ ತಂದಿರುವ 103 ನೇ ಸಂವಿಧಾನ ತಿದ್ದುಪಡಿಗೆ ಸರ್ವೋಚ್ಛ ನ್ಯಾಯಾಲಯ 3:2 ಬಹುಮತದ ತೀರ್ಪನ್ನು ನೀಡಿದೆ. ಈ ವಿಚಾರವಾಗಿ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ಆರ್ಥಿಕವಾಗಿ ಹಿಂದುಳಿದ ಜನರ ಆಶಾಕಿರಣವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸೋಮವಾರ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ದೊರೆತಿರುವ ಈ ಅವಕಾಶವನ್ನು ಬಳಸಿಕೊಂಡು ಸಮುದಾಯಗಳು ಅಭಿವೃದ್ಧಿಯನ್ನು ಹೊಂದಲು ಈ ತೀರ್ಪು ಅನುಕೂಲ ಕಲ್ಪಿಸಲಿದೆ. ಪ್ರಧಾನಿ ಮೋದಿಯವರ ದೂರದೃಷ್ಟಿಯ ಫಲವಾಗಿ ಜಾರಿಯಾಗುತ್ತಿರುವ ಈ ಸಂವಿಧಾನದ ತಿದ್ದುಪಡಿ ನಮಗೆಲ್ಲಾ ಸಂತೋಷವನ್ನು ತಂದಿದೆ ಎಂದರು.

ಭಾರತ ಅಭಿವೃದ್ಧಿಯಾಗುತ್ತಿದ್ದು, ಅದರ ಜೊತೆಗೆ ಯುವಜನರ ಆಶೋತ್ತರಗಳೂ ಹೆಚ್ಚುತ್ತಿವೆ. ಎಲ್ಲ ರಂಗದಲ್ಲಿಯೂ ಮುಂದೆ ಬಂದು ಸ್ವಾವಲಂಬನೆಯ ಬದುಕು ಬದುಕುವ ಜನರ ಆಶಯಕ್ಕೆ ಸ್ಪಂದಿಸಲಾಗಿದೆ. ತಾಂತ್ರಿಕ ಮತ್ತು ಸಂವಿಧಾನಾತ್ಮಕವಾದ ಎಲ್ಲ ಅಂಶಗಳನ್ನು ಪರಿಶೀಲಿಸಿ ಸರ್ವೋಚ್ಛ ನ್ಯಾಯಾಲಯ ತನ್ನ ತೀರ್ಪನ್ನು ನೀಡಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿಯೂ ಈ ತೀರ್ಪನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.

10% reservation is very beneficial for economically backward classes

ಶಾಲೆಗಳಲ್ಲಿ ಧ್ಯಾನದ ಬಗ್ಗೆ ಪರಿಶೀಲಿಸಿ ತೀರ್ಮಾನ

ಶಾಲೆಗಳಲ್ಲಿ ಮಕ್ಕಳಿಗೆ ಧ್ಯಾನ ಅಭ್ಯಾಸ ಮಾಡಿಸುವ ಅಪಸ್ಪರ ಏಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಯಾವುದೇ ಒಳ್ಳೆಯ ಕ್ರಮ ತೆಗೆದುಕೊಳ್ಳಬೇಕಾದರೆ ಅದರ ಪರ ಮತ್ತು ವಿರೋಧ ಅಭಿಪ್ರಾಯಗಳು ಸಹಜ. ಅವುಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಅಡಿಕೆ ಬೆಳೆ ರೋಗಕ್ಕೆ ಔಷಧಿ ಸಿಂಪಡನೆಗೆ ಕ್ರಮ :

ಅಡಿಕೆ ಬೆಳೆಯುವ ಕೃಷಿಕರ ಸಮಸ್ಯೆಯ ಬಗ್ಗೆ ಪ್ರತಿಕ್ರಯಿಸಿ, ಅಡಿಕೆ ಬೆಳೆಯಲ್ಲಿ ಬಿಳೆಚುಕ್ಕೆ ರೋಗ ಕಾಣಿಸಿಕೊಳ್ಳುತ್ತಿದ್ದು, ಕೃಷಿಕರು ಆತಂಕದಲ್ಲಿದ್ದಾರೆ. ಈ ರೋಗದ ಬಗ್ಗೆ ಕೃಷಿ ವಿಶ್ಯವಿದ್ಯಾಲಯ ಹಾಗೂ ಕೇಂದ್ರ ಸರ್ಕಾರದ ತಂಡ ಪರಿಶೀಲಿಸುತ್ತಿದ್ದು, ವೈಜ್ಞಾನಿಕವಾದ ಕಾರಣವನ್ನು ಪತ್ತೆ ಹಚ್ಚಿ , ಅದನ್ನು ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಈ ರೋಗ ಹರಡದಂತೆ ವಿಜ್ಞಾನಿಗಳು ತಿಳಿಸಿರುವ ಔಷಧಿಯ ಸಿಂಪಡನೆ ಕಾರ್ಯಕ್ಕೆ ಸರ್ಕಾರ ಸಹಕಾರ ನೀಡಲಿದೆ. ಮೂಲರೋಗವನ್ನು ಪತ್ತೆಹಚ್ಚಿ , ಅದರ ನಿವಾರಣೆಗೆ ಔಷಧಿಯನ್ನೂ ಸಿಂಪಡನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

10% reservation is very beneficial for economically backward classes

ಕರಾವಳಿ ಭಾಗದಲ್ಲಿ ಕುಚಲಕ್ಕಿಯನ್ನು ಪಡಿತರದಲ್ಲಿ ವಿತರಿಸಲು ರೈತರಿಂದ ಕುಚಲಕ್ಕಿಯನ್ನು ಖರೀದಿಸಲು ಖರೀದಿ ಕೇಂದ್ರವನ್ನು ಸಧ್ಯದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+