ಉಕ್ರೇನ್ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಕರ್ನಾಟಕದ 10 ವಿದ್ಯಾರ್ಥಿಗಳು: ಸಿಎಂ ಬೊಮ್ಮಾಯಿ
ಬೆಂಗಳೂರು, ಫೆ. 24: ರಷ್ಯಾ ಮತ್ತು ಉಕ್ರೇನ್ ಮಧ್ಯೆ ನಡೆಯುತ್ತಿರುವ ಯುದ್ಧ ಉಕ್ರೇನ್‌ನ್‌ನಲ್ಲಿ ನೆಲೆಸಿರುವ ರಾಜ್ಯದ ವಿದ್ಯಾರ್ಥಿಗಳಿಗೂ ಆತಂಕ ತಂದೊದಡ್ಡಿದೆ.
ರಷ್ಯಾ- ಉಕ್ರೇನ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಸಿಲುಕಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ನಗರದಲ್ಲಿ ಮಾತನಾಡಿದ್ದಾರೆ.
'ರಾಜ್ಯದ ಹತ್ತು ಹೆಚ್ಚು ವಿದ್ಯಾರ್ಥಿಗಳು ಉಕ್ರೇನ್ ಏರ್‌ಪೋರ್ಟ್ ನಲ್ಲಿ ಸಿಲುಕಿದ್ದಾರೆ. ಅವರ ರಕ್ಷಣೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಉಕ್ರೇನ್ ರಾಯಭಾರಿ ಕಚೇರಿಗೆ ವಿದ್ಯಾರ್ಥಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ' ಎಂದು ಅವರು ಹೇಳಿದ್ದಾರೆ.

ಯುದ್ಧ ಆರಂಭಕ್ಕೂ ಮೊದಲೇ ತಂಡ ತಂಡವಾಗಿ ಕರೆಸಿಕೊಳ್ಳಲಾಗುತ್ತಿತ್ತು. ಆದರೆ, ಈಗ ಉಳಿದಿರುವ ಸುಮಾರು 100 ವಿದ್ಯಾರ್ಥಿಗಳು ಕೊನೆಯ ತಂಡವಾಗಿತ್ತು. ಭಾರತಕ್ಕೆ ವಾಪಸಾಗಲು ಬಹುತೇಕ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಯುದ್ಧ ಆರಂಭವಾದ ಕಾರಣ ಅಲ್ಲೇ ಸಿಲುಕಿದ್ದಾರೆ. ನೂರು ಮಂದಿ ಭಾರತೀಯ ವಿದ್ಯಾರ್ಥಿಗಳಲ್ಲಿ ಹತ್ತು ಜನ ರಾಜ್ಯದವರಾಗಿದ್ದಾರೆ. ಇವರನ್ನ ದೇಶಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದು ಬೊಮ್ಮಾಯಿ ಹೇಳಿದರು.

ನಮ್ಮ ವಿದೇಶಾಂಗ ಕಾರ್ಯದರ್ಶಿ ಜೊತೆ ಸಂಪರ್ಕದಲ್ಲಿದ್ದೇವೆ. ಉಕ್ರೇನ್ ನಲ್ಲಿರುವ ಭಾರತೀಯ ರಾಯಭಾರಿ ಕೂಡ ಅಲ್ಲಿನ ಅಧಿಕಾರಿಗಳಿಗೆ ಮಾಹಿತಿಯನ್ನೂ ಕೊಟ್ಟಿದ್ದಾರೆ. ಅವರು ವಿದ್ಯಾರ್ಥಿಗಳ ಸಂಪರ್ಕದಲ್ಲಿದ್ದಾರೆ. ಯಾವುದು ಸುರಕ್ಷಿತ ಸ್ಥಳ ಎಂಬ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ ಎಂದು ವಿವರಿಸಿದರು.












Click it and Unblock the Notifications