Breaking News: ಕರ್ನಾಟಕದಲ್ಲಿ ಭರ್ಜರಿ ಶತಕ ಸಿಡಿಸಿದ ಕೊರೊನಾ ವೈರಸ್!

ಬೆಂಗಳೂರು, ಮೇ.26: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಮಂಗಳವಾರ ಭರ್ಜರಿ ಶತಕ ಬಾರಿಸಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 100 ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,282ಕ್ಕೆ ಏರಿಕೆಯಾಗಿದೆ.

ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿತರ ಪೈಕಿ ಬಹುತೇಕ ಜನರಿಗೆ ಬೇರೆ ರಾಜ್ಯಗಳಿಂದ ವಾಪಸ್ ಆಗಿರುವ ನಹಿನ್ನೆಲೆಯನ್ನು ಹೊಂದಿದ್ದಾರೆ. ಮಹಾರಾಷ್ಟ್ರದಿಂದ ಆಗಮಿಸಿ 46 ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ.

ತಮಿಳುನಾಡಿನಿಂದ ಆಗಮಿಸಿದ 21 ಮಂದಿಗೆ ಕೊವಿಡ್-19 ಕನ್ಫರ್ಮ್ ಆಗಿದೆ. ಇದರ ಜೊತೆಗೆ ಜಾರ್ಖಂಡ್ ನಿಂದ ರಾಜ್ಯಕ್ಕೆ ಆಗಮಿಸಿದ 13 ಮಂದಿಗೂ ಕೊರೊನಾ ವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ಪತ್ತೆಯಾಗಿದೆ.

Total 2,282 Covid-19 Positive Cases In Karnataka: 100 Coronavirus Cases Found In Single Day.

ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರ ಸಂಖ್ಯೆ:

ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯು 100ರ ಗಡಿ ದಾಟಿದೆ. ಚಿತ್ರದುರ್ಗದಲ್ಲಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಚಿತ್ರದುರ್ಗ - 20, ಯಾದಗಿರಿ - 14, ಹಾಸನ - 13, ಬೆಳಗಾವಿ 13, ಬೀದರ್ -10, ವಿಜಯಪುರ -5, ಉಡುಪಿ, ದಕ್ಷಿಣ ಕನ್ನಡ - 3, ಬೆಂಗಳೂರು ನಗರ - 2 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+