ಕರ್ನಾಟಕ: ಒಂದೇ ವರ್ಷದಲ್ಲಿ 100 ಪೊಲೀಸ್ ಠಾಣೆ ನಿರ್ಮಾಣ: ಸಿಎಂ ಭರವಸೆ

ಬೆಳಗಾವಿ, ಡಿಸೆಂಬರ್ 28: ರಾಜ್ಯದಲ್ಲಿ ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಜಿಲ್ಲೆಯಲ್ಲಿ ಬುಧವಾರ ಬೆಳಗಾವಿ ಪೊಲೀಸ್ ಆಯುಕ್ತರ ನೂತನ ಕಚೇರಿಯನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಸಮಾಜದಲ್ಲಿ ಕಾನೂನು ಸೂವ್ಯವಸ್ಥೆ ಕಾಪಾಡಲು, ಅಪರಾಧ ಚಟುವಟಿಕೆಗಳ ನಿಯಂತ್ರಣ ಪೊಲೀಸರ ಪಾತ್ರ ಮಹತ್ವದ್ದು. ಈ ಕಾರ್ಯ ಮುಂದುವರಿಯುವ ನಿಟ್ಟಿನಲ್ಲಿ ಪೊಲೀಸ್ ‌ಗೃಹ ಮಂಡಳಿಯಿಂದ ಒಳ್ಳೆಯ ಕೆಲಸಗಳು ಆಗುತ್ತಿವೆ ಎಂದರು.

ರಾಜ್ಯದಲ್ಲಿ 2,500 ಪೊಲೀಸ್ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ 16 ಪೊಲೀಸ್ ಠಾಣೆ ನಿರ್ಮಾಣದ ಹಂತದಲ್ಲಿವೆ. ‌ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡುವ ಗುರಿ ಸರ್ಕಾರ ಹೊಂದಿದೆ. ಸುಮಾರು 80 ಕೋಟಿ ರೂ.ಗಳ ವೆಚ್ಚದಲ್ಲಿ 300 ಜೀಪ್ ಹಾಗೂ ಸ್ಕಾರ್ಪಿಯೊ ವಾಹನಗಳನ್ನು ಖರೀದಿ ಮಾಡಲಾಗುತ್ತಿದೆ.‌ ಖರೀದಿಸಿದ ವಾಹನಗಳಲ್ಲಿ ಡಿವೈ ಎಸ್ಪಿಗಳಿಗೆ ಸ್ಕಾರ್ಪಿಯೊ ವಾಹನಗಳನ್ನು ನೀಡಲಾಗುವುದು ಎಂದು ತಿಳಿಸಿದರು.

100 Police Station Will Be Built In One Year In Karnataka CM Basavaraj Bommai.

ಜನರೊಂದಿಗೆ ನಿಕಟ ಸಂಪರ್ಕ

ಪೊಲೀಸ್ ಗೃಹ ಇಲಾಖೆ ರಾಜ್ಯದಲ್ಲಿ ಅತ್ಯಂತ ದಕ್ಷತೆಯಿಂದ ಕೆಲಸ ಮಾಡುತ್ತಿದೆ. ಈ ಕಾರಣಕ್ಕೆ ಕರ್ನಾಟಕ ಪೊಲೀಸ್ ಪಡೆಗೆ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದರು. ಗಡಿ ಭಾಗದಲ್ಲಿ ಕೇವಲ ಶಕ್ತಿ ಪ್ರದರ್ಶನ ಮಾಡುವುದಲ್ಲ.‌ ಜನರ ಜೊತೆ ನಿರಂತರ ಸಂಪರ್ಕ ಇಟ್ಟುಕೊಂಡು ಅವರ ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು‌.‌ ಗಡಿ ಭಾಗದ ಸಮಸ್ಯೆ ಪರಿಹರಿಸಿದರೆ ಹೆಚ್ಚು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಇತ್ತೀಚೆಗೆ ವಿದ್ವಂಸಕ ಕೃತ್ಯಗಳು ನಡೆಯುತ್ತಿವೆ‌ ಅವುಗಳನ್ನು ಅತ್ಯಂತ ವೇಗವಾಗಿ ಪತ್ತೆ ಹಚ್ಚುವ ಕೆಲಸ ಆಗುತ್ತಿದೆ. ದಕ್ಷತೆಯಿಂದ ನಮ್ಮ ಪೊಲಿಸರು ಕೆಲಸ ಮಾಡುತ್ತಿದ್ದಾರೆ‌. ನಾನು ಗೃಹ ಸಚಿವನಾಗಿದ್ದಾಗ ಅಡಿಗಲ್ಲು ಹಾಕಿದ ಕಟ್ಟಡಗಳು ಈಗ ಉದ್ಘಾಟನೆಯಾಗುತ್ತಿವೆ. ಎಫ್ಎಸ್ಎಲ್ ವರದಿ 15 ದಿನದಲ್ಲಿ ಬಂದರೆ ಅಪರಾಧ ನಿಯಂತ್ರಣಕ್ಕೆ ಇನ್ನಷ್ಟು ವೇಗ ದೊರೆಯಲಿದೆ. ಪ್ರಕರಣಗಳ ತನಿಖಗೆ ಹೆಚ್ಚು ಅನುಕೂಲ ಆಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವ ಗೋವಿಂದ ಕಾರಜೋಳ, ಸಂಸದೆ ಮಂಗಳಾ ಅಂಗಡಿ, ಶಾಸಕ ಅನಿಲ್ ಬೆನಕೆ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮೊದಲಾದವರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+