ಸಿದ್ದರಾಮಯ್ಯ ಸರ್ಕಾರದಿಂದ ಬರೋಬ್ಬರಿ ಒಂದು ಸಾವಿರ ಕೋಟಿ ಲಂಚ ಸಂಗ್ರಹ: ಎನ್.ರವಿಕುಮಾರ್
ಬೆಂಗಳೂರು, ಅಕ್ಟೋಬರ್ 18: ರಾಜ್ಯದಲ್ಲಿ ಶಿವಾನಂದ ಪಾಟೀಲ್, ಡಿ.ಕೆ.ಶಿವಕುಮಾರ್, ಬೈರತಿ ಸುರೇಶ್, ಯತೀಂದ್ರ, ಇತರ ಸಚಿವರು ಹಣ ಸಂಗ್ರಹಿಸಿದ್ದಾರೆ. ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹಣದ ವಹಿವಾಟು ನಡೆಯುತ್ತಿದೆ. ಇದೆಲ್ಲದರ ಕುರಿತು ಸಿಬಿಐ- ಇಡಿ ತನಿಖೆ ಮಾಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆಗ್ರಹಿಸಿದರು.
ಈ ಕುರಿತು ಬುಧವಾರ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಕರ್ನಾಟಕದಲ್ಲಿ ನಡೆದ ಐಟಿ ದಾಳಿ ಸಂದರ್ಭದಲ್ಲಿ ಸಿಕ್ಕಿದ 94 ಕೋಟಿ ನಗದು ಮತ್ತು 8 ಕೋಟಿ ಮೌಲ್ಯದ ಚಿನ್ನ ಸಿಕ್ಕಿದ್ದು, 102 ಕೋಟಿ ರೂ. ಸ್ವತ್ತನ್ನು ವಶ ಪಡಿಸಿಕೊಂಡಿದ್ದಾರೆ. 1 ಸಾವಿರ ಕೋಟಿ ರೂ. ಸಂಗ್ರಹಿಸಿದ ಮಾಹಿತಿ ಇದೆ ಎಂದು ತಿಳಿಸಿದರು.

ಅಬಕಾರಿ, ಕೈಗಾರಿಕಾ ವಲಯ, ಎಲ್ಲ ಪೊಲೀಸ್ ಠಾಣೆಗಳಿಗೆ ಕಲೆಕ್ಷನ್ ಗುರಿ ಕೊಟ್ಟಿದ್ದಾರೆ. ಐಎಎಸ್, ಐಪಿಎಸ್, ಐಎಫ್‍ಎಸ್, ಕೆಎಎಸ್ ಸೇರಿ ಅಧಿಕಾರಿಗಳ ವರ್ಗಾವಣೆ ವೇಳೆ ಹಣ ಪಡೆದಿದ್ದಾರೆ. ಐಎಎಸ್, ಐಪಿಎಸ್, ಐಎಫ್‍ಎಸ್ ಅಧಿಕಾರಿ ವರ್ಗಾವಣೆಗೆ ಕನಿಷ್ಠ 1ರಿಂದ 3 ಕೋಟಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದರು.
ನೀರಾವರಿ, ಲೋಕೋಪಯೋಗಿ ಇಲಾಖೆ ಸೇರಿ ಬೆಂಗಳೂರಿನಲ್ಲಿ ವಿಪರೀತ ಹಣ ಸಂಗ್ರಹಿಸಿದ್ದಾರೆ. ಅಂಥ ಸಾವಿರಾರು ಕೋಟಿ ಹಣವನ್ನು ಚುನಾವಣೆ ನಡೆಯುವ ಪಂಚ ರಾಜ್ಯಗಳಿಗೆ ಕಳುಹಿಸಿ ಕೊಡುತ್ತಿದ್ದಾರೆ. ಅದರಲ್ಲಿ ಎಷ್ಟು ಕಳುಹಿಸುತ್ತಾರೆ. ಎಷ್ಟು ಜೇಬಿಗೆ ಇಳಿಸುತ್ತಾರೆ ಎಂಬುದರ ತನಿಖೆಯೂ ಆಗಬೇಕಿದೆ ಎಂದು ಒತ್ತಾಯಿಸಿದರು.
ನಿನ್ನೆ ಮತ್ತು ಮೊನ್ನೆ ಎಲ್ಲ ಜಿಲ್ಲಾ ಕೇಂದ್ರಗಳು, ತಾಲ್ಲೂಕು ಕೇಂದ್ರಗಳಲ್ಲಿ ಸೇರಿ 117ಕ್ಕೂ ಹೆಚ್ಚು ಕಡೆ ಬಿಜೆಪಿ ಹೋರಾಟ ಮಾಡಿದೆ. ನಮ್ಮ ಹೋರಾಟ ಮುಂದುವರೆಯಲಿದೆ. ತನಿಖೆಗೆ ಕೊಡುವವರೆಗೆ ಹೋರಾಟ ಮುಂದುವರೆಯುತ್ತದೆ ಎಂದು ಪ್ರಕಟಿಸಿದರು.
ರಾಜ್ಯದಲ್ಲಿ 251ಕ್ಕಿಂತ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಕುರಿತು ಒಂದು ಪೈಸೆ ಪರಿಹಾರ ನೀಡಿಲ್ಲ. ಬರ, ಬಿಸಿಲಿನಿಂದ ರಾಜ್ಯದ ಸಂಪೂರ್ಣ ಬೆಳೆ ನಾಶವಾಗಿದೆ; ಕರೆಂಟಿಲ್ಲದೆ ನೀರಾವರಿ ಬೆಳೆಯೂ ನಾಶವಾಗಿದೆ. ಇದರ ಬಗ್ಗೆಯೂ ಪರಿಹಾರ ಕೊಡುತ್ತಿಲ್ಲ. ಪ್ರತಿದಿನ ಕಾವೇರಿ ನೀರನ್ನು ಹರಿಸುತ್ತಿದ್ದಾರೆ. ಅದನ್ನು ನಿಲ್ಲಿಸಿಲ್ಲ. ಕರ್ನಾಟಕವು ಪೂರ್ತಿ ಎಟಿಎಂ ಆಗಿದೆ ಎಂದು ಆರೋಪಿಸಿದರು.
ತೆಲಂಗಾಣದಲ್ಲಿ ಸಚಿವ ಶಿವಾನಂದ ಪಾಟೀಲ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಲಕ್ಷಾಂತರ ರೂಪಾಯಿ ಹಣದ ಮಳೆಯನ್ನು ಬರುವಂತೆ ಮಾಡಿದ್ದಾರೆ. ಸಂಗ್ರಹಿತ ಕೋಟಿಗಿಂತ ಹೆಚ್ಚು ಹಣ ಅವರು ಕುಳಿತಿದ್ದ ಕಡೆ ಕಾಲಿನಡಿ ರಾಶಿರಾಶಿ ರೀತಿ ಸಿಕ್ಕಿದೆ. ಇದರ ಕುರಿತು ಸಂಪೂರ್ಣ ತನಿಖೆ ಆಗಬೇಕು ಎಂದು ರವಿಕುಮಾರ್ ಅವರು ಒತ್ತಾಯಿಸಿದರು. ಹಣ ಎರಚಿದ್ದಾರೆ. ರಾಶಿರಾಶಿ ಹಣದ ಮೂಲದ ತನಿಖೆ ಆಗಬೇಕು ಎಂದು ತಿಳಿಸಿದರು. ಈ ಕುರಿತು ಸಿಎಂ, ಡಿಸಿಎಂ ಸ್ಪಷ್ಟ ಹೇಳಿಕೆ ಕೊಡಬೇಕು ಎಂದು ಆಗ್ರಹಿಸಿದರು.
ಈ ಸರಕಾರಕ್ಕೆ ನೈತಿಕತೆ ಇಲ್ಲ. ನೈತಿಕತೆ ಇದ್ದರೆ ಮೊದಲು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಹಣದ ಕುರಿತು ಹಾರಿಕೆ ಉತ್ತರವನ್ನು ಬಿಜೆಪಿ ಸಹಿಸುವುದಿಲ್ಲ ಎಂದು ಎನ್ ರವಿ ಕುಮಾರ್ ತಿಳಿಸಿದರು.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications