ಪ್ರವಾಹ ಸಂತ್ರಸ್ತರ ಮನೆ ನಿರ್ಮಾಣಕ್ಕೆ ಸಾವಿರ ಕೋಟಿ ಬಿಡುಗಡೆ
Recommended Video
ಬೆಂಗಳೂರು, ಸೆಪ್ಟೆಂಬರ್ 18: ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಶೀಘ್ರವಾಗಿ ಮನೆ ನಿರ್ಮಿಸಿ ಕೊಡಲು ರಾಜ್ಯ ಸರ್ಕಾರವು ಒಂದು ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಿದೆ.
ಸಾವಿರ ಕೋಟಿ ಬಿಡುಗಡೆ ಮಾಡಲು ಸಂಪುಟ ಸಭೆಯು ತೀರ್ಮಾನ ತೆಗೆದುಕೊಂಡಿದ್ದು, ಈ ಬಗ್ಗೆ ಸಚಿವ ಮಾಧುಸ್ವಾಮಿ ಅವರು ಮಾಧ್ಯಮಗಳಿಗೆ ತಿಳಿಸಿದರು.
ಸಂಚಾರಿ ನಿಯಮ ಉಲ್ಲಂಘನೆ ದಂಡ ಪ್ರಮಾಣ ಇಳಿಕೆ ಮಾಡುವುದಕ್ಕೆ ಕಾನೂನು ತೊಡಕಿದ್ದು, ಇಂದು ಸಂಜೆ ಅಥವಾ ನಾಳೆ ಕಾನೂನು ಇಲಾಖೆಯ ಸಲಹೆ ನೀಡುತ್ತೇವೆ, ಆ ನಂತರ ದಂಡ ಇಳಿಕೆ ಬಗ್ಗೆ ಸರ್ಕಾರವು ನಿರ್ಣಯ ತೆಗೆದುಕೊಳ್ಳಲಿದೆ ಎಂದು ಮಾಧುಸ್ವಾಮಿ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಚಿಕ್ಕಬಳ್ಳಾಪುರ, ಮಂಗಳೂರು, ಹಾವೇರಿ, ಕೋಲಾರ, ಬಾಗಲಕೋಟೆ, ದಾವಣಗೆರೆ, ಚಿತ್ರದುರ್ಗ, ವಿಜಯಪುರ, ತುಮಕೂರು ಜಿಲ್ಲಾ ಆಸ್ಪತ್ರೆಗಳಿಗೆ ಒಂದು ಕೋಟಿ ರೂಪಾಯಿ ಹಣ ನೀಡಲು ಸಂಪುಟ ಒಪ್ಪಿಗೆ ನೀಡಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸೇವಾ ನಿಯಮಗಳ ಪರಿಷ್ಕರಣೆ ಮಾಡಲು ಸಹ ಸಂಪುಟ ಒಪ್ಪಿದೆ, ಮಹಿಳೆ ಆರೋಗ್ಯ ಸಮಸ್ಯೆ ಪತ್ತೆ ಮತ್ತು ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡುವ ನಿರ್ಧಾರ ಮಾಡಲಾಗಿದೆ. ಜೊತೆಗೆ ವಿಜಯನಗರ ಹಳೆಕಾಲುವೆ ದುರಸ್ತಿ ಮತ್ತು ಅಭಿವೃದ್ಧಿಗೆ ಹಣ ಬಿಡುಗಡೆಗೂ ಸಂಪುಟ ಒಪ್ಪಿದೆ ಎಂದು ಮಾಧುಸ್ವಾಮಿ ಮಾಹಿತಿ ನೀಡಿದರು.












Click it and Unblock the Notifications