ಸಿಹಿಸುದ್ದಿ: ಕರ್ನಾಟಕದ ಕೊರೊನಾವೈರಸ್ ಹೊಸ ಪ್ರಕರಣಗಳ ಸಂಖ್ಯೆ 1001ಕ್ಕೆ ಇಳಿಕೆ
ಬೆಂಗಳೂರು, ಜುಲೈ 25: ಕರ್ನಾಟಕದಲ್ಲಿ ಕೊರೊನಾವೈರಸ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಮುಖವಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಮೊದಲ ಬಾರಿಗೆ ಸೋಂಕಿತ ಪ್ರಕರಣಗಳ ಸಂಖ್ಯೆ 200ಕ್ಕಿಂತ ಕಡಿಮೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 1001 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1465 ಸೋಂಕಿತರು ಗುಣಮುಖರಾಗಿದ್ದು, 22 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 28,94,557ಕ್ಕೆ ಏರಿಕೆಯಾಗಿದೆ. ಈವರೆಗೂ 28,34,741 ಸೋಂಕಿತರು ಗುಣಮುಖರಾಗಿದ್ದು. 23,419 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ:
ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 165 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 12,24,760ಕ್ಕೆ ಏರಿಕೆಯಾಗಿದೆ. 3 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15,832ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 8215 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ
ರಾಜ್ಯದಲ್ಲಿ ಒಟ್ಟು 1001 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 6, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು 165, ಬೀದರ್ 1, ಚಾಮರಾಜನಗರ 5, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 62, ಚಿತ್ರದುರ್ಗ 15, ದಕ್ಷಿಣ ಕನ್ನಡ 115, ದಾವಣಗೆರೆ 1, ಧಾರವಾಡ 6, ಗದಗ 5, ಹಾಸನ 90, ಹಾವೇರಿ 4, ಕಲಬುರಗಿ 4, ಕೊಡಗು 63, ಕೋಲಾರ 25, ಕೊಪ್ಪಳ 2, ಮಂಡ್ಯ 35, ಮೈಸೂರು 97, ರಾಯಚೂರು 0, ರಾಮನಗರ 7, ಶಿವಮೊಗ್ಗ 51, ತುಮಕೂರು 42, ಉಡುಪಿ 110, ಉತ್ತರ ಕನ್ನಡ 54, ವಿಜಯಪುರ 1, ಯಾದಗಿರಿ 1 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.












Click it and Unblock the Notifications