ರಾಜ್ಯದ 5 ಜಿಲ್ಲೆಗಳಲ್ಲಿ 0 ಕೊರೊನಾವೈರಸ್ ಪ್ರಕರಣ

ಬೆಂಗಳೂರು, ಸೆಪ್ಟೆಂಬರ್ 17: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಪ್ರತಿನಿತ್ಯ 1,000 ಗಡಿ ದಾಟುತ್ತಿದೆ. ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.67ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.79ರಷ್ಟಿದೆ.

ರಾಜ್ಯದಲ್ಲಿ ಒಂದು ದಿನದಲ್ಲಿ 1003 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1199 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 18 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37573 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2966194ಕ್ಕೆ ಏರಿಕೆಯಾಗಿದೆ. ಒಟ್ಟು 2912633 ಸೋಂಕಿತರು ಗುಣಮುಖರಾಗಿದ್ದು. 15960 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

1003 New Coronavirus Cases Reported in Karnataka Today, State Tally Rise to 2966194

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಪ್ರಕರಣ

ಬೆಂಗಳೂರು ನಗರವೊಂದರಲ್ಲಿ ಕಳೆದ ಒಂದು ದಿನದಲ್ಲಿ 310 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1242950ಕ್ಕೆ ಏರಿಕೆಯಾಗಿದೆ. 6 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 16076ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 7456 ಸಕ್ರಿಯ ಪ್ರಕರಣಗಳಿವೆ. ಸಿಲಿಕಾನ್ ಸಿಟಿಯಲ್ಲಿ ಈವರೆಗೂ ಸೋಂಕು ತಗುಲಿದ 1219417 ಮಂದಿ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಕೊವಿಡ್-19 ಸೋಂಕಿನ ಪರೀಕ್ಷೆ ಪ್ರಮಾಣ

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 31,270 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,17,226 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,48,496 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 86,09,859 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,73,94,536 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,60,04,395 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತ ಪ್ರಕರಣ:

ರಾಜ್ಯದಲ್ಲಿ ಒಟ್ಟು 1003 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 17, ಬೆಂಗಳೂರು ಗ್ರಾಮಾಂತರ 15 ಬೆಂಗಳೂರು 310, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 37, ಚಿತ್ರದುರ್ಗ 10, ದಕ್ಷಿಣ ಕನ್ನಡ 124, ದಾವಣಗೆರೆ 3, ಧಾರವಾಡ 9, ಗದಗ 1, ಹಾಸನ 48, ಹಾವೇರಿ 0, ಕಲಬುರಗಿ 5, ಕೊಡಗು 96, ಕೋಲಾರ 14, ಕೊಪ್ಪಳ 0, ಮಂಡ್ಯ 31, ಮೈಸೂರು 46, ರಾಯಚೂರು 3, ರಾಮನಗರ 2, ಶಿವಮೊಗ್ಗ 27, ತುಮಕೂರು 61, ಉಡುಪಿ 94, ಉತ್ತರ ಕನ್ನಡ 35, ವಿಜಯಪುರ 0, ಯಾದಗಿರಿ 2 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ಕರ್ನಾಟಕದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ

ರಾಜ್ಯದಲ್ಲಿ ಈವರೆಗೂ 7,63,014 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 6,31,969 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,38,599 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 6,26,765 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,51,96,491 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 83,37,623 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 3,64,81,142 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 1,36,90,380 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+