ಕರ್ನಾಟಕದಲ್ಲಿ ಇಂದು 1005 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು, ಡಿಸೆಂಬರ್ 25: ರಾಜ್ಯದಲ್ಲಿ ಇಂದು 1005 ಮಂದಿಗೆ ಕೊರೊನಾ ಸೋಂಕು ತಗುಲಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 9,14,488ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಐವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,044ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಇಂದು 1102 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,88,917ಕ್ಕೆ ಏರಿಕೆಯಾಗಿದೆ. ಇನ್ನು 13,508 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 208 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

1005 New COVID Cases Reported in Karnataka On December 25

ಇಂದು ಬೆಂಗಳೂರಿನಲ್ಲಿ 578 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ನಗರದಲ್ಲಿ ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಭಾರತದಲ್ಲಿ ಇಂದು 23,068 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಇದರಿಂದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,01,46,846ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 336 ಕೊರೊನಾ ವೈರಸ್ ಸೋಂಕಿತರು ಮೃತಪಟ್ಟಿದ್ದಾರೆ.

ಸತತ 12ನೇ ದಿನ ಭಾರತದಲ್ಲಿ 30 ಸಾವಿರಕ್ಕಿಂತ ಕಡಿಮೆ ಸೋಂಕಿತರ ಪ್ರಕರಣಗಳು ದಾಖಲಾಗಿದೆ. ಹಾಗೆಯೇ ಗುರುವಾರದಂದು 24,661 ಮಂದಿ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 97,17,834ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,81,919ಕ್ಕೆ ಇಳಿಕೆಯಾಗಿದೆ. ಒಟ್ಟು ಸಾವಿನ ಸಂಖ್ಯೆ 1,47,097ಕ್ಕೆ ಏರಿಕೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+