Schools: 1008 ಪೂರ್ವ ಪ್ರಾಥಮಿಕ ಶಾಲೆ ಆರಂಭ, 40000 ವಿದ್ಯಾರ್ಥಿಗಳ ನೋಂದಣಿ...Karnataka News
ಬೆಂಗಳೂರು, ಅಕ್ಟೋಬರ್ 26: ಕರ್ನಾಟಕ ರಾಜ್ಯ ಸರ್ಕಾರ ಪೂರ್ವ ಪ್ರಾಥಮಿಕ ಶಾಲೆಗಳ ಆರಂಭಿಸುವ ಮೂಲಕ ಪೂರ್ವ ಶಾಲಾ ಶಿಕ್ಷಣಕ್ಕೆ ಭದ್ರ ಬುನಾದಿ ಹಾಕಿದೆ. ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು, ಶಾಲಾ ಶಿಕ್ಷಣಕ್ಕೆ ಮುನ್ನವೇ ಮಕ್ಕಳನ್ನು ಕಲಿಕೆಗೆ ಸಿದ್ಧರಾಗಿಸಲು ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಇತಿಹಾಸ ಬರೆದಿದೆ.
ಕರ್ನಾಟಕ ಕಾಂಗ್ರೆಸ್ ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿದೆ. ಶೈಕ್ಷಣಿಕ ಪ್ರಗತಿ ಕಾಂಗ್ರೆಸ್ ಗ್ಯಾರಂಟಿ ಆಗಿದೆ ಎಂದು ತಿಳಿಸಿದೆ. ಕಲ್ಯಾಣ ಕರ್ನಾಟಕದ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುತ್ತದೆ. ಇತ್ತೀಚೆಗೆ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ಸಾಲ ಯೋಜನೆಯಡಿ ರಾಜ್ಯದಲ್ಲಿ ಒಟ್ಟು 500 ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಮಂಜೂರು ಮಾಡಿದೆ. ಇದರಲ್ಲಿ ಕಲ್ಯಾಣ ಕರ್ನಾಟಕಕ್ಕೆ 94 ಶಾಲೆಗಳನ್ನು ಮಂಜುರು ಮಾಡಿದೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಮೂಲಕ 1008 ಪೂರ್ವ ಪ್ರಾಥಮಿಕ ಶಾಲೆಗಳು ಆರಂಭವಾಗಿವೆ. ಶಾಲೆಗಳು ಶುರುವಾದ ಕಳೆದ 40 ದಿನಗಳಲ್ಲಿ 40 ಸಾವಿರ ವಿದ್ಯಾರ್ಥಿಗಳ ನೋಂದಣಿ ಮಾಡಲಾಗಿದೆ. ಇದರೊಂದಿಗೆ 5000 ಹೆಚ್ಚುವರಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳು ಆರಂಭವಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಇನ್ನು ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಆರಂಭವಾಗಲಿದೆ. 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸೇವೆ ನೀಡಲಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಮಾಡಿದ್ದಾರೆ. ಪ್ರತಿ ಶಾಲೆಗಳಿಗೆ ಅಂದಾಜು ನಾಲ್ಕು ಕೋಟಿ ರೂಪಾಯಿ ವೆಚ್ಚದಲ್ಲಿ ಮೂಲಸೌಕರ್ಯ ಒದಗಿಸಲಾಗುತ್ತದೆ. ಅಗತ್ಯತೆ ಆಧಾರದಲ್ಲಿ ಮಕ್ಕಳ ಕರೆದೊಯ್ಯಲು ಹಾಗೂ ಎಲ್ಲ ಅಗತ್ಯ ಸೌಲಭ್ಯ ಒದಗಿಸಲಾಗುತ್ತದೆ.
ಅಂಗನವಾಡಿಯಿಂದ ಪಿಯುಸಿ ವರೆಗೆ ಒಂದೇ ಕ್ಯಾಂಪಸ್‌ನಲ್ಲಿ ವ್ಯಾಸಂಗ ಮಾಡಲು ಅವಕಾಶ ನೀಡಲಾಗುತ್ತದೆ. ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ರಾಜ್ಯ ಸರ್ಕಾರ ಈ ಹೊಸ ಶಾಲೆಗಳನ್ನು ಆರಂಭಿಸಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಅರ್ಹ ಶಿಕ್ಷಕರಿಗೆ ಬಡ್ತಿ
ಕರ್ನಾಟಕ ರಾಜ್ಯ ಸರ್ಕಾರ ಇತ್ತೀಚೆಗೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದೆ. ತಮ್ಮ ಬೋಧನಾ ವಿಷಯಗಳಲ್ಲಿ ಪದವಿ ಹೊಂದಿರುವ ಮತ್ತು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯಲ್ಲಿ ಉತ್ತೀರ್ಣ ಆಗಿರುವ ಶಿಕ್ಷಕರು 6ನೇ ಮತ್ತು 7ನೇ ತರಗತಿಗಳಿಗೂ ಪಾಠ ಮಾಡಲು ಅವಕಾಶ ನೀಡಿದೆ. ಕಳೆದ ಅಕ್ಟೋಬರ್ 16 ರಂದು ಗೆಜೆಟ್ ನೋಟಿಫಿಕೇಷನ್ ಹೊರಿಡಿಸಿದೆ. ಅರ್ಹರಿಗೆ ವೃತ್ತಿಯಲ್ಲಿ ಬಡ್ತಿ ನೀಡಿ ಆದೇಶಿಸಿದೆ. ಸರ್ಕಾರದ ಈ ನಿರ್ಧಾರ ವಿರುದ್ಧ ಆಕ್ಷೇಪಣೆಗಳು ಇದ್ದರೆ ಎರಡು ವಾರಗಳ ಕಾಲಾವಕಾಶ ನೀಡಲಾಗಿದೆ.












Click it and Unblock the Notifications