ಕರ್ನಾಟಕಕ್ಕೆ ಆಘಾತ: 24 ಗಂಟೆಗಳಲ್ಲಿ 10250 ಮಂದಿಗೆ ಕೊರೊನಾವೈರಸ್!
ಬೆಂಗಳೂರು, ಏಪ್ರಿಲ್ 11: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೇ ದಿನದಲ್ಲೇ 10 ಸಾವಿರದ ಗಡಿ ದಾಟಿದೆ. ಹೊಸ ಕೊವಿಡ್-19 ಸೋಂಕಿನ ಎರಡನೇ ಅಲೆ ರಾಜ್ಯ ರಾಜಧಾನಿ ಜನರಲ್ಲಿ ಹೊಸ ಆತಂಕ ಸೃಷ್ಟಿಸಿದೆ.
ರಾಜ್ಯದಲ್ಲಿ 5 ರಿಂದ 7 ಸಾವಿರದ ಆಸುಪಾಸಿನಲ್ಲಿದ್ದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇದೀಗ ಹೊಸ ದಾಖಲೆ ಬರೆದಿದೆ. ಕಳೆದ 24 ಗಂಟೆಗಳಲ್ಲಿ 10250 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
Corona Alert: ಯಾವ ರಾಜ್ಯಗಳು ಅತಿಹೆಚ್ಚು ಅಪಾಯ ಎದುರಿಸುತ್ತಿವೆ?
ಕರ್ನಾಟಕದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಜೊತೆ ಜೊತೆಗೆ ಸಾವಿನ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡು ಬಂದಿದೆ. ಲಸಿಕೆ ವಿತರಣೆ ನಡುವೆಯೂ ರಾಜ್ಯದಲ್ಲಿ ಒಂದೇ ದಿನ 40 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಕುರಿತು ಒಂದು ವರದಿ ಇಲ್ಲಿದೆ ನೋಡಿ.


ಕರ್ನಾಟಕದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು
ಕರ್ನಾಟಕದಲ್ಲಿ ಒಂದೇ ದಿನ 10250 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1065290ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 40 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 12889ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 2638 ಸೋಂಕಿತರು ಗುಣಮುಖರಾಗಿದ್ದು, ರಾಜ್ಯದಲ್ಲಿ ಈವರೆಗೂ 983157 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ 69225 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲೇ 7584 ಮಂದಿಗೆ ಕೊವಿಡ್-19
ಕರ್ನಾಟಕದಲ್ಲಿ ದೃಢಪಟ್ಟಿರುವ ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಶೇ.75ರಷ್ಟು ಪ್ರಕರಣಗಳು ಸಿಲಿಕಾನ್ ಸಿಟಿಯಲ್ಲಿ ಪತ್ತೆಯಾಗಿವೆ. ಒಂದೇ ದಿನ ಬೆಂಗಳೂರಿನಲ್ಲಿ 7584 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಮಹಾಮಾರಿಗೆ 29 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 4769ಕ್ಕೆ ಏರಿಕೆಯಾಗಿದೆ. ರಾಜ್ಯ ರಾಜಧಾನಿಯೊಂದರಲ್ಲೇ 42525 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

ಕೊರೊನಾವೈರಸ್ ಸೋಂಕು ಹೆಚ್ಚಾದರೆ ರಾತ್ರಿ ಕರ್ಫ್ಯೂ
ಕೊರೊನಾವೈರಸ್ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಏಪ್ರಿಲ್ 10 ರಿಂದ ಏಪ್ರಿಲ್ 20ರವರೆಗೂ ರಾಜ್ಯದ 7 ಜಿಲ್ಲೆಗಳ ಎಂಟು ನಗರಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಬೆಂಗಳೂರು ನಗರ, ಮೈಸೂರು, ಕಲಬುರ್ಗಿ, ತುಮಕೂರು, ಬೀದರ್, ಮಂಗಳೂರು, ಉಡುಪಿ ಮತ್ತು ಮಣಿಪಾಲ್ ನಗರಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದರ ಜೊತೆಗೆ ಕೊವಿಡ್-19 ಸೋಂಕಿತ ಪ್ರಕರಣಗಳು ಹೆಚ್ಚಾಗಿ ಕಂಡು ಬಂದಿರುವ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
Recommended Video

ಕರ್ನಾಟಕದಲ್ಲಿ ಜಿಲ್ಲಾವಾರು ಕೊವಿಡ್-19 ಕೇಸ್?
ರಾಜ್ಯದಲ್ಲಿ ಒಟ್ಟು 10250 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 46, ಬಳ್ಳಾರಿ 103, ಬೆಳಗಾವಿ 74, ಬೆಂಗಳೂರು ಗ್ರಾಮಾಂತರ 117, ಬೆಂಗಳೂರು 7584, ಬೀದರ್ 290, ಚಾಮರಾಜನಗರ 49, ಚಿಕ್ಕಬಳ್ಳಾಪುರ 64, ಚಿಕ್ಕಮಗಳೂರು 41, ಚಿತ್ರದುರ್ಗ 33, ದಕ್ಷಿಣ ಕನ್ನಡ 133, ದಾವಣಗೆರೆ 50, ಧಾರವಾಡ 150, ಗದಗ 19, ಹಾಸನ 170, ಹಾವೇರಿ 22, ಕಲಬುರಗಿ 291, ಕೊಡಗು 39, ಕೋಲಾರ 41, ಕೊಪ್ಪಳ 32, ಮಂಡ್ಯ 51, ಮೈಸೂರು 277, ರಾಯಚೂರು 103, ರಾಮನಗರ 33, ಶಿವಮೊಗ್ಗ 39, ತುಮಕೂರು 150, ಉಡುಪಿ 75, ಉತ್ತರ ಕನ್ನಡ 73, ವಿಜಯಪುರ 63, ಯಾದಗಿರಿ 38 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.












Click it and Unblock the Notifications