ಹೊಸ ದಾಖಲೆ: ಕರ್ನಾಟಕದಲ್ಲಿ ಒಂದೇ ದಿನ 1033 ಮಂದಿಗೆ ಕೊರೊನಾವೈರಸ್!

ಬೆಂಗಳೂರು, ಜನವರಿ 1: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕ್ರಮೇಣ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೊಮ್ಮೆ 1,000ದ ಗಡಿ ದಾಟಿದೆ. ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.86ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 0.48ರಷ್ಟಿದೆ.
ಕಳೆದ ಒಂದೇ ದಿನದಲ್ಲಿ 1033 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 354 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 5 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 38340 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಶನಿವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 30,08,370ಕ್ಕೆ ಏರಿಕೆಯಾಗಿದೆ. ಒಟ್ಟು 29,60,615 ಸೋಂಕಿತರು ಗುಣಮುಖರಾಗಿದ್ದು. 9,386 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

1033 New Coronavirus Cases Reported in Karnataka Today, State Tally Rise to 3008370

ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಒಂದು ಕಡೆಯಲ್ಲಿ ಭಯ ಹುಟ್ಟಿಸುವಂತೆ ಏರಿಕೆಯಾಗುತ್ತಿವೆ. ಇದರ ಮಧ್ಯೆ ಪರಿಸ್ಥಿತಿಗೆ ಕೊವಿಡ್-19 ರೂಪಾಂತರಿ ಓಮಿಕ್ರಾನ್ ಕಾರಣವೇ ಎಂಬ ಆತಂಕವೂ ಕಾಡುತ್ತಿದೆ. ರಾಜ್ಯದಲ್ಲಿ ಈವರೆಗೂ 66 ಮಂದಿಗೆ ಓಮಿಕ್ರಾನ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಭೀತಿ

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಭೀತಿ

ಬೆಂಗಳೂರು ನಗರವೊಂದರಲ್ಲಿ ಕಳೆದ ಒಂದು ದಿನದಲ್ಲಿ 810 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1264428ಕ್ಕೆ ಏರಿಕೆಯಾಗಿದೆ. 2 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 16402ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 7876 ಸಕ್ರಿಯ ಪ್ರಕರಣಗಳಿವೆ. ಸಿಲಿಕಾನ್ ಸಿಟಿಯಲ್ಲಿ ಈವರೆಗೂ ಸೋಂಕು ತಗುಲಿದ 1240149 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾವೈರಸ್ ಸೋಂಕಿನ ಪರೀಕ್ಷೆ ಪ್ರಮಾಣ

ಕೊರೊನಾವೈರಸ್ ಸೋಂಕಿನ ಪರೀಕ್ಷೆ ಪ್ರಮಾಣ

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 22,098 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 97,127 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,19,225 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 1,06,81,481 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 4,59,05,941 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 5,65,87,422 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟಿದೆ ಕೊವಿಡ್-19 ಪ್ರಕರಣ

ಯಾವ ಜಿಲ್ಲೆಯಲ್ಲಿ ಎಷ್ಟಿದೆ ಕೊವಿಡ್-19 ಪ್ರಕರಣ

ರಾಜ್ಯದಲ್ಲಿ ಒಟ್ಟು 1033 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 6 ಬೆಂಗಳೂರು 810, ಬೀದರ್ 2, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 10, ಚಿತ್ರದುರ್ಗ 4, ದಕ್ಷಿಣ ಕನ್ನಡ 48, ದಾವಣಗೆರೆ 0, ಧಾರವಾಡ 9, ಗದಗ 0, ಹಾಸನ 5, ಹಾವೇರಿ 0, ಕಲಬುರಗಿ 8, ಕೊಡಗು 13, ಕೋಲಾರ 6, ಕೊಪ್ಪಳ 0, ಮಂಡ್ಯ 23, ಮೈಸೂರು 29, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 8, ಉಡುಪಿ 28, ಉತ್ತರ ಕನ್ನಡ 5, ವಿಜಯಪುರ 1, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

    Kohli ಅನ್ನು ಚೇಂಜ್ ಮಾಡಲು Dravid ಪ್ರಯತ್ನವನ್ನು ರಿವೀಲ್ ಮಾಡಿದ KL Rahul | Oneindia Kannada
    ಕರ್ನಾಟಕದಲ್ಲಿ ಕೊವಿಡ್-19 ಲಸಿಕೆ ವಿತರಣೆ

    ಕರ್ನಾಟಕದಲ್ಲಿ ಕೊವಿಡ್-19 ಲಸಿಕೆ ವಿತರಣೆ

    ರಾಜ್ಯದಲ್ಲಿ ಈವರೆಗೂ 7,64,458 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 7,22,488 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,43,756 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 8,94,810 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 18 ವರ್ಷಕ್ಕಿಂತ ಮೇಲ್ಪಟ್ಟ 2,74,49,483 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 2,12,52,930 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 4,76,61,695 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 3,87,36,017 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+