ಕರ್ನಾಟಕದಲ್ಲಿ 7 ಲಕ್ಷದ ಗಡಿ ದಾಟಿದ ಕೊವಿಡ್-19 ಪ್ರಕರಣ

ಬೆಂಗಳೂರು, ಅಕ್ಟೋಬರ್.10: ಕರ್ನಾಟಕದಲ್ಲಿ ಪ್ರತಿನಿತ್ಯ 10 ಸಾವಿರ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗುವುದು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಶನಿವಾರ ಕೂಡಾ ರಾಜ್ಯದಲ್ಲಿ 10517 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ರಾಜ್ಯದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿಗೆ 102 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 9891ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಭಾರತದಲ್ಲಿ ಇಂದು 73,272 ಕೊರೊನಾ ಸೋಂಕಿತರು ಪತ್ತೆ
ಕೊರೊನಾವೈರಸ್ ಒಟ್ಟು 700786 ಸೋಂಕಿತ ಪ್ರಕರಣಗಳ ಪೈಕಿ 569947 ಸೋಂಕಿತರು ಗುಣಮುಖರಾಗಿದ್ದಾರೆ. 120929 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ. ಕಳೆದ 24 ಗಂಟೆಗಳಲ್ಲಿ 8337 ಕೊವಿಡ್-19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

10517 New Coronavirus Cases Reported in Karnataka Today, State Tally Rise to 700786

ಕರ್ನಾಟಕದಲ್ಲಿ ಎಷ್ಟು ಮಂದಿಗೆ ಕೊವಿಡ್ ಟೆಸ್ಟ್?:
ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸಾರ್ವಜನಿಕರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸುವುದು ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 48403 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 64367 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 112770 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 58,52,300 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.

Recommended Video

      ಹಿಂದು ದೇವಸ್ಥಾನ ಹೊಡಿಯೋ ಅಂತ ಕೆಟ್ಟ ಮನಸ್ಸು ಯಾಕೆ?? | Oneindia Kannada

      ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಎಷ್ಟು ಕೊರೊನಾವೈರಸ್ ಕೇಸ್?:
      ರಾಜ್ಯದಲ್ಲಿ ಒಟ್ಟು 10517 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 124, ಬಳ್ಳಾರಿ 225, ಬೆಳಗಾವಿ 515, ಬೆಂಗಳೂರು ಗ್ರಾಮಾಂತರ 224, ಬೆಂಗಳೂರು 4563, ಬೀದರ್ 23, ಚಾಮರಾಜನಗರ 79, ಚಿಕ್ಕಬಳ್ಳಾಪುರ 122, ಚಿಕ್ಕಮಗಳೂರು 241, ಚಿತ್ರದುರ್ಗ 447, ದಕ್ಷಿಣ ಕನ್ನಡ 316, ದಾವಣಗೆರೆ 345, ಧಾರವಾಡ 141, ಗದಗ 32, ಹಾಸನ 455, ಹಾವೇರಿ 51, ಕಲಬುರಗಿ 104, ಕೊಡಗು 216, ಕೋಲಾರ 174, ಕೊಪ್ಪಳ 84, ಮಂಡ್ಯ 248, ಮೈಸೂರು 465, ರಾಯಚೂರು 93, ರಾಮನಗರ 68, ಶಿವಮೊಗ್ಗ 259, ತುಮಕೂರು 374, ಉಡುಪಿ 237, ಉತ್ತರ ಕನ್ನಡ 89, ವಿಜಯಪುರ 130, ಯಾದಗಿರಿ 73 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+