Breaking: ಕರ್ನಾಟಕದಲ್ಲಿ ಒಂದೇ ದಿನ 1000 ಗಡಿ ದಾಟಿದ ಕೊರೊನಾ ವೈರಸ್!

ಬೆಂಗಳೂರು, ಜುಲೈ 01: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಒಂದೇ ದಿನ 1000 ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 1073 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ರಾಜ್ಯದಲ್ಲಿ 24 ಗಂಟೆಗಳಲ್ಲಿ ಕೊರೊನಾ ವೈರಸ್ ಪಾಸಿಟಿವಿಟಿ ಪ್ರಮಾಣವು ಶೇ.4.19ರಷ್ಟಾಗಿದೆ. ಅದೇ ರೀತಿ ಏಳು ದಿನಗಳಲ್ಲಿ ಪಾಸಿಟಿವಿಟಿ ಪ್ರಮಾಣವು ಶೇ.3.67ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲೇ 1073 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 834 ಸೋಂಕಿತರು ಗುಣಮುಖರಾಗಿದ್ದು, ಒಂದು ಸಾವಿನ ಪ್ರಕರಣ ವರದಿಯಾಗಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 3970484 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 3924232 ಸೋಂಕಿತರು ಗುಣಮುಖರಾಗಿದ್ದು, 40,076 ಜನರು ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಇದರ ಹೊತರಾಗಿ ರಾಜ್ಯದಲ್ಲಿ 6134 ಸಕ್ರಿಯ ಪ್ರಕರಣಗಳಿವೆ.

1073 New Covid-19 Cases Reported in Karnataka in last 24 Hours

ಬೆಂಗಳೂರಿಗರೇ ಎಚ್ಚರ ಎಚ್ಚರ: ಕರ್ನಾಟಕದಲ್ಲಿ 1073 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಖಾತ್ರಿಯಾಗಿದ್ದರೆ, ಅದರಲ್ಲಿ 1008 ಪ್ರಕರಣಗಳು ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ವರದಿಯಾಗಿವೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 1805099ಕ್ಕೆ ಏರಿಕೆಯಾಗಿದೆ.

ಇದುವರೆಗೂ 1782315 ಸೋಂಕಿತರು ಗುಣಮುಖರಾಗಿದ್ದರೆ, 16969 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ಕೋವಿಡ್-19 ಅಪಾಯ ಇನ್ನೂ ಕಡಿಮೆಯಾಗಿಲ್ಲ ಎನ್ನುವುದು ಖಾತ್ರಿಯಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+