4 ಸಾವಿನ ಸುದ್ದಿ: ಕರ್ನಾಟಕದಲ್ಲಿ ತಗ್ಗಿದ ಕೊರೊನಾವೈರಸ್ ಸಾವಿನ ಸಂಖ್ಯೆ

ಬೆಂಗಳೂರು, ಸೆಪ್ಟೆಂಬರ್ 9: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ ಐದಕ್ಕಿಂತ ಕಡಿಮೆ ಸಾವಿನ ಪ್ರಕರಣಗಳು ವರದಿಯಾಗಿದೆ. ರಾಜ್ಯದಲ್ಲಿ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.63ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 0.37ರಷ್ಟಿದೆ.

ರಾಜ್ಯದಲ್ಲಿ ಒಂದು ದಿನದಲ್ಲಿ 1074 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1136 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 4 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 37462 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಗುರುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2959164ಕ್ಕೆ ಏರಿಕೆಯಾಗಿದೆ. ಒಟ್ಟು 2904683 ಸೋಂಕಿತರು ಗುಣಮುಖರಾಗಿದ್ದು. 16992 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

1074 New Coronavirus Cases Reported in Karnataka Today, State Tally Rise to 2959164


ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಪ್ರಕರಣ:

ಬೆಂಗಳೂರು ನಗರವೊಂದರಲ್ಲಿ ಕಳೆದ ಒಂದು ದಿನದಲ್ಲಿ 343 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1240653ಕ್ಕೆ ಏರಿಕೆಯಾಗಿದೆ. 3 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 16043ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 7208 ಸಕ್ರಿಯ ಪ್ರಕರಣಗಳಿವೆ.

ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 34,313 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,35,135 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,69,448 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 83,77,736 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,65,29,834 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 4,49,07,570 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ರಾಜ್ಯದಲ್ಲಿ ಒಟ್ಟು 1074 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 8, ಬೆಂಗಳೂರು ಗ್ರಾಮಾಂತರ 5 ಬೆಂಗಳೂರು 343, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 68, ಚಿತ್ರದುರ್ಗ 8, ದಕ್ಷಿಣ ಕನ್ನಡ 176, ದಾವಣಗೆರೆ 3, ಧಾರವಾಡ 7, ಗದಗ 0, ಹಾಸನ 81, ಹಾವೇರಿ 0, ಕಲಬುರಗಿ 7, ಕೊಡಗು 59, ಕೋಲಾರ 12, ಕೊಪ್ಪಳ 0, ಮಂಡ್ಯ 15, ಮೈಸೂರು 48, ರಾಯಚೂರು 6, ರಾಮನಗರ 2, ಶಿವಮೊಗ್ಗ 39, ತುಮಕೂರು 22, ಉಡುಪಿ 126, ಉತ್ತರ ಕನ್ನಡ 25, ವಿಜಯಪುರ 1, ಯಾದಗಿರಿ 1 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ರಾಜ್ಯದಲ್ಲಿ ಈವರೆಗೂ 7,62,811 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 6,21,131 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,38,037 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 5,78,181 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,47,87,875 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 77,39,967 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 3,49,98,615 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 1,20,37,521 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+