108 ಆ್ಯಂಬುಲೆನ್ಸ್ ನೌಕರರ ಬಿಗಿ ಪಟ್ಟು: ನಾಳೆ ರಾತ್ರಿ 8ರಿಂದ ಸೇವೆ ಸ್ಥಗಿತ, ಸಾಮೂಹಿಕ ರಾಜೀನಾಮೆ ಎಚ್ಚರಿಕೆ!

ಬೆಂಗಳೂರು: ವಾರ್ಷಿಕ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ 15 ದಿನಗಳ ಗಡುವು ನೀಡಿದ್ದ 108 ಆ್ಯಂಬುಲೆನ್ಸ್ ನೌಕರರ ತಾಳ್ಮೆಯ ಕಟ್ಟೆಯೊಡೆದಿದೆ. ನಿಗದಿತ ಗಡುವು ಮುಕ್ತಾಯಗೊಂಡರೂ ಆರೋಗ್ಯ ಇಲಾಖೆ ಹಾಗೂ ಸರ್ಕಾರದಿಂದ ನಿರೀಕ್ಷಿತ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ನೌಕರರು ಸೇವೆ ಸ್ಥಗಿತಗೊಳಿಸುವ ನಿರ್ಧಾರಕ್ಕೆ ಮುಂದಾಗಿದ್ದಾರೆ.

ನಾಳೆ ಸಂಜೆ ವೇಳೆಗೆ ತಮ್ಮ ಬೇಡಿಕೆಗಳ ಕುರಿತು ಸರ್ಕಾರ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ, ನಾಳೆ ರಾತ್ರಿ 8 ಗಂಟೆ ಬಳಿಕ 108 ಆ್ಯಂಬುಲೆನ್ಸ್ ಸೇವೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವುದಾಗಿ ನೌಕರರು ಎಚ್ಚರಿಸಿದ್ದಾರೆ. ಇದರೊಂದಿಗೆ ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ನಿರ್ಧಾರವನ್ನೂ ಸಿಬ್ಬಂದಿ ಕೈಗೊಂಡಿದ್ದಾರೆ.

108 Ambulance Employees Protest Services to Be Suspended From 8 PM Tomorrow Mass Resignation Threat

108 Ambulance: ತುರ್ತು ಆರೋಗ್ಯ ಸೇವೆಗೆ ಹೊಡೆತದ ಆತಂಕ

ರಾಜ್ಯಾದ್ಯಂತ ತುರ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ಪ್ರಮುಖ ನೆರವಾಗುತ್ತಿರುವ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಗೊಂಡರೆ ರೋಗಿಗಳು ಹಾಗೂ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತುರ್ತು ಆರೋಗ್ಯ ಸೇವೆಯ ಮೇಲೆ ಪರಿಣಾಮ ಬೀರುವ ಆತಂಕವೂ ಎದುರಾಗಿದೆ.

ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ನೌಕರರ ಸಮಸ್ಯೆಗಳನ್ನು ಬಗೆಹರಿಸಬೇಕು. ಸೇವೆಗೆ ಯಾವುದೇ ರೀತಿಯ ಅಡ್ಡಿಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿಬ್ಬಂದಿ ಒತ್ತಾಯಿಸಿದ್ದಾರೆ.

108 Ambulance: ಆ್ಯಂಬುಲೆನ್ಸ್ ನೌಕರರ ಪ್ರಮುಖ ಬೇಡಿಕೆಗಳೇನು?

ನೌಕರರು ಹಲವು ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಅವುಗಳಲ್ಲಿ ಪ್ರತಿ ವರ್ಷ ವಾರ್ಷಿಕ ವೇತನ ಹೆಚ್ಚಳದೊಂದಿಗೆ ವೇತನ ಪರಿಷ್ಕರಣೆ ಮಾಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.

ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ವಾಹನಗಳ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ವಲಯವಾರು ವೇತನ ನಿಗದಿ ವ್ಯವಸ್ಥೆಯನ್ನು ರದ್ದುಪಡಿಸಿ ಎಲ್ಲ ಸಿಬ್ಬಂದಿಗೂ ಏಕರೂಪ ವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಅದೇ ರೀತಿ, ಸಿಬ್ಬಂದಿಯ ಜೇಷ್ಠತೆಯ ಆಧಾರದ ಮೇಲೆ ವೇತನ ನಿಗದಿ ಮಾಡಬೇಕು ಹಾಗೂ ಕಾರ್ಮಿಕ ಇಲಾಖೆಯ ನಿಯಮಾವಳಿಗಳಂತೆ ಪ್ರತಿ ತಿಂಗಳ 7ನೇ ತಾರೀಖಿನೊಳಗೆ ವೇತನ ಪಾವತಿಯಾಗುವ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.‌

ಸಿಬ್ಬಂದಿ ಕುಟುಂಬಕ್ಕೆ ₹50 ಲಕ್ಷ ಪರಿಹಾರ

ಕರ್ತವ್ಯದ ವೇಳೆ ಅಪಘಾತ ಸಂಭವಿಸಿ ಮೃತಪಟ್ಟ ಸಿಬ್ಬಂದಿಯ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು ಎಂಬ ಬೇಡಿಕೆಯನ್ನೂ ನೌಕರರು ಮುಂದಿಟ್ಟಿದ್ದಾರೆ. ಇದರ ಜೊತೆಗೆ ಸಿಬ್ಬಂದಿಗೆ ಸೂಕ್ತ ವಿಶ್ರಾಂತಿ ಕೊಠಡಿಗಳ ವ್ಯವಸ್ಥೆ ಮಾಡಬೇಕು ಹಾಗೂ ಕರ್ತವ್ಯದ ಶಿಫ್ಟ್ ಸಮಯವನ್ನು ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಸರ್ಕಾರ ತಮ್ಮ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಿ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ನಾಳೆ ರಾತ್ರಿ 8 ಗಂಟೆಯಿಂದ ಸೇವೆ ಸ್ಥಗಿತಗೊಳಿಸುವುದರ ಜೊತೆಗೆ ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಹೋರಾಟ ಮುಂದುವರಿಸುವುದಾಗಿ 108 ಆ್ಯಂಬುಲೆನ್ಸ್ ನೌಕರರು ಎಚ್ಚರಿಕೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+