ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ 108ಆಂಬ್ಯುಲೆನ್ಸ್ ವತ್ಯಯ: ಪರ್ಯಾಯ ವ್ಯವಸ್ಥೆಗೆ ಕ್ರಮ, ಆತಂಕ ಬೇಡ ಎಂದ: ಸಚಿವ ಸುಧಾಕರ್

|
Google Oneindia Kannada News

ಬೆಂಗಳೂರು, ಸೆಪ್ಟಂಬರ್ 25: 108 ಆಂಬ್ಯುಲೆನ್ಸ್ ಸೇವೆಗಳ ಸಹಾಯವಾಣಿಯಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳು ಸೃಷ್ಟಿಯಾಗಿದ್ದು ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಂಡಿದ್ದೇವೆ. ರಾಜ್ಯದ ಜನರು ಈ ಕುರಿತು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಆಂಬ್ಯುಲೆನ್ಸ್‌ಗಾಗಿ ಸಂಪರ್ಕಿಸುವ 108 ಐಟಿ ಹಾರ್ಡ್‌ವೇರ್‌ನಲ್ಲಿ ಶನಿವಾರ ಸಂಜೆಯಿಂದ ಸಮಸ್ಯೆ ಸೃಷ್ಟಿಯಾಗಿದೆ. ಅದನ್ನು ಗುತ್ತಿಗೆ ಪಡೆದುಕೊಂಡಿರುವ ಜಿವಿಕೆ ತುರ್ತು ನಿರ್ವಹಣೆ ಮತ್ತು ಸಂಶೋಧನಾ ಸಂಸ್ಥೆ (GVK-EMRI) ಸರಿಪಡಿಸಿದೆ. 15 ವರ್ಷ ಹಳೆಯ ತಾಂತ್ರಿಕ ವ್ಯವಸ್ಥೆ ಇದಾಗಿರುವುದರಿಂದ ಸರ್ವರ್‌ಗೆ ವೈರಸ್‌ ಸಮಸ್ಯೆ ಆಗಿದೆ. ಎಂಜಿನಿಯರ್‌ಗಳು ಮದರ್‌ ಬೋರ್ಡ್‌ ಸಮಸ್ಯೆಯನ್ನು ಸರಿಪಡಿಸಿದ್ದಾರೆ. ಇಲಾಖೆ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿಕೊಂಡು ಇದು ಕೆಲಸ ಮಾಡುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳಲಾಗಿದೆ. ಈಗ ಕರೆಗಳನ್ನು ಸ್ವೀಕಾರ ಮಾಡಲಾಗುತ್ತಿದೆ. ಪ್ರತಿ ಜಿಲ್ಲೆಯಲ್ಲೂ 4-5 ಜನರಿರುವ ಬ್ಯಾಕ್‌ ಅಪ್‌ ಕಾಲ್‌ ಸೆಂಟರ್‌ ಅನ್ನು ತೆರೆಯಲು ಸೂಚಿಸಲಾಗಿದೆ ಎಂದರು.

ಕರ್ನಾಟಕದಲ್ಲಿ ಆಂಬುಲೆನ್ಸ ಸೇವೆ ವ್ಯತ್ಯಯ: 108ಗೆ ಕರೆ ಹೋಗ್ತಿಲ್ಲ, ತಾಂತ್ರಿಕ ಸಮಸ್ಯೆ ಒಪ್ಪಿಕೊಂಡ ಸಚಿವರುಕರ್ನಾಟಕದಲ್ಲಿ ಆಂಬುಲೆನ್ಸ ಸೇವೆ ವ್ಯತ್ಯಯ: 108ಗೆ ಕರೆ ಹೋಗ್ತಿಲ್ಲ, ತಾಂತ್ರಿಕ ಸಮಸ್ಯೆ ಒಪ್ಪಿಕೊಂಡ ಸಚಿವರು

ಆದರೆ ತಾಂತ್ರಿಕ ಸಮಸ್ಯೆಯಿಂದಾಗಿ ಶನಿವಾರದಿಂದ ಈವರೆಗೆ ಈ ಪ್ರಕ್ರಿಯೆಗೆ 6 ರಿಂದ 7 ನಿಮಿಷಗಳ ಕಾಲ ತೆಗೆದುಕೊಳ್ಳಲಾಗುತ್ತಿದೆ. ಪ್ರತಿದಿನ 7 ರಿಂದ 8 ಸಾವಿರ ಕರೆಗಳ ಬದಲು 2 ರಿಂದ 2.5 ಸಾವಿರ ಕರೆಗಳನ್ನು ಮಾತ್ರ ಸ್ವೀಕರಿಸಲು ಸಾಧ್ಯವಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.

108 Ambulance problem action for Provide alternative service

ಹೊಸ ಆಂಬ್ಯಲೆನ್ಸ್
ಸದ್ಯ ಆಂಬ್ಯಲೆನ್ಸ್‌ ಸೇವೆ ನೀಡುತ್ತಿರುವ ಜಿವಿಕೆ ಕಾನೂನಾತ್ಮಕ ಹೋರಾಟಕ್ಕೆ ಮುಂದಾಗಿದೆ. ಆದರೆ ಅವರ ಸೇವೆ ಸರ್ಕಾರಕ್ಕೆ ಸಮಾಧಾನ ತಂದಿಲ್ಲ. ಈಗಾಗಲೇ ಕೋರ್ಟ್‌ ಮಾರ್ಗಸೂಚಿಯಂತೆ ಹೊಸ ಟೆಂಡರ್‌ ಆಗಿದೆ. ಒಳ್ಳೆಯ ಸೇವೆ ನೀಡುವ ಸಂಸ್ಥೆ ಇನ್ನೊಂದು ತಿಂಗಳಲ್ಲಿ 108ನ ಆರೋಗ್ಯ ಸೇವೆ ನೀಡಲಿದೆ. ಇದು ತಾಂತ್ರಿಕವಾಗಿ ಉತ್ಕೃಷ್ಠ ಸೇವೆಯಾಗಿರಲಿದ್ದು, ದೇಶದಲ್ಲೇ ಮಾದರಿ ಸೇವೆಯಾಗಿರಲಿದೆ ಎಂದು ಸುಧಾಕರ್ ತಿಳಿಸಿದರು.

ಕಾಮಾಲೆ ಕಣ್ಣಿನಿಂದ ನೋಡಬಾರದು:ಕಿಡಿ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಂಬ್ಯಲೆನ್ಸ್‌ ಸಮಸ್ಯೆಗೆ ಭ್ರಷ್ಟಾಚಾರ ಮೂಲ ಕಾರಣ ಎಂದು ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವರು ತಾಂತ್ರಿಕವಾಗಿ ಅವರಿಗೆ ಏನೂ ಗೊತ್ತಿಲ್ಲ. ಸ್ವಲ್ಪ ತಿಳಿದುಕೊಂಡು ಮಾತನಾಡಬೇಕು. ಕಾಮಾಲೆ ಕಣ್ಣಿಂದ ಎಲ್ಲವನ್ನೂ ನೋಡಬಾರದು ಎಂದು ಅವರು ಟೀಕಿಸಿದರು.

ಪರ್ಯಾಯ ಕ್ರಮ ಏನು?

ಈಗಾಗಲೇ ಎಲ್ಲಾ ಆಸ್ಪತ್ರೆಗಳಿಗೆ ಇಂಟರ್ ಫೆಸಿಲಿಟಿ ಟ್ರಾನ್ಸ್‌ಫರ್‌ಗಳಿಗೆ ಮೊದಲ ಆದ್ಯತೆ ನೀಡಬೇಕೆಂದು ಸೂಚಿಸಲಾಗಿದೆ. ಆಂಬ್ಯುಲೆನ್ಸ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ತಮ್ಮ ವೈಯಕ್ತಿಕ ಮೊಬೈಲ್ ಸಂಖ್ಯೆಗಳಿಗೂ ಕರೆ ಬಂದರೆ ಸ್ವೀಕರಿಸಿ ಅಗತ್ಯ ಸೇವೆಗಳನ್ನು ಮಾಡಬೇಕೆಂದು ಸೂಚಿಸಲಾಗಿದೆ. ಮ್ಯಾನ್ಯುವಲ್ ಐಡಿಗಳನ್ನು ಕ್ರಿಯೇಟ್ ಮಾಡಿ ಆ ಮೂಲಕವೂ ಜನರಿಗೆ ತುರ್ತು ಸೇವೆ ಒದಗಿಸಲು ಸೂಚನೆ ನೀಡಲಾಗಿದೆ.

ಸ್ವಯಂಚಾಲಿತ ಕಾಲ್ ಸೆಂಟರ್ ವ್ಯವಸ್ಥೆ ಮೂಲಕ ಕರೆಗಳ ವಿತರಣೆಗೆ ಪರ್ಯಾಯವಾಗಿ ಮ್ಯಾನುವಲ್ ಐಡಿಗಳನ್ನು ಸೃಷ್ಟಿಸಿ ಅಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗುತ್ತಿದೆ. ಇದರೊಂದಿಗೆ 104 ಕಾಲ್ ಸೆಂಟರ್ ನಲ್ಲಿ 108 ಆಂಬ್ಯುಲೆನ್ಸ್ ಸೇವೆಗೆ ಓವರ್ ಫ್ಲೋ ಕಾಲ್ ಸೆಂಟರ್ ಸ್ಥಾಪಿಸಲು ಸಹ ಸೂಚನೆ ನೀಡಲಾಗಿದೆ ಎಂದು ಸಚಿವ ಸಚಿವರು ತಿಳಿಸಿದ್ದಾರೆ.

ಅಧಿಕ ಸಿಬ್ಬಂದಿ ನಿಯೋಜನೆ: ಸಮಸ್ಯೆಗೆ ಸೂಕ್ತ ಕ್ರಮ

ತುರ್ತು ಸೇವೆ ಒದಗಿಸುವ 112 ಸಹಾಯವಾಣಿಯಲ್ಲಿರುವ 2ರಿಂದ 3 ಸಿಬ್ಬಂದಿ ಬದಲು ಅಲ್ಲಿಗೆ 7ರಿಂದ 8 ಸಿಬ್ಬಂದಿ ನಿಯೋಜನೆ ಮಾಡಲು ಸೂಚಿಸಲಾಗಿದೆ. ಈ ಮೂಲಕ 108 ಸಹಾಯವಾಣಿಯ ತಂಡದ ಮುಖ್ಯಸ್ಥರಿಗೆ ಕರೆಗಳನ್ನು ಡೈವರ್ಟ್ ಮಾಡಿ ಆ ಮೂಲಕ ಮ್ಯಾನ್ಯುವಲ್ ಐಡಿ ಜನರೇಟ್ ಮಾಡಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ. ಇದರ ಜೊತೆಗೆ 104 ಸಹಾಯವಾಣಿಯನ್ನು ಕೂಡ ಬಳಸಿಕೊಂಡು 108 ಸಹಾಯವಾಣಿ ಮೇಲಿನ ಒತ್ತಡ ಕಡಿಮೆ ಮಾಡಲಾಗುತ್ತಿದೆ. ಮಿಸ್ಡ್ ಕಾಲ್‌ಗಳನ್ನು ಕೂಡ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತಿದ್ದು, 108 ಸಹಾಯವಾಣಿಯಲ್ಲಿರುವ ಏಜೆಂಟ್‌ಗಳ ಸಂಖ್ಯೆಯನ್ನು ಕೂಡ ಹೆಚ್ಚಿಸಲು ಕ್ರಮ ವಹಿಸಲಾಗಿದೆ ಎಂದರು.

108 Ambulance problem action for Provide alternative service

ಆಗಿರುವ ತಾಂತ್ರಿಕ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಲು ಸಮರೋಪಾದಿಯಲ್ಲಿ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪರ್ಯಾಯ ವ್ಯವಸ್ಥೆಗಳ ಮೂಲಕ ಸೇವೆಯಲ್ಲಿ ಉಂಟಾಗಿರುವ ತಾತ್ಕಾಲಿಕ ವ್ಯತ್ಯಯವನ್ನು ಕನಿಷ್ಠ ಮಟ್ಟದಲ್ಲಿಡಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.

English summary
108 Ambulance problem in Karnataka action for Provide alternative service, said health Minister Dr. K. Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X