'ಮಾನ್ಯ ಸಿದ್ದರಾಮಯ್ಯನವರೇ. ನೀವು ರಾಜೀನಾಮೆ ನೀಡುವುದು ಯಾವಾಗ? ಕುರ್ಚಿ ಬಿಡುವ ಮುನ್ನ ವೇತನ ಕೊಡಿಸಿ'

ಬೆಂಗಳೂರು, ಮೇ 06: ಆರೋಗ್ಯ ಕವಚ 108 ಆಂಬುಲೆನ್ಸ್‌ ಸಿಬ್ಬಂದಿಗೆ ಕಳೆದ ಮೂರು ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ಆಂಬುಲೆನ್ಸ್‌ ಸಿಬ್ಬಂದಿಗಳು ಕುಟುಂಬ ನಿರ್ವಹಣೆಗೂ ಪರದಾಡುತ್ತಿದ್ದಾರೆ. ಜಿವಿಕೆ ಎಂಬ ಸಂಸ್ಥೆಯಡಿ 710 ಆಂಬುಲೆನ್ಸ್ ಕಾರ್ಯನಿರ್ವಹಿಸುತ್ತಿದ್ದು, ಅಂದಾಜು 3,600 ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕೊರೊನಾ ನಂತರ ಸಿಬ್ಬಂದಿಗೆ ಹಲವು ಬಾರಿ ವೇತನ ಪಾವತಿ ಸಮಸ್ಯೆಯಾಗುತ್ತಲೇ ಇತ್ತು. 2022 ಸೆಪ್ಟೆಂಬರ್‌ನಲ್ಲಿ ಸಿಬ್ಬಂದಿ ನ್ಯಾಯಾಲಯದ ಮೊರೆ ಹೋಗಿದ್ದರು. ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ಜಿವಿಕೆ ಮತ್ತು ಸರ್ಕಾರದ ವಿರುದ್ಧ ಸಿಬ್ಬಂದಿ ತಿರುಗಿಬಿದ್ದಿದ್ದು,ಕರ್ತವ್ಯ ನಿಲ್ಲಿಸಿ ಮುಷ್ಕರ ನಡೆಸಿದ ನಂತರ ಸಂಬಳ ನೀಡಿದ್ದರು. ಆದರೆ, ಮುಂದಿನ ಎರಡು ತಿಂಗಳಲ್ಲಿ ಸರಿಯಾಗಿ ವೇತನ ಪಾವತಿಯಾಯಿತು. ನಂತರ ಮತ್ತೆ ಸಂಬಳ ನೀಡದೆ ಸತಾಯಿಸುತ್ತಿದ್ದಾರೆ ಎಂದು ಸಿಬ್ಬಂದಿ ತಿಳಿಸಿದ್ದಾರೆ. ಅಲ್ಲದೇ ಸಂಬಳ ಆಗದ ಹಿನ್ನೆಲೆ ಇಂದು (ಮೇ 6) ರಂದು ರಾತ್ರಿ 8 ಗಂಟೆಯಿಂದ ಆಂಬ್ಯುಲೆನ್ಸ್​ ಸೇವೆ ಸ್ಥಗಿತಗೊಳ್ಳಲಿದೆ.

108 Ambulance Staff Payment Hold JDS Slams Karnataka Government

ಈ ವಿಚಾರ ತಿಳಿಯುತ್ತಿದ್ದಂತೆ ಜೆಡಿಎಸ್‌ ರಾಜ್ಯ ಘಟಕ ಟ್ವೀಟ್​ ಮಾಡಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ರಾಜ್ಯ ಕಾಂಗ್ರೆಸ್​ ಸರಕಾರಕ್ಕೆ ಜನರಿಗಿಂತ ಜನಪ್ರಿಯತೆಯ ವ್ಯಸನವೇ ಹೆಚ್ಚು. ಬರ ನಿರ್ವಹಣೆಗಿಂತ ಬೇಜವಾಬ್ದಾರಿಯೇ ಜಾಸ್ತಿ. ಗ್ಯಾರಂಟಿ ಕೊಟ್ಟು ಜನರ ಬದುಕು ಹಸನು ಮಾಡಿದ್ದೇವೆನ್ನುವ ಇವರಿಗೆ 108 ಆಂಬುಲೆನ್ಸ್ ಚಾಲಕರಿಗೆ ಸಂಬಳ ಕೊಡಲಿಕ್ಕೂ ಹಣವಿಲ್ಲ! ತಮ್ಮ ಜೀವ ಪಣಕ್ಕಿಟ್ಟು ಜನರ ಜೀವ ರಕ್ಷಿಸುವ ಈ ಚಾಲಕರಿಗೆ ಸಂಬಳದ ಗ್ಯಾರಂಟಿ ಕೊಡಲು ಸಾಧ್ಯವಾಗಿಲ್ಲ. 3 ತಿಂಗಳಿಂದ ಅವರಿಗೆ ವೇತನ ಪಾವತಿ ಮಾಡಿಲ್ಲ ಎಂದರೆ ನಾಚಿಕೆಗೇಡು!" ಎಂದು ವಾಗ್ದಾಳಿ ನಡೆಸಿದೆ.

"ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಷಣ ಬಿಗಿದಿದ್ದಾರೆ. "ರಾಜ್ಯದ ಒಬ್ಬನೇ ಒಬ್ಬ ಸರಕಾರಿ ನೌಕರ ನನ್ನ ಬಳಿ ಬಂದು ಸಂಬಳ ಪಾವತಿಯಾಗಿಲ್ಲ ಎಂದು ಹೇಳಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ" ಎಂದು ಗುಡುಗಿದ್ದರು. ಹಾಗಾದರೆ, ಮಾನ್ಯ ಸಿದ್ದರಾಮಯ್ಯನವರೇ.. ನೀವು ರಾಜೀನಾಮೆ ನೀಡುವುದು ಯಾವಾಗ? ಕುರ್ಚಿ ಬಿಡುವ ಮೊದಲು ಆಂಬುಲೆನ್ಸ್ ಚಾಲಕರಿಗೆ ವೇತನ ಕೊಡಿಸಿ" ಎಂದು ಹರಿಹಾಯ್ದರು.

ವೇತನ ಪಾವತಿ ಸಂಬಂಧ ಆಂಬ್ಯುಲೆನ್ಸ್​ ಸಿಬ್ಬಂದಿ ಜೊತೆ ಆರೋಗ್ಯ ಇಲಾಖೆ ಸಭೆ ನಡೆಸಿದೆ. ಇಲಾಖೆ ಸಂಜೆ 6 ಗಂಟೆಯವರೆಗೂ ಕಾಲಾವಕಾಶ ಕೇಳಿದೆ. ಇಲಾಖೆಯ ಏನು ತೀರ್ಮಾನ ಕೈಗೊಳ್ಳುತ್ತೆ ಅಂತ ನೋಡಿಕೊಂಡು ಆಂಬ್ಯುಲೆನ್ಸ್​ ಸಿಬ್ಬಂದಿ ಮುಂದಿನ ಹೆಜ್ಜೆ ಇಡುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+