ಕರ್ನಾಟಕದಲ್ಲಿ ಒಂದೇ ದಿನ 10959 ಮಂದಿಗೆ ಕೊರೊನಾವೈರಸ್
ಬೆಂಗಳೂರು, ಜೂನ್ 09: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೊಮ್ಮೆ 10,000 ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 10959 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 192 ಜನರು ಕೊವಿಡ್-19 ಸೋಂಕಿಗೆ ಬಲಿಯಾಗಿದ್ದು, ಇದೇ ಅವಧಿಯಲ್ಲಿ 20,246 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕರ್ನಾಟಕದಲ್ಲಿ ಬುಧವಾರದ ಅಂಕಿ ಅಂಶಗಳ ಪ್ರಕಾರ, ಒಟ್ಟು 27,28,248 ಸೋಂಕಿತ ಪ್ರಕರಣಗಳು ವರದಿಯಾಗಿದೆ. ಈವರೆಗೂ 24,80,411 ಸೋಂಕಿತರು ಗುಣಮುಖರಾಗಿದ್ದು, 32,291 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 2,15,525 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಪತ್ತೆಯಾಗಿರುವ ಒಟ್ಟು ಕೊವಿಡ್-19 ಸೋಂಕಿತ ಪ್ರಕರಣಗಳಲ್ಲಿ ರಾಜಧಾನಿ ಬೆಂಗಳೂರಿನದ್ದೇ ಸಿಂಹಪಾಲಿದೆ. ಕಳೆದ 24 ಗಂಟೆಗಳಲ್ಲಿ 2395 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 50 ಜನರು ಕೊವಿಡ್-19 ಸೋಂಕಿಗೆ ಬಲಿಯಾಗಿದ್ದು, ಇದೇ ಅವಧಿಯಲ್ಲಿ 6185 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದ ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್?
ರಾಜ್ಯದಲ್ಲಿ ಒಟ್ಟು 10959 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 96, ಬಳ್ಳಾರಿ 211, ಬೆಳಗಾವಿ 341, ಬೆಂಗಳೂರು ಗ್ರಾಮಾಂತರ 385, ಬೆಂಗಳೂರು 2395, ಬೀದರ್ 9, ಚಾಮರಾಜನಗರ 254, ಚಿಕ್ಕಬಳ್ಳಾಪುರ 268, ಚಿಕ್ಕಮಗಳೂರು 339, ಚಿತ್ರದುರ್ಗ 200, ದಕ್ಷಿಣ ಕನ್ನಡ 594, ದಾವಣಗೆರೆ 227, ಧಾರವಾಡ 275, ಗದಗ 95, ಹಾಸನ 745, ಹಾವೇರಿ 97, ಕಲಬುರಗಿ 48, ಕೊಡಗು 216, ಕೋಲಾರ 239, ಕೊಪ್ಪಳ 157, ಮಂಡ್ಯ 397, ಮೈಸೂರು 1163, ರಾಯಚೂರು 20, ರಾಮನಗರ 50, ಶಿವಮೊಗ್ಗ 562, ತುಮಕೂರು 662, ಉಡುಪಿ 413, ಉತ್ತರ ಕನ್ನಡ 312, ವಿಜಯಪುರ 158, ಯಾದಗಿರಿ 31 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.












Click it and Unblock the Notifications