11,133 ಪೌರಕಾರ್ಮಿಕರನ್ನು ಖಾಯಂಗೊಳಿಸಿದ ಸರ್ಕಾರ

ಬೆಂಗಳೂರು, ಸೆಪ್ಟೆಂಬರ್‌ 19: ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಸ್ಥಳೀಯ ಸಂಸ್ಥೆಗಳಲ್ಲಿ ಮಳೆ, ಗಾಳಿ, ಚಳಿ ಎನ್ನದೆ ನಗರ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಪೌರಕಾರ್ಮಿಕರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಇನ್ನು ಮುಂದೆ ಅವರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲಾಗುತ್ತದೆ. ಪೌರಕಾರ್ಮಿಕರನ್ನು ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕ ಮಾಡಿಕೊಳ್ಳುವ ಈಗ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಬಿ ಶ್ರೀರಾಮುಲು ಟ್ವೀಟ್‌ ಮಾಡಿದ್ದು, "ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿರುವುದು ಸ್ವಾಗತಾರ್ಹ'' ಎಂದು ಹೇಳಿದ್ದಾರೆ.

ಕೊಟ್ಟ ಭರವಸೆ ಈಡೇರಿಸುವ ಏಕೈಕ ಪಕ್ಷ

ಕೊಟ್ಟ ಭರವಸೆ ಈಡೇರಿಸುವ ಏಕೈಕ ಪಕ್ಷ

ಈ ನೌಕರರು ಈಗ 17,000 ದಿಂದ 28,980 ವೇತನ ಶ್ರೇಣಿ ಅಡಿಯಲ್ಲಿ ಸೇವೆ ಸಲ್ಲಿಸುವಂತೆ ಅವಕಾಶ ಕಲ್ಪಿಸಲಾಗಿದೆ. 11,133 ಪೌರ ಕಾರ್ಮಿಕ ಖಾಯಂಯಾತಿಯಾಗಿದ್ದು ಅನೇಕ ದಿನಗಳಿಂದ ಹೋರಾಟ ಮಾಡುತ್ತಿದ್ದ ಪೌರಕಾರ್ಮಿಕರ ಹೋರಾಟಕ್ಕೆ ನ್ಯಾಯ ಒದಗಿಸಿದಂತಾಗಿದೆ. ಈ ಪ್ರಸ್ತಾವನೆಗೆ ಅನುಮೋದನೆ ನೀಡಿದ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀಯುತ ಬಸವರಾಜ ಬೊಮ್ಮಾಯಿ ಹಾಗೂ ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಹೃತ್ಪೂರ್ವಕ ಕೃತಜ್ಞತೆಗಳು. ನುಡಿದಂತೆ ನಡೆಯುವ, ಸಾಮಾಜಿಕ ನ್ಯಾಯ ಹಾಗೂ ಜನರಿಗೆ ಕೊಟ್ಟ ಭರವಸೆ ಈಡೇರಿಸುವ ಏಕೈಕ ರಾಜಕೀಯ ಪಕ್ಷ ಎಂದರೆ ಅದು ಬಿಜೆಪಿ ಕರ್ನಾಟಕ ಮಾತ್ರ ಎಂದು ಟ್ವೀಟ್‌ ಮಾಡಿದ್ದಾರೆ.

ಕಾಮನ್ ಮ್ಯಾನ್ ಮುಖ್ಯಮಂತ್ರಿ ಬೊಮ್ಮಾಯಿ

ಕಾಮನ್ ಮ್ಯಾನ್ ಮುಖ್ಯಮಂತ್ರಿ ಬೊಮ್ಮಾಯಿ

ನಗರಸಭೆ, ಪುರಸಭೆ ಮತ್ತು ಇತರ ಪಟ್ಟಣ ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಇಂದು ತನ್ನ ಅನುಮೋದನೆ ನೀಡಿದೆ. ಈ ಮೂಲಕ ಕಾಮನ್ ಮ್ಯಾನ್ ಮುಖ್ಯಮಂತ್ರಿ ಎಂದೇ ಜನಮೆಚ್ಚುಗೆ ಪಡೆದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ರಾಜ್ಯ ಸರಕಾರವು ಬಡವರ ಪರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಸಂತಸ ಸೂಚಿಸಿದ್ದಾರೆ.

 17,000-28,980 ವೇತನ ಶ್ರೇಣಿ ಅಡಿಯಲ್ಲಿ ಸೇವೆ

17,000-28,980 ವೇತನ ಶ್ರೇಣಿ ಅಡಿಯಲ್ಲಿ ಸೇವೆ

ಸಾಮಾಜಿಕ ನ್ಯಾಯದ ದಿಗ್ವಿಜಯ ಯಾತ್ರೆಯನ್ನು ಕರ್ನಾಟಕದ ಬಿಜೆಪಿ ಸರ್ಕಾರ ಮುಂದುವರಿಸಿದೆ. ಈ ಪ್ರಸ್ತಾವಕ್ಕೆ ಅನುಮೋದನೆ ನೀಡಿದ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸದಸ್ಯರೆಲ್ಲರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆಗಳು ಎಂದು ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಈ ನೌಕರರು ಈಗ ರೂ. 17,000-28,980 ವೇತನ ಶ್ರೇಣಿ ಅಡಿಯಲ್ಲಿ ಸೇವೆ ಸಲ್ಲಿಸುವಂತೆ ಅವಕಾಶ ಕಲ್ಪಿಸಲಾಗಿದೆ.

ಪೌರಕಾರ್ಮಿಕರ ಹೋರಾಟಕ್ಕೆ ನ್ಯಾಯ

ಪೌರಕಾರ್ಮಿಕರ ಹೋರಾಟಕ್ಕೆ ನ್ಯಾಯ

11,133 ಪೌರ ಕಾರ್ಮಿಕ ಖಾಯಮಾತಿಯಾಗಿದ್ದು ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಯಾಗಿದೆ. ಇದರಿಂದ ಸುದೀರ್ಘ ಕಾಲದಿಂದ ಹೋರಾಟ ಮಾಡುತ್ತಿದ್ದ ಪೌರಕಾರ್ಮಿಕರ ಹೋರಾಟಕ್ಕೆ ನ್ಯಾಯ ಒದಗಿಸಿದಂತಾಗಿದೆ ಎಂದು ಅವರು ಮೆಚ್ಚುಗೆ ಸೂಚಿಸಿದ್ದಾರೆ. ಈ ನಿರ್ಧಾರಕ್ಕಾಗಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಸಂಪುಟದ ಸದಸ್ಯರನ್ನು ಮತ್ತೊಮ್ಮೆ ಅಭಿನಂದಿಸುವುದಾಗಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+